ಕರ್ನಾಟಕ ಲೋಕಸೇವಾ ಆಯೋಗದ ಕಾಯಕಲ್ಪಕ್ಕೆ ಇದು ಸಕಾಲ


Team Udayavani, Feb 14, 2022, 6:00 AM IST

ಕರ್ನಾಟಕ ಲೋಕಸೇವಾ ಆಯೋಗದ ಕಾಯಕಲ್ಪಕ್ಕೆ ಇದು ಸಕಾಲ

ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿರುವ ಹುದ್ದೆಗಳಿಗೆ ಸಕಾಲದಲ್ಲಿ ಮತ್ತು ಅತ್ಯಂತ ಪಾರದರ್ಶಕ ರೀತಿಯಲ್ಲಿ ನೇಮಕಾತಿ ಮಾಡಿಕೊಳ್ಳುವ ಉದ್ದೇಶದಿಂದ ಸ್ಥಾಪಿಸಲಾದ ಕರ್ನಾಟಕ ಲೋಕಸೇವಾ ಆಯೋಗ ತನ್ನ ಕಾರ್ಯನಿರ್ವಹಣೆಯಲ್ಲಿ ಎಡವಿದೆ.

ಸ್ಥಾಪನೆಯಾದ ಆರಂಭದಲ್ಲಿ ಅತ್ಯಂತ ಬದ್ಧತೆಯಿಂದ ಕಾರ್ಯನಿರ್ವಹಿಸಿದ ಸಂಸ್ಥೆ ಆ ಬಳಿಕ ತನ್ನ ಕಾರ್ಯವೈಖರಿಯ ಬದಲಾಗಿ ವಿವಾದ, ಹಗರಣಗಳಿಂದಲೇ ಕುಖ್ಯಾತಿ ಪಡೆಯುವಂತಾಯಿತು. ಇತ್ತೀಚಿನ ದಶಕಗಳಲ್ಲಂತೂ ಕೆಪಿಎಸ್‌ಸಿಗೆ ರಾಜ್ಯದ ಜನತೆ ಹಿಡಿಶಾಪ ಹಾಕುತ್ತಿದ್ದು ಸಂಸ್ಥೆಯ ಔಚಿತ್ಯವನ್ನೇ ಪ್ರಶ್ನಿಸತೊಡಗಿದ್ದಾರೆ. ಅಷ್ಟು ಮಾತ್ರವಲ್ಲದೆ ಸರಕಾರದ ಪಾಲಿಗೆ ಕೆಪಿಎಸ್‌ಸಿ ಬಿಳಿಯಾನೆಯಾಗಿ ಮಾರ್ಪಟ್ಟಿದೆ.

ಸರಕಾರಿ ಹುದ್ದೆ ಎಂದಾಕ್ಷಣ ಅಲ್ಲೊಂದಿಷ್ಟು ವಶೀಲಿಬಾಜಿ, ರಾಜಕೀಯ, ಹಣಕಾಸಿನ ಪ್ರಭಾವ ಸಹಜ. ಇವೆಲ್ಲವುಗಳಿಗೆ ಕಡಿವಾಣ ಹಾಕಿ ಅರ್ಹರಿಗೆ ಸರಕಾರಿ ಉದ್ಯೋಗ ಕೊಡಿಸುವ ಇರಾದೆಯಿಂದಲೇ ಕೆಪಿಎಸ್‌ಸಿಯನ್ನು ಸ್ಥಾಪಿಸಲಾಗಿದೆ. ಆದರೆ ಯಾವುದೇ ಇಲಾಖೆ ಅಥವಾ ಸಂಸ್ಥೆಯಲ್ಲಿರುವ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೆಪಿಎಸ್‌ಸಿ ಕೈಗೆತ್ತಿಕೊಳ್ಳುತ್ತಿದ್ದಂತೆಯೇ ವಿವಾದ ಸೃಷ್ಟಿಯಾಗುವುದು ಮಾಮೂಲಿಯಾಗಿದೆ.
ಇದರಿಂದಾಗಿ ಅದೆಷ್ಟೋ ಅರ್ಹ ಅಭ್ಯರ್ಥಿಗಳು ಉದ್ಯೋಗದಿಂದ ವಂಚಿತರಾಗುವಂತಾಗಿದೆ. ಹಲವು ಪ್ರಕರಣಗಳಲ್ಲಿ ಉದ್ಯೋಗಾಕಾಂಕ್ಷಿಗಳು ಕೋರ್ಟ್‌ ಮೆಟ್ಟಿಲೇರಿ ನೇಮಕಾತಿ ಪ್ರಕ್ರಿಯೆಗೆ ತಡೆಯಾಜ್ಞೆ ತಂದಿದ್ದಾರೆ. ಇದರ ಹೊರತಾಗಿಯೂ ಹಲವಾರು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕಾಲಮಿತಿಯೊಳಗೆ ನೇಮಕಾತಿ ಮಾಡಿಕೊಳ್ಳುವಲ್ಲಿ ಕೆಪಿಎಸ್‌ಸಿ ವಿಫ‌ಲವಾಗಿದೆ.

