ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ
Team Udayavani, Feb 13, 2022, 3:38 PM IST
ಬಳ್ಳಾರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆ ಮಂತ್ರಾಲಯ, ಕರ್ನಾಟಕ ಸರ್ಕಾರಮತ್ತು ವಿಮ್ಸ್ ಸಂಯುಕ್ತ ಆಶ್ರಯದಲ್ಲಿ ಪ್ರಧಾನಮಂತ್ರಿಸ್ವಸ್ಥ Â ಸುರûಾ ಯೋಜನೆಯಡಿ ನಿರ್ಮಿಸಲಾಗಿರುವಟ್ರಾಮಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿಟ್ರಾಮಾಕೇರ್ ಸೇವೆಗಳಿಗೆ ಸಾರಿಗೆ, ಜಿಲ್ಲಾ ಉಸ್ತುವಾರಿಸಚಿವ ಬಿ.ಶ್ರೀರಾಮುಲು ಶನಿವಾರ ಚಾಲನೆನೀಡಿದರು.
ಬಳಿಕ ಮಾತನಾಡಿದ ಅವರು, ಈ ಸೂಪರ್‌ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಟ್ರಾಮಾಕೇರ್ ಸೇವೆಗಳುಆರಂಭವಾಗುತ್ತಿರುವುದು ಸಂತಸದ ವಿಷಯ. ವೈದ್ಯರುಮತ್ತು ವೈದ್ಯಕೀಯ ಸಿಬ್ಬಂದಿ ಚಿಕಿತ್ಸೆಗೆ ಆಗಮಿಸುವರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ ಮತ್ತುಸಮರ್ಪಕವಾದ ಚಿಕಿತ್ಸೆ ನೀಡುವುದರ ಮೂಲಕಅವರನ್ನು ಗುಣಮುಖರನ್ನಾಗಿ ಮಾಡಬೇಕುಎಂದರು.
ವೈದ್ಯರು ಹಾಗೂ ಸಿಬ್ಬಂದಿಗೆ ಸರ್ಕಾರ ಎಲ್ಲಸೌಲಭ್ಯಗಳನ್ನು ಕಲ್ಪಿಸಿದೆ ಎಂದ ಸಚಿವರು, ಆಸ್ಪತ್ರೆವಿವಿಧ ವಿಭಾಗಗಳ ಮುಖ್ಯಸ್ಥರ(ಎಂಡಿಗಳ)ಸಭೆಯಲ್ಲಿ ಕಡ್ಡಾಯವಾಗಿ ಆಸ್ಪತ್ರೆಯಲ್ಲಿದ್ದುಕೊಂಡುರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕು.ಹಾಜರಿ ಹಾಕಿ ಖಾಸಗಿ ಕ್ಲಿನಿಕ್‌ಗಳಿಗೆ ತೆರಳಿದರೇ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಸೂಚನೆ ನೀಡಲಾಗಿದೆ.
ರೋಗಿಗಳಿಗೆ ಔಷಧಗಳನ್ನು ಹೊರಗಡೆ ತರುವಂತೆಖಾಸಗಿ ಚೀಟಿ ನೀಡಿದರೇ ಕ್ರಮ ಕೈಗೊಳ್ಳಬೇಕಾಗುತ್ತದೆಎಂದು ತಿಳಿಸಲಾಗಿದೆ ಎಂದರು.ಆಸ್ಪತ್ರೆಯಲ್ಲಿ ವೈದ್ಯರು, ನರ್ಸ್‌ಗಳ ಕೊರತೆಯಿದ್ದು,ಮುಂದಿನ ದಿನಗಳಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು.ಆಯುಷ್ಮಾನ್ ಕಾರ್ಡ್‌ಗಳನ್ನು ಬಡವರಿಗೆ ಒದಗಿಸುವಕೆಲಸ ಮಾಡುವಂತೆ ಅಧಿ ಕಾರಿಗಳಿಗೆ ತಿಳಿಸಿದ ಅವರು,2008-09ರ ಸಂದರ್ಭದಲ್ಲಿ ಈ ಸೂಪರ್ ಸ್ಪೇಷಾಲಿಟಿಆಸ್ಪತ್ರೆಗೆ ಭೂಮಿಪೂಜೆ ನೆರವೇರಿಸಿದ್ದೆವು.
