ಆರ್ಥಿಕ ಸಂಪನ್ಮೂಲ ಹೆಚ್ಚಿಸಲು ಗಮನ: ಫೆ. 25ರ ಬಳಿಕ ಬಜೆಟ್‌ಗೆ ಅಂತಿಮ ರೂಪ: ಸಿಎಂ
Team Udayavani, Feb 13, 2022, 7:00 AM IST
ಬೆಳಗಾವಿ: ಬಜೆಟ್ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ವಿವಿಧ ಇಲಾಖೆಗಳ ಜತೆ ಸಭೆ ನಡೆಸಲಾಗಿದೆ. ಮುಖ್ಯವಾಗಿ ರಾಜ್ಯದ ಆರ್ಥಿಕ ಸಂಪನ್ಮೂಲ ಹೆಚ್ಚಿಸುವ ಕುರಿತು ವಿಶೇಷ ಗಮನ ಹರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮವಾರದಿಂದ ಅಧಿವೇಶನ ನಡೆಯಲಿದೆ. ಸೋಮವಾರ ಮತ್ತು ಮಂಗಳವಾರ ಇನ್ನೂ ಹಲವು ಇಲಾಖೆಗಳ ಸಭೆ ನಡೆಸಿ ಮಾಹಿತಿ ಪಡೆಯಲಾಗುವುದು ಎಂದರು.
ಎಲ್ಲ ಇಲಾಖೆಗಳ ಸಭೆ ಮುಗಿದ ಮೇಲೆ ಫೆ. 25ರ ಬಳಿಕ ಎಲ್ಲ ಇಲಾಖೆಗಳ ಬೇಡಿಕೆಗಳು ಹಾಗೂ ಕೇಂದ್ರ – ರಾಜ್ಯ ಸರಕಾರದ ಯೋಜನೆಗಳನ್ನು ಗಮನಿಸಿ ಅಂತಿಮವಾಗಿ ಬಜೆಟ್ ಸಿದ್ಧಪಡಿಸಲಾಗುವುದು. ಈ ಸಂದರ್ಭ ಆರ್ಥಿಕ ಸಂಪನ್ಮೂಲ ಹೆಚ್ಚಿಸಲು ವಿಶೇಷ ಗಮನ ಹರಿಸಲಾಗುವುದು ಎಂದರು.
ಹಿಜಾಬ್ ಪ್ರಕರಣ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ರಾಜ್ಯದಲ್ಲಿ ಶಾಂತಿ ನೆಲೆಸಬೇಕು. ಮಕ್ಕಳಲ್ಲಿ ಯಾವುದೇ ಭಿನ್ನಾಭಿಪ್ರಾಯ ಮೂಡಬಾರದು. ಎಲ್ಲರೂ ಸಮಾನರು ಎನ್ನುವ ಭಾವನೆ ಬರಬೇಕು. ಶಾಲಾ-ಕಾಲೇಜುಗಳು ಆರಂಭವಾಗಬೇಕು ಎಂಬುದು ಸರಕಾರದ ಉದ್ದೇಶ. ಇದಕ್ಕಾಗಿ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬೆಳಗಾವಿ ಹೊರವಲಯದಲ್ಲಿ ಸೇನಾ ವಶದಲ್ಲಿರುವ 754 ಎಕರೆ ಭೂಮಿಯನ್ನು ಮರಳಿ ರಾಜ್ಯ ಸರಕಾರಕ್ಕೆ ಕೊಡುವಂತೆ ದಿಲ್ಲಿಯಲ್ಲಿ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಸಚಿವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದಲ್ಲದೆ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯನ್ನು ರಕ್ಷಣ ಇಲಾಖೆಯೇ ವಹಿಸಿಕೊಳ್ಳಬೇಕೆಂದು ಮನವಿ ಮಾಡಿದ್ದೇವೆ. ಅದರ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.
ಎರಡು ವಿಧೇಯಕಗಳ ಸ್ವೀಕಾರ: ಸ್ಪೀಕರ್ :
ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಮಂಡನೆ ಸಲುವಾಗಿ ಕರ್ನಾಟಕ ಮುದ್ರಾಂಕ (ತಿದ್ದುಪಡಿ) ಮಸೂದೆ ಮತ್ತು ಅಪರಾಧ ಕಾನೂನು (ತಿದ್ದುಪಡಿ) ವಿಧೇಯಕ ಸ್ವೀಕರಿಸಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2062 ಪ್ರಶ್ನೆಗಳನ್ನು ಸ್ವೀಕರಿಸಲಾಗಿದೆ. ಸದಸ್ಯರು ಕೇಳಿದ ಪ್ರಶ್ನೆಗಳನ್ನು ಮತ್ತು ಅದಕ್ಕೆ ಸಚಿವರು ನೀಡಿದ ಉತ್ತರವನ್ನು ಅಂತರ್ಜಾಲ ತಾಣದಲ್ಲಿ ಅಪ್‌ಲೋಡ್ ಮಾಡಲು ಹಾಗೂ ಇಮೇಲ್ ಮೂಲಕ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.
ರಾಜ್ಯಪಾಲರು ವಿಧಾನಸೌಧದ ಭವ್ಯವಾದ ಮೆಟ್ಟಿಲುಗಳನ್ನು ಏರಿ ಅಧಿವೇಶನಕ್ಕೆ ಆಗಮಿಸಲಿದ್ದಾರೆ. ಈ ಸಂಪ್ರದಾಯ ವಿವಿಧ ಕಾರಣಗಳಿಂದ ನಿಂತು ಹೋಗಿತ್ತು. ಈಗ ಹಿಂದೆ ಚಾಲ್ತಿಯಲ್ಲಿದ್ದ ರೀತಿಯಲ್ಲೇ ಸದನಕ್ಕೆ ಆಗಮಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದು, ಅವರು ಸಮ್ಮತಿಸಿದ್ದಾರೆಂದು ಹೇಳಿದರು.
ಈ ಮಧ್ಯೆ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವಂತೆ ಸಾಂಪ್ರದಾಯಿಕವಾಗಿ ಆಹ್ವಾನಿಸಿದರು.
ಭಿತ್ತಿಪತ್ರ ಪ್ರದರ್ಶಿಸುವಂತಿಲ್ಲ: ಹೊರಟ್ಟಿ:
ಸೋಮವಾರ ರಾಜ್ಯಪಾಲರ ಭಾಷಣದ ಬಳಿಕ ಪರಿಷತ್ ಕಲಾಪ ಆರಂಭವಾಗಲಿದ್ದು, ನಿಯಮ 72ರಡಿ ಚರ್ಚೆ ವೇಳೆ ಸದನದ ಬಾವಿಯಲ್ಲಿ ಭಿತ್ತಿಪತ್ರ ಪ್ರದರ್ಶಿಸುವಂತಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಯಮಗಳ ಪಾಲನೆಗೆ ಎಲ್ಲ ಸದಸ್ಯರಿಗೂ ಸೂಚನೆ ನೀಡಲಾಗಿದೆ. ಮೇಲ್ಮನೆಯ ಮಟ್ಟ ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನಿಸಲು ತೀರ್ಮಾನ ಮಾಡಿದ್ದೇವೆ. ಚುನಾವಣ ಸುಧಾರಣೆ ಬಗ್ಗೆ ಎರಡು ದಿನ ಚರ್ಚಿಸುವ ಚಿಂತನೆ ಇದೆ. ಸರಕಾರ ಒಪ್ಪಿಕೊಂಡರೆ ಮಾಡುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.