ಕರಾವಳಿ ಮೀನುಗಾರಿಕೆ ಅಭಿವೃದ್ಧಿಗೆ ಬಜೆಟ್‌ನಲ್ಲಿ ವಿಶೇಷ ಯೋಜನೆ: ಯಶ್‌ಪಾಲ್ ಮನವಿ
Team Udayavani, Feb 12, 2022, 5:50 AM IST
ಮಲ್ಪೆ: ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಮೀನುಗಾರರ ಹಲವು ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ಮುಂಬರುವ 2022-23ನೇ ಸಾಲಿನ ಬಜೆಟ್‌ನಲ್ಲಿ ವಿಶೇಷ ಯೋಜನೆ ರೂಪಿಸುವಂತೆ ಕರಾವಳಿ ಜಿಲ್ಲೆಗಳ ಸಮಸ್ತ ಮೀನುಗಾರರ ಪರವಾಗಿ ಮೀನುಗಾರಿಕೆ ಸಚಿವ ಅಂಗಾರ ಅವರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಮೀನುಗಾರಿಕೆ ಸಚಿವರ ಅಧ್ಯಕ್ಷತೆಯಲ್ಲಿ ಜರಗಿದ ಮೀನುಗಾರಿಕೆ ಇಲಾಖೆಯ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮೀನುಗಾರರ ಬಹುದಿನಗಳ ಬೇಡಿಕೆಗಳಾದ ರಾಜ್ಯ ಮಾರಾಟ ಕರಮುಕ್ತ ಡೀಸೆಲ್ ಕೋಟಾ ಹೆಚ್ಚಳ, ಸೀ ಆಂಬ್ಯುಲೆನ್ಸ್ ಮತ್ತು ತುರ್ತು ಚಿಕಿತ್ಸಾ ಘಟಕ, ಕಾಪು ತೀರದಲ್ಲಿ ನಾಡ ದೋಣಿ ತಂಗಲು ಇಳಿದಾಣ ಕೇಂದ್ರ, ಬಂದರು ಹೂಳು ತೆಗೆಯಲು ಇಲಾಖೆ ವತಿಯಿಂದ ಡ್ರೆಜ್ಜರ್ ಖರೀದಿ, ಮೀನುಗಾರರಿಗೆ 1 ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರ ಸಾಲ ಯೋಜನೆ, ನಾಡ ದೋಣಿಗಳಿಗೆ ಸೀಮೆ ಎಣ್ಣೆ ಪ್ರಮಾಣ ಹೆಚ್ಚಳ, ನಾಡ ದೋಣಿಗಳಿಗೆ ಇಲೆಕ್ಟ್ರಿಕಲ್ ಇಂಜಿನ್ ಪರಿವರ್ತನೆಗೆ ಸಹಾಯ ಧನ, ಮೀನುಗಾರರ ಸಹಕಾರಿ ಸಂಘಗಳ ಸಾಲ ಮನ್ನಾ, ಮತ್ಸé ಮಹಿಳಾ ಸ್ವಾವಲಂಬನೆ ಯೋಜನೆ ಸಹಿತ ಹಲವು ಯೋಜನೆಗಳಿಗೆ ಬಜೆಟ್‌ನಲ್ಲಿ ಅನುದಾನ ಒದಗಿಸಿ ಮೀನುಗಾರಿಕೆ ಅಭಿ ವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಮಾ, ನಿರ್ದೇಶಕ ರಾಮಾಚಾರ್ಯ, ಅಪರ ನಿರ್ದೇಶಕ ತಿಪ್ಪೇಸ್ವಾಮಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ದಿನೇಶ್ ಎಂ.ಕೆ., ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಷನ್ ವ್ಯವಸ್ಥಾಪಕ ನಿರ್ದೇಶಕ ಹರೀಶ್ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.