ಯೋಜನೆ ಅನುಷ್ಠಾನಕ್ಕೆ ಸಮನ್ವಯತೆ ಅವಶ್ಯ: ಯಲ್ಲಪ್ಪ


Team Udayavani, Feb 11, 2022, 11:55 AM IST

7project

ಆಳಂದ: ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ಸಮರ್ಪಕ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಇಲಾಖೆ ಅಧಿಕಾರಿಗಳ ನಡುವೆ ಪರಸ್ಪರ ಸಮನ್ವಯತೆ ಸಾಧಿಸುವುದು ಅವಶ್ಯಕವಾಗಿದೆ ಎಂದು ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ ಹೇಳಿದರು.

ತಹಶೀಲ್ದಾರ್‌ ಕಚೇರಿಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆಗಳ ಅನುಷ್ಠಾನಕ್ಕಾಗಿ ಕರೆದ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯವಿವಾಹ ತಡೆಗೆ ಒಂದೇ ಇಲಾಖೆ ಜವಾಬ್ದಾರಿಯಲ್ಲ. ಸಂಬಂಧಿತ ಎಲ್ಲ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಬೇಕು ಎಂದರಲ್ಲದೇ, ಮಕ್ಕಳ ಹಕ್ಕುಗಳ ಸಮಿತಿ ಪಂಚಾಯಿತಿ ಮಟ್ಟದಲ್ಲಿ ರಚಿಸಬೇಕು ಎಂದು ತಾಪಂ ಅಧಿಕಾರಿಗಳಿಗೆ ಸೂಚಿಸಿದರು.

ಆಕಸ್ಮಿಕವಾಗಿ ನಡೆಯುವ ಬಾಲ್ಯ ವಿವಾಹವಾದ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರೇ ವಯಸ್ಸಿನ ದೃಢೀಕರಣ ಪತ್ರ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಹಾಜರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಬಸಂತಾಬಾಯಿ ಅಕ್ಕಿ ಸಲಹೆ ನೀಡಿದರು.

ತಾಪಂ ಇಒ ಡಾ| ಸಂಜಯ ರೆಡ್ಡಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯೋಜನೆ ಅನುಷ್ಠಾನಕ್ಕೆ ಪೂರಕವಾಗುವಂತೆ ಮಕ್ಕಳ ಕಾವಲು ಸಮಿತಿ ರಚನೆ, ಮಕ್ಕಳ ಹಕ್ಕುಗಳ ಸಭೆ ನಡೆಸುವುದು ಹಾಗೂ ಶಾಲೆ ಮಟ್ಟದಲ್ಲಿ ಕ್ಲಬ್‌ ರಚನೆಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿ, ಸಮಸ್ಯೆ ಇತ್ಯರ್ಥಕ್ಕೆ ಆದೇಶಿಸಲಾಗುವುದು ಎಂದು ತಿಳಿಸಿದರು.

ಸಿಡಿಪಿಒ ಶಿವಮೂರ್ತಿ ಕುಂಬಾರ ಮಾತನಾಡಿ, ಪ್ರಧಾನಮಂತ್ರಿ ಮಾತೃ ವಂದನ ಯೋಜನೆ ಅಡಿಯಲ್ಲಿ ಯೋಜನೆ ಪ್ರಾರಂಭದಿಂದ 14051 ಫಲಾನುಭವಿಗಳು ಲಾಭ ಪಡೆದಿದ್ದಾರೆ ಎಂದರು. ಬಾಲಕಾರ್ಮಿಕ ತಡೆ ಜಾಗೃತಿ ಕುರಿತು ತಹಶೀಲ್ದಾರರು ಪೋಸ್ಟರ್‌ ಬಿಡುಗಡೆಗೊಳಿಸಿದರು.

ಸಮಾಜ ಕಲ್ಯಾಣಾಧಿಕಾರಿ ಮೋನಮ್ಮ ಸುತಾರ, ಕ್ಷೇತ್ರ ಪಿಆರ್‌ಇಡಿ ಸುಭಾಶ್ಚಂದ್ರ, ಪಿಎಸ್‌ಐ ತಿರುಮಲ್ಲೇಶ, ಸಂತೋಷ ಕುಲಕರ್ಣಿ, ಪುರಸಭೆ ವ್ಯವಸ್ಥಾಪಕ ಶಂಭುಲಿಂಕ ಕಿನ್ನೆ, ಸುರೇಖಾ, ಬೇಬಿನಂದಾ ಪಾಟೀಲ, ಮೇಲ್ವಿಚಾರಕಿ ಮೀನಾಕ್ಷಿ ಹಿರೇಮಠ, ಭಾಗೀರಥಿ ಯಲಶೆಟ್ಟಿ, ಕವಿತಾ ಮುಚ್ಚಳಂಬಿ, ನೇಹಾ ಜಾಗೀದಾರ್‌, ಮಹಾದೇವ ವಚ್ಚೇ, ಕಸ್ತೂರಬಾಯಿ ಮುನ್ನೋಳ್ಳಿ ಇದ್ದರು.

ಟಾಪ್ ನ್ಯೂಸ್

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.