ವಾಹನ ಚಲಾಯಿಸುವಾಗಲೂ ಮೊಬೈಲ್ ಬಳಸುವುದು ಶೀಘ್ರವೇ ಕಾನೂನು ಬದ್ಧ…ಆದರೆ
ನೀವು ಈ ಆರೋಪದ ವಿರುದ್ಧ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ವರದಿ ತಿಳಿಸಿದೆ.
Team Udayavani, Feb 12, 2022, 9:49 AM IST
ನವದೆಹಲಿ:ಇನ್ಮುಂದೆ ವಾಹನ ಚಲಾಯಿಸುವ ವೇಳೆ ಮೊಬೈಲ್ ನಲ್ಲಿ ಮಾತನಾಡಿದರೆ ಅಪರಾಧ ಎಂದು ಪರಿಗಣಿಸುವುದಿಲ್ಲ ಎಂಬುದಾಗಿ ಇತ್ತೀಚೆಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದರು. ಆದರೆ ಇದನ್ನು ಅನುಸರಿಸಲು ಕೆಲವೊಂದು ನಿಯಮದ ಅಗತ್ಯವಿದೆ ಎಂದು ತಿಳಿಸಿರುವುದಾಗಿ ವರದಿ ಹೇಳಿದೆ.
ಇದನ್ನೂ ಓದಿ:ಯುದ್ಧ ಭೀತಿ: ತನ್ನ ಪ್ರಜೆಗಳಿಗೆ ಕೂಡಲೇ ಉಕ್ರೇನ್ ತೊರೆಯಲು ಅಮೆರಿಕ ಸೂಚನೆ
ಲೋಕಸಭೆಯಲ್ಲಿ ಗಡ್ಕರಿ ನೀಡಿರುವ ಹೇಳಿಕೆ ಪ್ರಕಾರ, ವಾಹನ ಚಲಾಯಿಸುವಾಗ ಒಂದು ವೇಳೆ ನಿಮ್ಮ ಬಳಿ ಮೊಬೈಲ್ ಇದ್ದರೆ, ಅದು ಹ್ಯಾಂಡ್ಸ್ ಫ್ರೀ ಸಾಧನಕ್ಕೆ ಸಂಪರ್ಕಗೊಂಡಿದ್ದರೆ ಮಾತ್ರ ಮಾತನಾಡಲು ಅನುಮತಿ ನೀಡಲಾಗುತ್ತದೆ. ಅಲ್ಲದೇ ಮೊಬೈಲ್ ಅನ್ನು ಮೊಬೈಲ್ ಕಾರಿನಲ್ಲಿ ಇಡುವುದಕ್ಕಿಂತ ಹೆಚ್ಚಾಗಿ ಕಿಸೆಯಲ್ಲಿ (ಪಾಕೆಟ್) ಇಡಬೇಕು ಎಂದು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಕೇಂದ್ರ ಸಚಿವ ಗಡ್ಕರಿ ಅವರ ಮಾತಿನ ಪ್ರಕಾರ, ವಾಹನ ಚಲಾಯಿಸುವಾಗ ಒಂದು ವೇಳೆ ಚಾಲಕ ಹ್ಯಾಂಡ್ಸ್ ಫ್ರಿ ಸಾಧನವನ್ನು ಬಳಸಿ, ಮೊಬೈಲ್ ನಲ್ಲಿ ಮಾತನಾಡುತ್ತಿದ್ದರೆ, ಅದನ್ನು ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಟ್ರಾಫಿಕ್ ಪೊಲೀಸರು ಯಾವುದೇ ದಂಡ ವಿಧಿಸಲು ಸಾಧ್ಯವಿಲ್ಲ. ಒಂದು ವೇಳೆ ಹ್ಯಾಂಡ್ಸ್ ಫ್ರೀ ಬಳಸಿದಾಗಲೂ ದಂಡ ವಿಧಿಸಿದರೆ ಅದನ್ನು ನೀವು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು.
ಒಂದು ವೇಳೆ ವಾಹನ ಚಲಾಯಿಸುವಾಗ ಮೊಬೈಲ್ ನಲ್ಲಿ ಮಾತನಾಡಿದ್ದಕ್ಕಾಗಿ ನಿಮ್ಮನ್ನು ಬಂಧಿಸಿದರೆ, ನೀವು ಈ ಆರೋಪದ ವಿರುದ್ಧ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
ಬಾಲ್ಯ ವಿವಾಹ ಕಾನೂನು ಪರಿಶೀಲನೆ: ಸುಪ್ರೀಂ ಅಸ್ತು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.