ತರಗತಿಗಳಲ್ಲಿ ಸಮವಸ್ತ್ರ ಪಾಲನೆ; ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಸಭೆ
Team Udayavani, Feb 14, 2022, 6:25 AM IST
ಉಡುಪಿ: ತರಗತಿಗಳಲ್ಲಿ ಸಮವಸ್ತ್ರ ನಿಯಮ ಪಾಲಿಸುವ ಸಂಬಂಧ ರಾಜ್ಯ ಹೈಕೋರ್ಟ್ ನೀಡಿರುವ ಮಧ್ಯಾಂತರ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಉಡುಪಿ ತಾಲೂಕು ಕಚೇರಿಯಲ್ಲಿ ವಿವಿಧ ಸಂಘಟನೆಗಳು ಮತ್ತು ಧಾರ್ಮಿಕ ಮುಖಂಡರೊಂದಿಗೆ ಶಾಸಕ ರಘುಪತಿ ಭಟ್ ರವಿವಾರ ಸಭೆ ನಡೆಸಿದರು.
ಈವರೆಗೆ ಯಾವ ಪ್ರೌಢಶಾಲೆಗಳಲ್ಲಿ ಸಮವಸ್ತ್ರ ಪದ್ಧತಿ ಇತ್ತೋ ಆ ಶಾಲೆಗಳಿಗೆ ಕೋರ್ಟ್ ಆದೇಶ ಅನ್ವಯ ಆಗುತ್ತದೆ. ಎಲ್ಲ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರದಲ್ಲಿ ತರಗತಿಗೆ ಹಾಜರಾಗಬೇಕು. ಸಮವಸ್ತ್ರ ಪದ್ಧತಿ ಇಲ್ಲದ ಸಂಸ್ಥೆಗಳಲ್ಲಿ ಎಂದಿನಂತೆ ಶೈಕ್ಷಣಿಕ ಚಟುವಟಿಕೆ ಮುಂದುವರಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಆದೇಶ, ನಿಯಮ ಉಲ್ಲಂಘನೆಯಾಗಂತೆ ಎಚ್ಚರ ವಹಿಸಬೇಕು ಎಂದು ಶಾಸಕರು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ತಹಶೀಲ್ದಾರ್ ಪ್ರದೀಪ್ ಕುಡೇìಕರ್, ಪೋಲಿಸ್ ಉಪ ಅಧೀಕ್ಷಕ ಸುಧಾಕರ್ ನಾಯ್ಕ ನಿರೀಕ್ಷಕ ಪ್ರಮೋದ್, ವೃತ್ತ ನಿರೀಕ್ಷಕ ಶರಣಗೌಡ, ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಧಾರ್ಮಿಕ ಮುಖಂಡರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:15-18 ವರ್ಷದ ಶೇ.70 ಮಕ್ಕಳಿಗೆ ಲಸಿಕೆ; ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ
ಉಡುಪಿಯಲ್ಲಿ ನಿಷೇಧಾಜ್ಞೆ
ಸಮವಸ್ತ್ರ ವಿವಾದ ಮತ್ತು ಪ್ರಸಕ್ತ ವಿದ್ಯಮಾನಗಳನ್ನು ಪರಿಗಣಿಸಿ ಪ್ರೌಢ ಶಾಲಾ ತರಗತಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಫೆ. 14ರಿಂದ 19ರ ವರೆಗೆ ಎಲ್ಲ ಪ್ರೌಢಶಾಲೆಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡ ಲಾಗಿದೆ. ಪ್ರೌಢಶಾಲೆಯ 200 ಮೀ. ಸುತ್ತಮುತ್ತ 144 ಸೆಕ್ಷನ್ ಜಾರಿಯಲ್ಲಿ ಇರುವುದರಿಂದ ಅನವಶ್ಯಕವಾಗಿ ಗುಂಪು ಸೇರುವುದು, ಘೋಷಣೆ ಕೂಗುವುದಕ್ಕೆ ಅವಕಾಶ ಇಲ್ಲ. ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.