ಗ್ರಾಮೀಣ ರಸ್ತೆ-ದುರಸ್ತಿಗೆ ಆದ್ಯತೆ: ಗುತ್ತೇದಾರ
Team Udayavani, Feb 14, 2022, 12:30 PM IST
ಆಳಂದ: 2021-22ನೇ ಸಾಲಿನ ಕೆಕೆಆರ್ ಡಿಬಿ ಯೋಜನೆಯ 2.35 ಕೋಟಿ ರೂ. ಅನುದಾನದ ಅಡಿಯಲ್ಲಿ 2.35 ಕೋಟಿ ರೂ. ವೆಚ್ಚದ ಧಂಗಾಪುರ-ಭೂಸನೂರ ಮುಖ್ಯ ರಸ್ತೆ ನಿರ್ಮಾಣದ ಭೂಮಿ ಪೂಜೆಯನ್ನು ಶಾಸಕ ಸುಭಾಷ ಆರ್. ಗುತ್ತೇದಾರ ನೆರವೇರಿಸಿದರು.
ಆಳಂದ ಮತ್ತು ಅಫಜಲಪುರ ತಾಲೂಕಿಗೆ ಸಂಪರ್ಕ ಕಲ್ಪಿಸುವ ಪ್ರಮುಖವಾಗಿ ಧಂಗಾಪುರ-ಭೂಸನೂರ ರಸ್ತೆ ಕಾಮಗಾರಿಗೆ ಚಾಲನೆ ನೀಡುವುದರ ಮೂಲಕ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಈಡೇರಿಸಿದ ತೃಪ್ತಿ ನನ್ನದಾಗಿದೆ ಎಂದು ಹೇಳಿದರು.
ಪ್ರಮುಖ ಧಾರ್ಮಿಕ ಯಾತ್ರಾ ಸ್ಥಳವಾಗಿರುವ ಗಾಣಗಾಪುರಕ್ಕೆ ದೇಶದ ಮೂಲೆ ಮೂಲೆಯಿಂದ ಜನ ಬರುತ್ತಾರೆ. ಅವರ ಅನೂಕೂಲಕ್ಕಾಗಿ ಉತ್ತಮ ಗುಣಮಟ್ಟದ ರಸ್ತೆ ಅವಶ್ಯಕತೆ ಇತ್ತು. ಈ ಭಾಗದ ಜನರು ಬಹಳ ಸಲ ಈ ಕುರಿತು ಹೇಳಿದ್ದರು. ಈಗ ರಸ್ತೆ ನಿರ್ಮಾಣ ಕಾರ್ಯ ಆರಂಭವಾಗಿದೆ ಎಂದರು.
ಬಿಜೆಪಿ ಮುಖಂಡ ವೀರಣ್ಣ ಮಂಗಾಣಿ, ರಾಜಶೇಖರ ಮಲಶೆಟ್ಟಿ, ವನಿತೇಶ ಗುತ್ತೇದಾರ, ಅಶೋಕ ಗುತ್ತೇದಾರ, ಎಇಇ ಅರುಣಕುಮಾರ ಬಿರಾದಾರ ಹಾಗೂ ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
Kalaburagi: ವಕ್ಫ್ ರದ್ದುಗೊಳಿಸಿ ಸನಾತನ ಮಂಡಳಿ ರಚಿಸುವಂತೆ ಆಗ್ರಹಿಸಿ ಬೀದಿಗಿಳಿದ ಮಠಾಧೀಶರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.