ವಿಳಂಬ ಧೋರಣೆಗೆ ಕೆಪಿಎಸ್‌ಸಿ ಜೋತು ಬೀಳುತ್ತಿರುವುದರಿಂದಾಗಿ ಇಡೀ ನೇಮಕಾತಿ ಪ್ರಕ್ರಿಯೆಯೇ ಸ್ಥಗಿತಗೊಳ್ಳುವಂತಾಗಿದೆ. ಕಳೆದ ಐದಾರು ವರ್ಷಗಳ ಅಂಕಿಅಂಶಗಳನ್ನು ಗಮನಿಸಿದಲ್ಲಿ ವಿವಿಧ ಇಲಾಖೆಗಳ 7 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಇನ್ನೂ ನೇಮಕಾತಿ ನಡೆದಿಲ್ಲ.

ನೇಮಕಾತಿಯಲ್ಲಾಗುತ್ತಿರುವ ವಿಳಂಬಕ್ಕೆ ಕೆಪಿಎಸ್‌ಸಿ ವಿವಿಧ ನೆಪಗಳನ್ನು ಹೇಳುತ್ತಿದೆಯಾದರೂ ಈ ಅಡೆತಡೆಗಳನ್ನು ನಿವಾರಿಸಿ ಪ್ರಕ್ರಿಯೆಯನ್ನು ಪೂರ್ಣ  ಗೊಳಿಸಲು ಅಗತ್ಯ ಇರುವ ಬದ್ಧತೆ, ಇಚ್ಛಾಶಕ್ತಿಯನ್ನಾಗಲಿ ಪ್ರದರ್ಶಿ ಸುತ್ತಿಲ್ಲ. ವರ್ಷಗಳ ಕಾಲ ಸರಕಾರಿ ಇಲಾಖೆಗಳಲ್ಲಿ ಹುದ್ದೆಗಳು ಭರ್ತಿ ಯಾಗದೇ ತೆರವಾಗಿದ್ದು ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಲು ಕೆಪಿಎಸ್‌ಸಿ ತನ್ನ ದೇಣಿಗೆಯನ್ನು ನೀಡುತ್ತಿದೆಯಲ್ಲದೆ ಜನಸಾಮಾನ್ಯರ ಕೆಲಸಕಾರ್ಯಗಳು ಸಕಾಲದಲ್ಲಿ ನಡೆಯದಿರಲು ಪರೋಕ್ಷವಾಗಿ ಕಾರಣವಾಗುತ್ತಿದೆ. ಹಳೆಯ ನೇಮಕಾತಿ ಪ್ರಕ್ರಿಯೆಗಳು ಇನ್ನೂ ಪೂರ್ಣ ಗೊಳ್ಳದಿ ರುವುದು ಮತ್ತು ಹೊಸ ನೇಮಕಾತಿಗಾಗಿ ಅಧಿಸೂಚನೆಯನ್ನೂ ಹೊರಡಿಸದಿರುವುದು ಉದ್ಯೋಗಾಕಾಂಕ್ಷಿಗಳಿಗೆ ಬರೆ ಎಳೆದಂತಾಗಿದೆ.

ಕೆಪಿಎಸ್‌ಸಿಯ ಕಾರ್ಯಶೈಲಿಯ ಬಗೆಗೆ ಸ್ಪಷ್ಟ ಅರಿವಿದ್ದರೂ ಸರಕಾರ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ವ್ಯವಸ್ಥೆಗೆ ಚುರುಕು ಮೂಡಿ ಸುವ ನಿಟ್ಟಿನಲ್ಲಿ ಸರಕಾರದಿಂದ ಪ್ರಾಮಾಣಿಕ ಪ್ರಯತ್ನ ನಡೆಯದಿರುವುದು ತೀರಾ ಅಚ್ಚರಿಯೇ ಸರಿ. ಪ್ರತೀ ವರ್ಷ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗ ಸೃಷ್ಟಿಯ ಭರವಸೆ ನೀಡುತ್ತಲೇ ಬರುವ ಸರಕಾರ ಖಾಲಿ ಇರುವ ಹುದ್ದೆಗಳಿಗೆ ಸಕಾಲದಲ್ಲಿ ನೇಮಕಾತಿ ಮಾಡಿಕೊಳ್ಳಲು ಮುಂದಾ ಗುತ್ತಿಲ್ಲ. ಇನ್ನಾದರೂ ಸರಕಾರ ಕೆಪಿಎಸ್‌ಸಿಯ ಜಿಡ್ಡುಗಟ್ಟಿದ ವ್ಯವಸ್ಥೆಗೆ ಸಾಣೆ ಹಿಡಿದು ಕಾಲಮಿತಿಯೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣ ಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ವಿವಿಧ ಕಾರಣಗಳಿಂದಾಗಿ ಬಾಕಿ ಉಳಿದಿರುವ ನೇಮಕಾತಿ ಪ್ರಕ್ರಿಯೆಗಿರುವ ಅಡಚಣೆಗಳನ್ನು ನಿವಾರಿಸಲು ಆದ್ಯತೆ ನೀಡುವ ಜತೆಯಲ್ಲಿ ಹೊಸ ನೇಮಕಾತಿ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳುವಂತೆ ಕೆಪಿಎಸ್‌ಸಿಗೆ ಸ್ಪಷ್ಟ ನಿರ್ದೇಶನ ನೀಡಬೇಕು.

 

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.