ಸರಕಾರದ ವಿರುದ್ಧ ಮೌನ ಪ್ರತಿಭಟನೆ: ಹರಿಪ್ರಸಾದ್
Team Udayavani, Feb 14, 2022, 9:30 PM IST
ಬೆಂಗಳೂರು: ಹೆಣ್ಣುಮಕ್ಕಳನ್ನು ಸರಕಾರ ನಡೆಸಿಕೊಳ್ಳುತ್ತಿರುವ ರೀತಿ ವಿರುದ್ಧ ನಾವು ಕಪ್ಪು ಬಟ್ಟೆ ಧರಿಸಿ ಮೌನ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಮೇಲ್ಮನೆ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಅಲ್ಲದೆ, ಸಚಿವ ಕೆ.ಎಸ್. ಈಶ್ವರಪ್ಪ ಅವರು ರಾಷ್ಟ್ರ ಧ್ವಜ ಬದಲಾವಣೆ ಮಾಡುವುದಾಗಿ ಹೇಳಿರುವುದು ರಾಷ್ಟ್ರದ್ರೋಹದ ಹೇಳಿಕೆಯಾಗಿದೆ. ಆದ್ದರಿಂದ ಅವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಬೇಕು. ರೈತರು ಕೆಂಪು ಕೋಟೆಯಲ್ಲಿ ಧ್ವಜ ಹಾರಿಸಿದಾಗ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿತ್ತು.
ಈಗ ಈಶ್ವರಪ್ಪ ವಿರುದ್ಧವೂ ಅಂಥದ್ದೇ ಮೊಕದ್ದಮೆ ದಾಖಲಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.