ಎಪ್ರಿಲ್‌ನಿಂದ ಹೆಚ್ಚುವರಿ ಅಕ್ಕಿ; ಬಿಪಿಎಲ್ ಕಾರ್ಡುದಾರರಿಗೆ ಅನ್ವಯ
ಅನಿವಾಸಿ ಭಾರತೀಯರಿಗೆ ಮರಳಿ ತಾಯ್ನಾಡಿಗೆ; ಅಧಿವೇಶನದಲ್ಲಿ ರಾಜ್ಯಪಾಲರ ಘೋಷಣೆ
Team Udayavani, Feb 14, 2022, 1:08 PM IST
ಬೆಂಗಳೂರು: ಬಡ ಕುಟುಂಬಗಳಿಗೆ ಎಪ್ರಿಲ್ ಒಂದರಿಂದ ಹೆಚ್ಚುವರಿಯಾಗಿ ಒಂದು ಕೆಜಿ ಅಕ್ಕಿ ನೀಡಲು ಸರಕಾರ ನಿರ್ಧರಿಸಿದೆ ಎಂದು ರಾಜ್ಯಪಾಲ ಥಾವರ್‌ಚಂದ ಗೆಹ್ಲೋಟ್ ಘೋಷಿಸಿದ್ದಾರೆ.
ಸೋಮವಾರ ಆರಂಭವಾದ ಹತ್ತು ದಿನಗಳ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತ ನಾಡಿದ ಅವರು, ಪ್ರಸ್ತುತ ಬಿಪಿಎಲ್ ಕಾರ್ಡ್‌ದಾರರಿಗೆ 5 ಕೆ.ಜಿ. ಅಕ್ಕಿ ನೀಡಲಾಗುತ್ತಿದ್ದು, ಅದನ್ನು 6 ಕೆ.ಜಿ.ಗೆ ಏರಿಸಲಾಗುವುದು ಎಂದರು. ಜತೆಗೆ ವಿದೇಶದಲ್ಲಿರುವ ಭಾರತೀಯರ ಜ್ಞಾನ ವನ್ನು ಸ್ವದೇಶದಲ್ಲೇ ಬಳಸಿಕೊಳ್ಳಲು “ಮರಳಿ ತಾಯ್ನಾಡಿಗೆ’ ಯೋಜನೆ ಅನುಷ್ಠಾನ ಗೊಳಿಸಲಾಗುವುದು ಎಂದರು.
75ನೇ ಸ್ವಾತಂತ್ರ್ಯ ಅಮೃತ ಮಹೋ ತ್ಸವ ಸವಿನೆನಪಿಗಾಗಿ ಆಮೃತ ಗ್ರಾಮೀಣ ವಸತಿ ಯೋಜನೆಯಡಿ 750 ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ವಸತಿರಹಿತರನ್ನು ಗುರುತಿಸಿ ವಸತಿ ಕಲ್ಪಿ ಸಲು ಸರಕಾರ ಉದ್ದೇಶಿಸಿದೆ ಎಂದು ಹೇಳಿ ದರು. ಅಮೃತ ಗ್ರಾಮ ಪಂಚಾಯತ್ ಯೋಜನೆಯಡಿ 750 ಗ್ರಾಮಗಳನ್ನು ಆಯ್ಕೆ ಮಾಡಿ, ಚಾಲ್ತಿಯಲ್ಲಿರುವ ಯೋಜನೆಗಳ ಅನುದಾನ ಬಳಸಿ ಅಭಿವೃದ್ಧಿ ಮಾಡಿದ ಪ್ರತಿ ಗ್ರಾ. ಪಂ.ಗೆ 25 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗು ವುದು. ರಾಷ್ಟ್ರೀಯ ಶಿಕ್ಷಣ ನೀತಿ ಅಡಿ ಶೈಕ್ಷಣಿಕ, ಆಡಳಿತ ವ್ಯವಸ್ಥೆ ಪರಿಣಾಮ ಕಾರಿಯಾಗಿ ಅನುಷ್ಠಾನ ಗೊಳಿಸಲು ಸಮಗ್ರ ವಿಶ್ವವಿದ್ಯಾನಿಲಯ ಮತ್ತು ಕಾಲೇಜು ನಿರ್ವಹಣ ವ್ಯವಸ್ಥೆ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ ಎಂದರು.
ಕಂದಾಯ ಇಲಾಖೆಯು ದಾಖಲೆ ಮತ್ತು ನಕ್ಷೆ, ಆಕಾರ್ ಬಂದ್ ಮತ್ತಿತರ ಸಾರ್ವಜನಿಕ ಸೇವೆಗಳನ್ನು ಗಣಕೀಕರಣಗೊಳಿಸುತ್ತಿದೆ. ಮನೆ ಬಾಗಿಲಿಗೆ ಪಿಂಚಣಿ ಪಾವತಿ ವ್ಯವಸ್ಥೆ ಮಾಡಿ ಫಲಾನುಭವಿಗಳ ಪರಿಶೀಲನೆ ಮಾಡಿ 3.15 ಲಕ್ಷ ಮೃತ, ವಲಸೆ ಹಾಗೂ ಅನರ್ಹ ಫಲಾನುಭವಿಗಳ ಪತ್ತೆ ಮಾಡಿ ಪಿಂಚಣಿ ಸ್ಥಗಿತಗೊಳಿಸಿ 378 ಕೋಟಿ ರೂ. ಬೊಕ್ಕಸಕ್ಕೆ ವಾರ್ಷಿಕವಾಗಿ ಉಳಿತಾಯ ಮಾಡಲಾಗಿದೆ ಎಂದರು.
