ಮೆಕ್ಕೆಜೋಳ ಇ-ಟೆಂಡರ್‌ಗೆ ಚಾಲನೆ

ಎಪಿಎಂಸಿಗಳತ್ತ ಬರದೇ ತಮಗೆ ಅನುಕೂಲಕರ ಬೆಲೆ ಸಿಕ್ಕ ಕಡೆಯಲ್ಲಿ ಮಾರಾಟ ಮಾಡುತ್ತಿದ್ದರು.

Team Udayavani, Feb 11, 2022, 6:29 PM IST

ಮೆಕ್ಕೆಜೋಳ ಇ-ಟೆಂಡರ್‌ಗೆ ಚಾಲನೆ

ಹಾವೇರಿ: ನಗರದ ಎಪಿಎಂಸಿಯಲ್ಲಿ ಇ-ಟೆಂಡರ್‌ ಮೂಲಕ ಮೆಕ್ಕೆಜೋಳ, ಜೋಳ, ಸೋಯಾಬಿನ್‌ ಖರೀದಿ ಪ್ರಕ್ರಿಯೆಗೆ ಗುರುವಾರ ಟೆಂಡರ್‌ಗೆ ಇಟ್ಟಿದ್ದ ಮೆಕ್ಕೆಜೋಳ ಚೀಲಗಳಿಗೆ ಪೂಜೆ ಸಲ್ಲಿಸುವ ಮೂಲಕ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ ಚಾಲನೆ ನೀಡಿದರು.

ಈವರೆಗೆ ಪರಸ್ಪರ ಒಪ್ಪಂದದ ಮೂಲಕ ಸ್ಥಳೀಯ ಎಪಿಎಂಸಿಯಲ್ಲಿ ಮಾರಾಟವಾಗುತ್ತಿದ್ದ ಮೆಕ್ಕೆಜೋಳ, ಜೋಳ, ಸೋಯಾಬಿನ್‌ ಮಾರಾಟ ಗುರುವಾರದಿಂದ ಇ-ಟೆಂಡರ್‌ ಮೂಲಕ ಆರಂಭಗೊಂಡಿತು. ಇದರಿಂದ ರೈತರಿಗೆ ಸ್ಪರ್ಧಾತ್ಮಕ ಬೆಲೆ ದೊರೆಯುವ ನಿರೀಕ್ಷೆ ಮೂಡಿಸಿದೆ.

ಹಾವೇರಿ ಎಪಿಎಂಸಿಯಲ್ಲಿ ಈಗಾಗಲೇ ಹತ್ತಿ ಹಾಗೂ ಶೇಂಗಾ ಬೆಳೆಗಳನ್ನು ಈ ಟೆಂಡರ್‌ ಮೂಲಕ ಹರಾಜು ಮೂಲಕ ಮಾರಾಟ ಮಾಡಲಾಗುತ್ತಿದೆ. ಮೆಕ್ಕೆಜೋಳ, ಸೋಯಾಬಿನ್‌, ಜೋಳದ ಬೆಳೆ ಅದರ ವ್ಯಾಪ್ತಿಗೆ ಸೇರಿರಲಿಲ್ಲ. ಹೀಗಾಗಿ, ರೈತರಿಗೆ ಸ್ಪರ್ಧಾತ್ಮಕ ಬೆಲೆ ದೊರೆಯುತ್ತಿರಲಿಲ್ಲ. ಇದರಿಂದ ಬೇಸತ್ತ ರೈತರು ಇತ್ತೀಚಿನ ದಿನಗಳಲ್ಲಿ ಎಪಿಎಂಸಿಗಳತ್ತ ಬರದೇ ತಮಗೆ ಅನುಕೂಲಕರ ಬೆಲೆ ಸಿಕ್ಕ ಕಡೆಯಲ್ಲಿ ಮಾರಾಟ ಮಾಡುತ್ತಿದ್ದರು. ಅಲ್ಲದೇ, ಕೆಲವು ವಂಚಕರು
ಹುಟ್ಟುಕೊಂಡು ಮಾರುಕಟ್ಟೆಗಿಂತ ಹೆಚ್ಚಿನ ಬೆಲೆ ನೀಡುವ ಆಮಿಷವೊಡ್ಡಿ ಮೆಕ್ಕೆಜೋಳ ಖರೀದಿಸಿ ಹಣ ಕೊಡದೇ ವಂಚಿಸುತ್ತಿದ್ದ ಪ್ರಕರಣಗಳು ನಡೆದಿದ್ದವು.

