ಪಾರಂಪರಿಕ ಶೈಲಿಯ ಡಿಸಿ ಕಚೇರಿ ಸಂಕೀರ್ಣ ಕಾಮಗಾರಿಗೆ ಗ್ರಹಣ!

ಅನುದಾನ ವಿಳಂಬ; ಹೆಚ್ಚುವರಿ ಮೊತ್ತಕ್ಕೆ ಇನ್ನೂ ಸಿಗದ ಅನುಮೋದನೆ

Team Udayavani, Feb 11, 2022, 5:24 PM IST

ಪಾರಂಪರಿಕ ಶೈಲಿಯ ಡಿಸಿ ಕಚೇರಿ ಸಂಕೀರ್ಣ ಕಾಮಗಾರಿಗೆ ಗ್ರಹಣ!

ಪಡೀಲ್‌: ಆಕರ್ಷಕ ಪಾರಂಪ ರಿಕ ಕಟ್ಟಡ ಶೈಲಿಯ ಪಡೀಲ್‌ನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗಳ ಸಂಕೀರ್ಣ ನಿರ್ಮಾಣಕ್ಕೆ ಅನುದಾನ ಕೊರತೆ ಎದುರಾದ ಹಿನ್ನೆಲೆಯಲ್ಲಿ ಕಾಮಗಾರಿ ನಿಧಾನವಾಗಿದೆ!

ಸಂಕೀರ್ಣದ ಸಂಪೂರ್ಣ ಕಾಮಗಾರಿ ಮುಗಿಸಲು ಎರಡನೇ ಹಂತದ ಯೋಜನೆ ಸಿದ್ಧಪಡಿಸಲಾಗಿದ್ದು, ಅದಕ್ಕೆ 29 ಕೋಟಿ ರೂ. ಅಂದಾಜು ಪಟ್ಟಿ ತಯಾರಿಸಿ, ಸರಕಾರಕ್ಕೆ ಕಳುಹಿಸಿ ಕೆಲವು ತಿಂಗಳು ಕಳೆದಿದೆ. ಆದರೆ ಸರಕಾರದಲ್ಲಿ ಇನ್ನೂ ಅನುಮೋದನೆ ದೊರಕಿಲ್ಲ. ಹೀಗಾಗಿ ಕಾಮಗಾರಿಗೆ ವೇಗ ನೀಡಲು ಸಾಧ್ಯವಾಗಿಲ್ಲ. ಬಹುತೇಕ ಕಟ್ಟಡ, ಮೆಲ್ಛಾವಣಿ, ಬಾಗಿಲು ರೇಲಿಂಗ್‌ ಕಾಮಗಾರಿ ಮುಗಿ ದಿದೆ. 2ನೇ ಹಂತದ ಕಾಮಗಾರಿಯಲ್ಲಿ ಸಂಪೂರ್ಣ ಕಟ್ಟಡದ ಫಿನಿಶಿಂಗ್‌, 2 ಲಿಫ್ಟ್‌ ಅಳವಡಿಕೆ, ಸಭಾಂಗಣದಲ್ಲಿ ಎಸಿ, ಕುರ್ಚಿ ಸಹಿತ ಒಟ್ಟು ಪಿಠೊಪಕರಣ, ಕೇಬಲ್‌ ನೆಟ್‌ವರ್ಕ್‌, ಪೈಂಟಿಂಗ್‌, ಕಟ್ಟಡದ ಪಕ್ಕದ ಮಳೆ ಚರಂಡಿ ಅಭಿವೃದ್ಧಿ, ಆವರಣ ಗೋಡೆ, ಸಂಪೂರ್ಣ ಇಂಟರ್‌ಲಾಕ್‌ ಅಳವಡಿಸಿ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದೆ. ಸರಕಾರ 29 ಕೋ.ರೂ. ವೆಚ್ಚದ ಅಂದಾಜು ಪಟ್ಟಿಗೆ ಅನುಮೋದನೆ ನೀಡಿದರೆ ಟೆಂಡರ್‌ ಪ್ರಕ್ರಿಯೆ ಮುಗಿದು ಕಾಮಗಾರಿ ಮುಗಿಸಲು 1 ವರ್ಷ ಬೇಕಾಗ ಬಹುದು.