2021-22ನೇ ಸಾಲಿನಲ್ಲಿ ಅಕಾಲಿಕ ಮಳೆ ಹಾಗೂ ನೆರೆಯಿಂದ ದೊಡ್ಡ ಪ್ರಮಾಣದಲ್ಲಿ ನಷ್ಟವುಂಟಾಗಿದ್ದು, 85,862 ಸಂತ್ರಸ್ತ ಕುಟುಂಬಗಳಿಗೆ ತಲಾ 10 ಸಾವಿರ ರೂ. ಪರಿಹಾರ ನೀಡಲಾಗಿದೆ. ಮನೆ ಹಾನಿಗೆ 5 ಲಕ್ಷ, 3 ಲಕ್ಷ ಹಾಗೂ 50 ಸಾವಿರ ರೂ.ನಂತೆ 400.52 ಕೋಟಿ ರೂ. ನೆರವು ಒದಗಿಸಲಾಗಿದೆ. ಬೆಳೆ ನಷ್ಟಕ್ಕೆ 1,129.46 ಕೋ. ರೂ. ರೈತರ ಖಾತೆ ಗಳಿಗೆ ಜಮೆ ಮಾಡಲಾಗಿದೆ ಎಂದರು.
ಕನ್ನಡದಲ್ಲಿ ಮಾತು; ಸರಕಾರಕ್ಕೆ ಮೆಚ್ಚುಗೆ
“ರಾಜ್ಯಪಾಲನಾಗಿ ಕರ್ನಾಟಕದ ಜನತೆಗೆ ಸೇವೆ ಸಲ್ಲಿಸುವ ಅವಕಾಶ ಒದಗಿ ಬಂದಿದ್ದಕ್ಕೆ ನನಗೆ ತುಂಬಾ ಹೆಮ್ಮೆ ಹಾಗೂ ಸಂತೋಷ ಎನಿಸು ತ್ತಿದೆ’ ಎಂದು ಕನ್ನಡದಲ್ಲಿಯೇ ಮಾತು ಆರಂಭಿಸಿದ ರಾಜ್ಯಪಾಲರು, ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಸದಸ್ಯರಿಗೆ ಹೃತ್ಪೂರ್ವಕ ಸ್ವಾಗತ ಕೋರಿದರು. ನನ್ನ ಸರಕಾರ ಸಂಕಷ್ಟದ ಕಾಲದಲ್ಲೂ ಎಲ್ಲ ರಂಗಗಳಲ್ಲಿಯೂ ಅತ್ಯುತ್ತಮ ವಾಗಿ ಕಾರ್ಯನಿರ್ವಹಿಸಿ ಜನಪರ ತೀರ್ಮಾನ ಕೈಗೊಂಡು ಯೋಜನೆ ಗಳ ಅನುಷ್ಠಾನಿಸುತ್ತಿದೆ ಎಂದರು.
ಮುಂಭಾಗದ ಮೆಟ್ಟಿಲು ಮೂಲಕ ಪ್ರವೇಶ
ರಾಜ್ಯ ವಿಧಾನಸೌಧದ ಮುಂಭಾ ಗದ ಮೆಟ್ಟಿಲುಗಳ ಮೂಲಕ ವಿಧಾನ ಮಂಡಲದ ಜಂಟಿ ಅಧಿವೇಶನದ ಭಾಷಣ ಮಾಡಲು ವಿಧಾನಸೌಧ ಪ್ರವೇಶಿಸುವ ಮೂಲಕ ರಾಜ್ಯಪಾಲರು ದಶಕಗಳ ಹಿಂದಿನ ಸಂಪ್ರದಾಯಕ್ಕೆ ಮರು ಜೀವ ನೀಡಿದರು. ಅವರನ್ನು ಸಿಎಂ ಬೊಮ್ಮಾಯಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ ಹೂಗುತ್ಛ ನೀಡಿ ಸ್ವಾಗತಿಸಿದರು. ಎರಡು ದಶಕಗಳಿಂದ ಜಂಟಿ ಅಧಿವೇಶನಕ್ಕೆ ರಾಜ್ಯಪಾಲರು ವಿಧಾನಸೌಧ ಪ್ರವೇಶಿಸಲು ಮೆಟ್ಟಿಲುಗಳ ಕೆಳಗಡೆ ಯಿಂದ ಪ್ರವೇಶಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.