ಫುಟ್‌ಪಾತ್ ಕಾಮಗಾರಿಗೆ ಚಾಲನೆ
Team Udayavani, Feb 14, 2022, 11:53 AM IST
ಶಹಾಬಾದ: ನಗರದ ಹಳೆ ಶಹಾಬಾದನ ಆಟೋ ನಿಲ್ದಾಣದಿಂದ ಶಂಕರಲಿಂಗ ಗುಡಿ ವರೆಗಿನ ಎರಡು ಬದಿಯಲ್ಲಿ ಫುಟ್ ಪಾತ್ ನಿರ್ಮಾಣ ಕಾಮಗಾರಿಗೆ ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಪೂಜೆ ಸಲ್ಲಿಸಿದರು.
ನಗರಸಭೆ ಪೌರಾಯುಕ್ತ ಡಾ| ಕೆ.ಗುರಲಿಂಗಪ್ಪ ಮಾತನಾಡಿ, ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರ ವಿಶೇಷ ಅನುದಾನದಲ್ಲಿ ಸುಮಾರು 60 ಲಕ್ಷ ರೂ. ಅನುದಾನದಲ್ಲಿ ಫುಟ್‌ಪಾತ್ ನಿರ್ಮಾಣ ಕಾಮಗಾರಿಯನ್ನು ಶಾಸಕರು ಈ ಹಿಂದೆಯೇ ವಿದ್ಯುಕ್ತವಾಗಿ ಉದ್ಘಾಟಿಸಿದ್ದಾರೆ. ಅದಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಗಿದೆ ಎಂದರು.
ಈಗಾಗಲೇ ಹಳೆಶಹಾಬಾದನಲ್ಲಿ ನಗರೋತ್ಥಾನ ಮೂರನೇ ಹಂತದಲ್ಲಿ ಸಿಸಿ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ. ಅದರ ಪಕ್ಕದ ಎರಡು ಬದಿಯಲ್ಲಿ ಪುಟ್‌ಪಾತ್ ನಿರ್ಮಾಣದಿಂದ ಅಂದ ಹೆಚ್ಚಲಿದೆ. ಗುತ್ತಿಗೆದಾರ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಅಲ್ಲದೇ ಹಳೆಶಹಾಬಾದನ ಮುಖಂಡರು ಹಾಗೂ ನಾಗರಿಕರು ಗುಣಮಟ್ಟದ ಕಾಮಗಾರಿಯನ್ನು ಗುತ್ತಿಗೆದಾರನಿಂದ ತೆಗೆದುಕೊಳ್ಳಬೇಕು. ಕಾಮಗಾರಿ ಕಳಪೆ ಕಂಡು ಬಂದಲ್ಲಿ ನಗರಸಭೆ ಅಧಿಕಾರಿಗಳಿಗೆ ದೂರು ಸಲ್ಲಿಸಿ ಎಂದು ಹೇಳಿದರು.
ನಗರಸಭೆ ಸದಸ್ಯರಾದ ಮಲ್ಲಿಕಾರ್ಜುನ ವಾಲಿ, ಇನಾಯತಖಾನ ಜಮಾದಾರ, ಶ್ವೇತಾ ನಾಟೇಕಾರ, ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ, ಎಇಇ ಶರಣು ಪೂಜಾರಿ, ಎಇ ಶಾಂತರೆಡ್ಡಿ ದಂಡಗುಲಕರ್, ಶಿವಕುಮಾರ ನಾಟೇಕಾರ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ಮಿರಾಜ ಸಾಹೇಬ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.