ನ್ಯಾಯಾಲಯ ಸಂಕೀರ್ಣ ಉದ್ಘಾಟನೆಗೆ ಸಜ್ಜು

6 ಕೋ.ರೂ.ಗಳ ಕಟ್ಟಡ; ಹೆಚ್ಚುವರಿ ಜಿಲ್ಲಾ ನ್ಯಾಯಾಲಯ, ವಕೀಲರ ಸಂಘದ ಕಚೇರಿ

Team Udayavani, Feb 10, 2022, 5:45 PM IST

ನ್ಯಾಯಾಲಯ ಸಂಕೀರ್ಣ ಉದ್ಘಾಟನೆಗೆ ಸಜ್ಜು

ಕುಂದಾಪುರ: ಇಲ್ಲಿನ ಹೊಸ ಬಸ್‌ ನಿಲ್ದಾಣದ ಬಳಿಯಲ್ಲಿ ನ್ಯಾಯಾ ಲಯ ಸಮೀಪದಲ್ಲಿ ನಿರ್ಮಾಣವಾದ ನ್ಯಾಯಾಲಯ ಹಾಗೂ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನೆಗೆ ಸಜ್ಜಾಗಿದೆ.

ಫೆ. 19ರಂದು ಸರ್ವೋಚ್ಚ ನ್ಯಾಯಾ ಲಯದ ನ್ಯಾಯಮೂರ್ತಿ ಗಳಿಂದ ಉದ್ಘಾಟನೆಯಾಗಲಿದೆ. ರಾಜ್ಯ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಿತು ರಾಜ್‌ ಅವಾಸ್ತಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಅಂಗಾರ ಅವರು ಭಾಗವಹಿಸಲಿದ್ದಾರೆ.

3 ವರ್ಷಗಳ ಒಳಗೆ
6 ಕೋ. ರೂ. ವೆಚ್ಚದಲ್ಲಿ ನಿರ್ಮಾಣ ವಾದ ಈ ಕಟ್ಟಡಕ್ಕೆ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಎಸ್‌. ಅಬ್ದುಲ್‌ ನಜೀರ್‌ ಅವರು 2019ರ ಜೂ. 8ರಂದು ಶಿಲಾನ್ಯಾಸ ಮಾಡಿ ದ್ದರು. ಈಗ ಉದ್ಘಾಟನೆಗೂ ಅವರೇ ಆಗಮಿಸಲಿದ್ದಾರೆ.
ಕೋವಿಡ್‌ ಲಾಕ್‌ಡೌನ್‌ ಇತ್ಯಾದಿ ಎಲ್ಲ ಸಂಕಷ್ಟಗಳ ನಡುವೆಯೂ ಬೃಹತ್‌ ಸಂಕೀರ್ಣ 3 ವರ್ಷಗಳ ಒಳಗೆ ನಿರ್ಮಾಣವಾಗಿದೆ. ಕೆಂಬಣ್ಣದ ಬೃಹತ್‌ ಕಟ್ಟಡ ಈ ಪರಿಸರದಲ್ಲಿ ತಲೆ ಎತ್ತಿದ್ದು ನಗರಕ್ಕೊಂದು ಮಕುಟಮಣಿಯಂತೆ ಕಾಣುತ್ತಿದೆ. ನ್ಯಾಯಾಲಯಕ್ಕೆ ಬರುವ ಸಾರ್ವಜನಿಕರ, ವಕೀಲರ ವಾಹನಗಳು ನಿಲ್ಲುವಲ್ಲಿ ಈಗಾಗಲೇ ಪುರಸಭೆ ಇಂಟರ್‌ಲಾಕ್‌ ಅಳವಡಿಸಿದೆ.

