ಹಿಜಾಬ್ ವಿವಾದ: ವಿಚಾರಣೆ ಮುಗಿಯುವವರೆಗೆ ಧಾರ್ಮಿಕ ಗುರುತು ಬಳಸುವಂತಿಲ್ಲ; HC ಮಧ್ಯಂತರ ಆದೇಶ
Team Udayavani, Feb 10, 2022, 4:49 PM IST
ಬೆಂಗಳೂರು: ಏಕಸದಸ್ಯ ಪೀಠದಿಂದ ವಿಸ್ತ್ರತ ಪೀಠಕ್ಕೆ ವರ್ಗಾವಣೆಯಾದ ರಾಜ್ಯದ ಶಾಲಾ ಕಾಲೇಜುಗಳ ಹಿಜಾಬ್- ಕೇಸರಿ ಶಾಲು ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಇಂದು ಕೈಗೆತ್ತಿಕೊಂಡಿತು. ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಸೋಮವಾರಕ್ಕೆ ವಿಚಾರಣೆ ಮುಂದೂಡಲಾಗಿದೆ.
ಶಿಕ್ಷಣ ಸಂಸ್ಥೆಗಳು ತಕ್ಷಣ ಕಾರ್ಯಾರಂಭ ಮಾಡಲಿ. ಅರ್ಜಿಗಳ ವಿಚಾರಣೆ ಮುಗಿಯುವವರೆಗೆ ಯಾರೊಬ್ಬರೂ ಯಾವುದೇ ಧಾರ್ಮಿಕ ಗುರುತುಗಳನ್ನು (ಹಿಜಾಬು ಮತ್ತು ಶಾಲು) ಬಳಸುವಂತಿಲ್ಲ ಎಂದು ಸೂಚಿಸಿದ ಹೈಕೋರ್ಟ್ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ಶಿಕ್ಷಣ ಸಂಸ್ಥೆಗಳು ಹಿಜಾಬ್ ಧರಿಸಿ ಕಾಲೇಜಿಗೆ ಬರದಂತೆ ನಿರ್ಬಂಧಿಸಿರುವ ಕ್ರಮ ಹಾಗೂ ಸಮವಸ್ತ್ರ ಸಂಹಿತೆ ಸಂಬಂಧ ರಾಜ್ಯ ಸರಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಉಡುಪಿಯ ಸರಕಾರಿ ಬಾಲಕಿಯರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಇತರ ಕೆಲವು ವಿದ್ಯಾರ್ಥಿನಿಯರ ಪರ ಪೋಷಕರು ಸಲ್ಲಿಸಿರುವ 3 ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾ.ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಮತ್ತು ನ್ಯಾ.ಜೈಬುನ್ನಿಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಇಂದು (ಫೆ.10) ಮಧ್ಯಾಹ್ನ 2.30ಕ್ಕೆ ಆರಂಭಿಸಿತು.
ಅರ್ಜಿದಾರರ ಪರ ವಕೀಲರಾದ ಸಂಜಯ ಹೆಗ್ಡೆ, ದೇವದತ್ ಕಾಮತ್ ವಾದ ಆರಂಭಿಸಿದರು. ಪ್ರಾರಂಭದಲ್ಲಿ ಮುಖ್ಯ ನ್ಯಾ.ರಿತುರಾಜ್ ಅವಸ್ಥಿ ಅವರು ಪ್ರಕರಣದ ಹಿನ್ನೆಲೆಯನ್ನು ವಿವರಿಸುವಂತೆ ಸೂಚಿಸಿದರು. ಅರ್ಜಿದಾರರ ಪರ ವಕೀಲ ಸಂಜಯ್ ಹೆಗ್ಡೆ ಅವರು ಘಟನೆಯನ್ನು ಕೋರ್ಟ್ ಗೆ ವಿವರಿಸಿದರು.
2021 ಡಿಸೆಂಬರ್ ನಿಂದಲೇ ಅರ್ಜಿದಾರ ವಿದ್ಯಾರ್ಥಿನಿಯರೊಂದಿಗೆ ತಾರತಮ್ಯ ಮಾಡಲಾಗುತ್ತಿದೆ. ಶಿರವಸ್ತ್ರ ತಮ್ಮ ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆ ಆಗಿದೆ ಎಂದು ವಿದ್ಯಾರ್ಥಿಗಳ ವಾದವಾಗಿದೆ ಎಂದರು.
ಸ್ಕಾರ್ಫ್ ಧರಿಸುವುದು ಮೂಲಭೂತ ಹಕ್ಕುಗಳೊಳಗೆ ಬರುತ್ತದೆಯೇ ಎಂಬ ವಿಷಯವನ್ನು ನಾವು ಪರಿಗಣಿಸುತ್ತಿದ್ದೇವೆ. ಹಿಜಾಬ್ ಧರಿಸುವುದು ಧಾರ್ಮಿಕ ಆಚರಣೆಯ ಅತ್ಯಗತ್ಯ ಭಾಗವೇ ಎಂಬುದನ್ನು ಸಹ ನಾವು ಪರಿಗಣಿಸುತ್ತಿದ್ದೇವೆ ಎಂದು ಕೋರ್ಟ್ ಹೇಳಿತು.
ಕರ್ನಾಟಕ ಶಿಕ್ಷಣ ಕಾಯ್ದೆಯಲ್ಲಿ ಸಮವಸ್ತ್ರದ ಬಗ್ಗೆ ಯಾವುದೇ ವಿಶೇಷ ನಿಬಂಧನೆಗಳಿಲ್ಲ. ಏಕರೂಪದ ಸಂಹಿತೆಯ ಉಲ್ಲಂಘನೆಗಾಗಿ ದಂಡ ವಿಧಿಸಲು ಯಾವುದೇ ಅವಕಾಶವಿಲ್ಲ. ಕರ್ನಾಟಕ ಶಿಕ್ಷಣ ಕಾಯ್ದೆಯಲ್ಲಿ ನಿರ್ವಹಣೆಗೆ ದಂಡಗಳು ಹೆಚ್ಚಾಗಿವೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಸಂಜಯ್ ಹೆಗ್ಡೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.