ಈ ಹಿನ್ನೆಲೆ ರೈತರ ಬೆಳೆಗಳಿಗೆ ಸ್ಪರ್ಧಾತ್ಮಕ ದರ ಒದಗಿಸಿಕೊಡಲು ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಇ-ಟೆಂಡರ್‌ ಮೂಲಕ ಮೆಕ್ಕೆಜೋಳ ಖರೀದಿಗೆ ಚಾಲನೆ ನೀಡಿದರು. ಈ ವೇಳೆ ಕಾರ್ಯದರ್ಶಿ ಪರಮೇಶ್ವರಪ್ಪ ನಾಯಕ, ಎಂಜಿನಿಯರ್‌ ಎ.ಬಿ. ಭಾಯಿಸರ್ಕಾರ, ಸದಸ್ಯರಾದ ವಿ.ಜಿ. ಬಣಕಾರ, ವರ್ತಕರ ಸಂಘದ ಕಾರ್ಯದರ್ಶಿ ಎಂ.ಎಸ್‌. ಮಲಗುಂದ, ಸುಭಾಸ ಹುರಳಿಕುಪ್ಪಿ, ಎಸ್‌.ಕೆ. ಪಾಟೀಲ, ಸತೀಶ ಪಾಟೀಲ, ಶಿವಕುಮಾರ ಮಾಗನೂರ, ಪಿ.ಜಿ. ಛತ್ರದಮಠ, ಕರಬಸಪ್ಪ ಸೋಮಾಪುರ, ವಿಶ್ವಾಸ ಬಣಕಾರ, ನಾಗರಾಜ ಮಠದ ಇದ್ದರು.

ಮೊದಲ ದಿನವೇ ಬಂಪರ್‌ ದರ
ಸ್ಥಳೀಯ ಎಪಿಎಂಸಿ ಮಾರುಕಟ್ಟೆಯಲ್ಲಿ ಈವರೆಗೆ ಪ್ರತಿ ಕ್ವಿಂಟಲ್‌ಗೆ 1,911ರಿಂದ 1,930ರೂ. ವರೆಗೆ ದರ ಸಿಕ್ಕಿದೆ. ಇದಕ್ಕೂ ಮುನ್ನ ಪ್ರತಿ ಕ್ವಿಂಟಲ್‌ಗೆ 1,800ರೂ. ವರೆಗೆ ದರ ಲಭಿಸಿತ್ತು. ಇ-ಟೆಂಡರ್‌ ಮೂಲಕ ಖರೀದಿ ಆರಂಭದ ಮೊದಲ ದಿನವೇ 100ರೂ. ಗೂ ಅಧಿ ಕ ದರ ಸಿಕ್ಕಿದೆ. ಸೋಯಾಬಿನ್‌ 5,600 ರಿಂದ 6,359 ರೂ. ಜೋಳ 2,169, 2,391ರೂ.ಗೆ ಮಾರಾಟವಾಗಿದೆ.

ರೈತರಿಗೆ ಸ್ಪರ್ಧಾತ್ಮಕ ಬೆಲೆ ಸಿಗಲಿ ಎಂಬ ಉದ್ದೇಶದಿಂದ ಎಪಿಎಂಸಿಯಲ್ಲಿ ಈವರೆಗೆ ಪರಸ್ಪರ ಒಪ್ಪಂದದ ಮೇಲೆ ನಡೆಯುತ್ತಿದ್ದ ಖರೀದಿ ಪ್ರಕ್ರಿಯೆಯನ್ನು ಇಂದಿನಿಂದ ಇ-ಟೆಂಡರ್‌ ಮೂಲಕ ನಡೆಸಲಾಗಿದೆ. ಇದರಿಂದ ರೈತರಿಗೆ ಉತ್ತಮ ದರದ ಜೊತೆಗೆ ಖರೀದಿದಾರರ ಸೋಗಿನಲ್ಲಿ ನಡೆಸುತ್ತಿದ್ದ ವಂಚನೆಯೂ ತಪ್ಪಲಿದೆ. ಈ ವ್ಯವಸ್ಥೆಯಿಂದ ರೈತರಿಗೆ ಹೆಚ್ಚಿನ ದರ ಸಿಗುತ್ತದೆ. ತೂಕದಲ್ಲಿ ಕಟಾವು, ಮೋಸ ತಪ್ಪುತ್ತದೆ. ಸಕಾಲದಲ್ಲಿ ರೈತರಿಗೆ ಹಣ ಸಿಗುತ್ತದೆ.
ಮಲ್ಲಿಕಾರ್ಜುನ ಹಾವೇರಿ,
ಎಪಿಎಂಸಿ ಅಧ್ಯಕ್ಷರು, ಹಾವೇರಿ

 

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.