ಹಳೆ ಕಟ್ಟಡ
ಈಗ ಇರುವ ಕಟ್ಟಡದಲ್ಲಿ ಪ್ರಸ್ತುತ 5 ನ್ಯಾಯಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ವಕೀಲರ ಸಂಘವೂ ಇದೇ ಕಟ್ಟಡದಲ್ಲಿದೆ. ಈ ಕಟ್ಟಡದಿಂದ 2 ನ್ಯಾಯಾಲಯಗಳು ಹೊಸ ಕಟ್ಟಡಕ್ಕೆ ಸ್ಥಳಾಂತರವಾಗಲಿದೆ. ಉಳಿಕೆ 3 ಕೋರ್ಟ್‌ ಗಳು ಹಳೆ ಕಟ್ಟಡದಲ್ಲೇ ಕಾರ್ಯಭಾರ ಮುಂದುವರಿಸಲಿವೆ. ಬೈಂದೂರು ತಾ| ನ್ಯಾಯಾಲಯ ಪ್ರತ್ಯೇಕ ಆದ ಕಾರಣ ಕುಂದಾಪುರದಲ್ಲಿ ಅಲ್ಲಿನ ಪ್ರಕ ರ ಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಒಟ್ಟಿನಲ್ಲಿ ಎರಡೂ ಕಟ್ಟಡಗಳಲ್ಲಿ ನ್ಯಾಯಾಲಯಗಳು ಕಾರ್ಯನಿರ್ವಹಿಸಲಿವೆ.

ನೂತನ ಕೋರ್ಟ್‌ ಮಂಜೂರು?
ಕುಂದಾಪುರಕ್ಕೆ ಕೌಟುಂಬಿಕ ನ್ಯಾಯಾ ಲಯದ ಅಗತ್ಯ ಇದ್ದು ಮಂಜೂರು ಮಾಡಬೇಕೆಂದು ಬೇಡಿಕೆ ಸಲ್ಲಿಸಲಾಗಿದೆ. ಅಷ್ಟಲ್ಲದೇ ಸಿವಿಲ್‌ ಜಡ್ಜ್ ಸೀನಿಯರ್‌ ಡಿವಿಜನ್‌ ಕೋರ್ಟ್‌ ಕೂಡ ಬೇಕೆಂದು ಬೇಡಿಕೆ ಇಡಲಾಗಿದೆ. ಈ ಪೈಕಿ ಒಂದು ನ್ಯಾಯಾಲಯ ಮಂಜೂರಾಗುವ ನಿರೀಕ್ಷೆಯಿದೆ. ಯಾವುದು ಮಂಜೂ ರಾಗಲಿದೆ ಎನ್ನುವ ಕುರಿತು ಖಚಿತ ಇಲ್ಲ.

ಏನೆಲ್ಲ ಇದೆ
ನೆಲ ಅಂತಸ್ತು ಹಾಗೂ ಅದರ ಮೇಲೆ 2 ಅಂತಸ್ತುಳ್ಳ ವಿಶಾಲ ಕಟ್ಟಡ ಇದಾಗಿದೆ. ಸುಮಾರು 6,500 ಚದರ ಅಡಿ ವಿಸ್ತೀರ್ಣ ಹೊಂದಿದೆ. ಕೆಳ ಅಂತಸ್ತಿನಲ್ಲಿ ವಕೀಲರ ಸಂಘದ ಚಟುವಟಿಕೆಗಳಿಗೆ ಮೀಸಲಿಡಲಾಗಿದೆ. ಮೇಲಂತಸ್ತಿನಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಹಾಗೂ ಸೀನಿಯರ್‌ ಸಿವಿಲ್‌ ಕೋರ್ಟ್‌, ನ್ಯಾಯಾಧೀಶರ ಕಚೇರಿ ಕಾರ್ಯನಿರ್ವಹಿಸಲಿದೆ. ಮಹಡಿಗೆ ಹೋಗಲು 2 ಲಿಫ್ಟ್ ವ್ಯವಸ್ಥೆ ಇದೆ. ಹಳೆ ನ್ಯಾಯಾಲಯದಲ್ಲಿ ಲಿಫ್ಟ್ ಇಲ್ಲ.

ಸಿದ್ಧವಾಗಿದೆ
ಎಲ್ಲರ ಬೇಡಿಕೆಯಂತೆ ಕಟ್ಟಡ ಮಂಜೂರಾಗಿದ್ದು ಕಾಮಗಾರಿ ಪೂರ್ತಿಯಾಗಿ ಉದ್ಘಾಟನೆಗೆ ಸಜ್ಜಾಗಿದೆ. ನ್ಯಾಯಾಲಯ ಹಾಗೂ ವಕೀಲರ ಸಂಘ ಈ ವಿಶಾಲವಾದ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಿದೆ.
-ಸಳ್ವಾಡಿ ನಿರಂಜನ ಹೆಗ್ಡೆ, ಅಧ್ಯಕ್ಷ, ಕುಂದಾಪುರ ತಾ| ವಕೀಲರ ಸಂಘ

ಟಾಪ್ ನ್ಯೂಸ್

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.