ನಿರ್ಧಾರ ತನ್ನದು, ಶ್ರೇಯಸ್ಸು ಅನ್ಯರಿಗೆ: ಅಜಿಂಕ್ಯ ರಹಾನೆ
Team Udayavani, Feb 11, 2022, 5:40 AM IST
ಮುಂಬಯಿ: ಕಳೆದ ವರ್ಷದ ಆಸ್ಟ್ರೇಲಿಯ ಸರಣಿಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡವನು ನಾನು, ಆದರೆ ಇದರ ಯಶಸ್ಸಿನ ಶ್ರೇಯಸ್ಸು ಬೇರೆಯವರ ಪಾಲಾಗಿದೆ ಎಂದು ಅಜಿಂಕ್ಯ ರಹಾನೆ ಕಟುವಾಗಿ ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ರಹಾನೆ, “ಆಸ್ಟ್ರೇಲಿಯ ಸರಣಿಯಲ್ಲಿ ನಾನು ಮಾಡಿದ್ದೇನು ಎಂಬುದರ ಬಗ್ಗೆ ನನಗೆ ಸ್ಪಷ್ಟ ಅರಿವಿದೆ. ಅಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡವನು ನಾನು. ಆದರೆ ಆ ಯಶಸ್ಸಿನ ಶ್ರೇಯಸ್ಸನ್ನು ಬೇರೆಯವರು ತೆಗೆದುಕೊಂಡರು’ ಎಂದು ಯಾರ ಹೆಸರನ್ನೂ ಉಲ್ಲೇಖೀಸಿದೆ ಹೇಳಿದರು. ಆದರೆ ಇದು ಅಂದಿನ ಕೋಚ್ ರವಿಶಾಸ್ತ್ರಿಗೆ ಎಸೆದ ಬೌನ್ಸರ್ ಎಂಬುದರಲ್ಲಿ ಅನುಮಾನವಿಲ್ಲ.
ಐತಿಹಾಸಿಕ ಸರಣಿ
ಅಂದು ಆಸ್ಟ್ರೇಲಿಯ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ 36 ರನ್‌ಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತ್ತು. ಬಳಿಕ ನಾಯಕ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಸರಣಿಯಿಂದ ಹಿಂದೆ ಸರಿದಿದ್ದರು. ಇಂಥ ಸಂಕಷ್ಟದ ಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತ ರಹಾನೆ, ಉಳಿದ ಮೂರು ಪಂದ್ಯಗಳಲ್ಲಿ ಎರಡನ್ನು ಗೆದ್ದು ಇತಿಹಾಸ ನಿರ್ಮಿಸಿದ್ದರು.
ಇದನ್ನೂ ಓದಿ:ಪ್ರೊ ಕಬಡ್ಡಿ: ಬೆಂಗಾಲ್ ವಾರಿಯರ್ -ದಬಾಂಗ್ ದಿಲ್ಲಿ ಪಂದ್ಯ ಟೈ
ಕಳೆದ ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್ ಸರಣಿಯಲ್ಲಿ ನಿರಾಸೆ ಮೂಡಿಸಿದ್ದ ರಹಾನೆ, ಭಾರತ ಪರ ತಮ್ಮ ಕೊನೆಯ ಟೆಸ್ಟ್ ಆಡಿ ಮುಗಿಸಿದ್ದಾರೆ ಎಂಬ ಟೀಕೆಗೆ ಒಳಗಾಗಿದ್ದರು. ಈ ನಡುವೆ ಬಿಸಿಸಿಐ ರಹಾನೆ ಮತ್ತು ಪೂಜಾರ ಅವರಿಗೆ ರಣಜಿ ಟ್ರೋಫಿಯಲ್ಲಿ ಆಡಿ ಲಯ ಕಂಡುಕೊಳ್ಳುವಂತೆ ಸೂಚಿಸಿದೆ.
“ನನ್ನ ಕ್ರಿಕೆಟ್ ಬದುಕು ಅಂತ್ಯಗೊಂಡಿದೆ ಎಂದು ಹೇಳುವವರನ್ನು ನೋಡಿ ನಗಬೇಕಷ್ಟೇ. ಕ್ರೀಡೆ ಬಗ್ಗೆ ತಿಳಿವಳಿಕೆಯುಳ್ಳವರು ಇಂಥ ಮಾತನ್ನು ಆಡುವುದಿಲ್ಲ. ಆಸ್ಟ್ರೇಲಿಯದಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ರೆಡ್ ಬಾಲ್ ಕ್ರಿಕೆಟ್‌ನಲ್ಲಿ ನನ್ನ ಕೊಡುಗೆ ಏನು ಎಂಬುದನ್ನೂ ತಿಳಿದಿ¨ªಾರೆ. ಕ್ರೀಡೆ ಬಗ್ಗೆ ಒಲವು ಇರುವವರು ಸಮಯೋಚಿತವಾಗಿ ಮಾತನಾಡುತ್ತಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.