2018ರಲ್ಲಿ ಆರಂಭ
2014ರಲ್ಲಿ ನೂತನ ಡಿಸಿ ಕಚೇರಿ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ದೊರಕಿತ್ತು. ಅರಣ್ಯ ಇಲಾಖೆ ಜಾಗದ ಹಸ್ತಾಂತರ, ಮರ ಕಡಿಯುವ ವಿರುದ್ಧ ಪರಿಸರವಾದಿಗಳು ನ್ಯಾಯಾಲಯದ ಮೊರೆ ಹೋಗಿದ್ದರಿಂದ ಚೆನ್ನೈಯ ಹಸಿರು ಪೀಠದಲ್ಲಿ ವ್ಯಾಜ್ಯ ಮುಗಿದು, 2018ರ ಮಾರ್ಚ್‌ ತಿಂಗಳಲ್ಲಿ ಗೃಹ ನಿರ್ಮಾಣ ಮಂಡಳಿಯು ಕಾಮಗಾರಿ ಆರಂಭಿಸಿತ್ತು. ಪ್ರಥಮ ಹಂತದ ಒಟ್ಟು 55 ಕೋಟಿ ರೂ. ಮೊತ್ತದಲ್ಲಿ 37 ಕೋ. ರೂ. ಬಿಡುಗಡೆಯಾಗಿದ್ದು, ಉಳಿಕೆ ಹಣ ಗುತ್ತಿಗೆದಾರರಿಗೆ ಬಿಡುಗಡೆಗೆ ಬಾಕಿ ಇದೆ. ಇಲ್ಲಿ ಸುಮಾರು 50 ಕೋಟಿ ರೂ. ಮೊತ್ತದ ಕಾಮಗಾರಿ ನಡೆದಿದೆ. ಸರಕಾರದ ವಿವಿಧ ಇಲಾಖೆಗಳು ಅನುಮೋದನೆ ನೀಡುವಾಗ ತಡ ಮಾಡಿದ್ದರಿಂದ ಕಾಮಗಾರಿ ವಿಳಂಬ ವಾಯಿತು ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

2.26 ಲಕ್ಷ ಚದರ ಅಡಿ ಕಟ್ಟಡ
ಒಟ್ಟು 2.26 ಲಕ್ಷ ಚದರ ಅಡಿ ಕಟ್ಟಡದಲ್ಲಿ ಕಂದಾಯ ಇಲಾಖೆ ಕಚೇರಿಗಳ ಜತೆಯಲ್ಲಿ ಸುಮಾರು 38 ಇಲಾಖೆಗಳ ಕಚೇರಿಗಳು ಇಲ್ಲಿಗೆ ಬರಲಿವೆ. ಮಿನಿ ಸಭಾಂಗಣ, ಜಿಲ್ಲಾಧಿಕಾರಿ ಕೋರ್ಟ್‌ ಹಾಲ್‌, ಸಚಿವರು, ಸಂಸದರಿಗೆ ಕಚೇರಿ, ಕ್ಯಾಂಟಿನ್‌ ಮತ್ತಿತರ ಸೌಲಭ್ಯವಿವೆ. ಸುಮಾರು 200 ವಾಹನ ಪಾರ್ಕಿಂಗ್‌ ವ್ಯವಸ್ಥೆ ಇರಲಿದೆ.

ಅನುದಾನದ ನಿರೀಕ್ಷೆ
ಪಡೀಲ್‌ನಲ್ಲಿ ನೂತನ ಜಿಲ್ಲಾಧಿ ಕಾರಿ ಕಚೇರಿ ಕಾಮಗಾರಿ ನಡೆಯು ತ್ತಿದೆ. ಆದರೆ ಮುಂದಿನ ಕಾಮಗಾರಿಗೆ ಹೆಚ್ಚುವರಿ 29 ಕೋ.ರೂ. ಅಗತ್ಯವಿದ್ದು, ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾ ಗಿದೆ. ಅದು ಬಿಡುಗಡೆ ಬಳಿಕ ಈ ಕಾಮಗಾರಿಗಳಿಗೆ ವೇಗ ದೊರೆಯಲಿದೆ.
-ಡಾ| ರಾಜೇಂದ್ರ ಕೆ.ವಿ., ಜಿಲ್ಲಾಧಿಕಾರಿ ದ.ಕ.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.