ಈಗ ನನ್ನಕೈಯಲ್ಲಿಯೇ ಸೇವೆಗಳಿಗೆ ಉದ್ಘಾಟನೆಯಾಗುತ್ತಿರುವುದುಖುಷಿ ತಂದಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಗ್ರಾಮೀಣ ಶಾಸಕ ಬಿ.ನಾಗೇಂದ್ರಮಾತನಾಡಿ, ಈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬರಲುಮಾಜಿ ಸಚಿವ ಜಿ. ಜನಾರ್ಧನರೆಡ್ಡಿ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಅವರುಪ್ರಮುಖರು. ಜನಪ್ರತಿನಿಧಿಗಳ ಇಚ್ಛಾಶಕ್ತಿಯಿಂದಮಾತ್ರ ಇಂಥ ಕಟ್ಟಡಗಳು ತಲೆಎತ್ತಲು ಸಾಧ್ಯ. ಉತ್ತಮಕಾರ್ಯಕ್ಕೆ ಎಲ್ಲರೂ ಪûಾತೀತವಾಗಿ ಕೈಜೋಡಿಸುವುದರಮೂಲಕ ಬಳ್ಳಾರಿ ಜಿಲ್ಲೆ ಅಭಿವೃದ್ಧಿ ಮಾಡೋಣಎಂದರು.
ವಿಮ್ಸ್ ನಿರ್ದೇಶಕ ಡಾ| ಗಂಗಾಧರಗೌಡಪ್ರಾಸ್ತಾವಿಕವಾಗಿ ಮಾತನಾಡಿ, ಆಸ್ಪತ್ರೆಯಲ್ಲಿ 6ಮಾಡರ್ನ್ ಒಟಿಗಳು, ಎರಡು ಕನ್ವೆನÒನ್‌ಗಳಿವೆ.ಟ್ರಾಮಾಕೇರ್ ಆಸ್ಪತ್ರೆಯಲ್ಲಿ ಆಥೋìಪೆಡಿಕ್ (ಹಸ್ತಿಚಿಕಿತ್ಸಾ ವಿಭಾಗ), ನ್ಯೂರೋಸರ್ಜರಿ (ನರರೋಗಚಿಕಿತ್ಸಾ ವಿಭಾಗ), ಪ್ಲಾಸ್ಟಿಕ್ ಸರ್ಜರಿ (ಸ್ವರೂಪ ಚಿಕಿತ್ಸಾವಿಭಾಗ), ಅರವಳಿಕೆ ಶಾಸ್ತ್ರ ವಿಭಾಗಗಳ ಸೇವೆಗಳನ್ನುಆರಂಭಿಸಲಾಗುತ್ತಿದೆ. ಎಲ್ಲ ರೀತಿಯ ಅತ್ಯಾಧುನಿಕಸೌಲಭ್ಯಗಳನ್ನು ಈ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಹೊಂದಿದ್ದು, ಸೇವೆಗಳು ಆರಂಭವಾಗುವುದರಿಂದಬಳ್ಳಾರಿ ಸೇರಿದಂತೆ ರಾಜ್ಯ ಹಾಗೂ ಆಂಧ್ರಪ್ರದೇಶ,ತೆಲಂಗಾಣ ಜನರಿಗೆ ಅನುಕೂಲ ಪಡೆಯಲಿದ್ದಾರೆಎಂದರು.
ಈ ಸಂದರ್ಭದಲ್ಲಿ ನಗರ ಶಾಸಕ ಜಿ. ಸೋಮಶೇಖರ್‌ರೆಡ್ಡಿ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿನಿಗಮದ ಅಧ್ಯಕ್ಷ ಹನುಮಂತಪ್ಪ, ಬುಡಾ ಅಧ್ಯಕ್ಷ ಪಿ.ಪಾಲನ್ನ, ಜಿಲ್ಲಾಧಿ ಕಾರಿ ಪವನಕುಮಾರ ಮಾಲಪಾಟಿ,ಎಸ್ಪಿ ಸೈದುಲು ಅಡಾವತ್, ಮಾಜಿ ಸಂಸದ ಸಣ್ಣಫಕೀರಪ್ಪ, ಜೆ.ಶಾಂತಾ, ಮಾಜಿ ಶಾಸಕ ಸುರೇಶಬಾಬು,ಮಹಾನಗರ ಪಾಲಿಕೆ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.