ಫೆ. 20 ರಂದು ಗುರ್ಮೆ ಗೋ ವಿಹಾರ ಲೋಕಾರ್ಪಣೆ

Team Udayavani, Feb 15, 2022, 1:42 PM IST

ಫೆ. 20 ರಂದು  ಗುರ್ಮೆ ಗೋ ವಿಹಾರ ಲೋಕಾರ್ಪಣೆ

ಕಾಪು: ಗುರ್ಮೆ ಫೌಂಡೇಶನ್ (ರಿ.) ಕಳತ್ತೂರು ವತಿಯಿಂದ ಕಾಪು ತಾಲೂಕಿನ ಕಳತ್ತೂರು ಗುರ್ಮೆಯಲ್ಲಿ ನೂತನವಾಗಿ ನಿರ್ಮಿಸಲಾದ ಗುರ್ಮೆ ಗೋ ವಿಹಾರ ಕೇಂದ್ರ ಲೋಕಾರ್ಪಣೆ ಮತ್ತು ದಿ| ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ ನಾಲ್ಕನೇ ಪುಣ್ಯತಿಥಿಯ ಪ್ರಯುಕ್ತ ಫೆ. 20ರಂದು ಕಳತ್ತೂರು ಗುರ್ಮೆಯಲ್ಲಿ ಕೀರ್ತನ – ಸಾಂತ್ವನ – ಯಕ್ಷಗಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗುರ್ಮೆ ಫೌಂಡೇಶನ್ ಅಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ ಹೇಳಿದರು.

ಮಂಗಳವಾರ ಗುರ್ಮೆಯಲ್ಲಿ ಪತ್ರಿಕಾಗೋಷ್ಡಿಯಲ್ಲಿ ಮಾತನಾಡಿದ ಅವರು, ಕೀರ್ತನ – ಸಾಂತ್ವನ – ಯಕ್ಷಗಾನ ಕಾರ್ಯಕ್ರಮದ ಅಂಗವಾಗಿ ಸಂಜೆ 4:00 ಗಂಟೆಗೆ ಶ್ರೀಕಾಂತ ಶೆಟ್ಟಿ ಕಾರ್ಕಳ ಮತ್ತು ಬಳಗ, ಸಂದೇಶ ನೀರುಮಾರ್ಗ ಮತ್ತು ಬಳಗ ಮಂಗಳೂರು ಇವರಿಂದ ಭಜನಾ ಸಂಕೀರ್ತನೆ ನಡೆಯಲಿದೆ. ಸಂಜೆ 4.30 ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಾಂತ್ವನ ಕಾರ್ಯಕ್ರಮದಡಿ ಸುಮಾರು 500 ಮಂದಿ ಅನಾರೋಗ್ಯ ಪೀಡಿತರಿಗೆ ಧನ ಸಹಾಯ, 280 ಮಂದಿ ಕೊರೊನಾ ವಾರಿಯರ್‍ಸ್ ಗೆ ಸಮ್ಮಾನ, ಪೌರ ಕಾರ್ಮಿಕರಿಗೆ ಗೌರವಾರ್ಪಣೆ ಸಹಿತವಾಗಿ ವಿವಿಧ ಸಮುದಾಯ ಆಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬಳಿಕ ಭಜನಾ ಸಂಕೀರ್ತನೆ ಮುಂದುವರಿಯಲಿದೆ. ರಾತ್ರಿ 8 ರಿಂದ ಶ್ರೀ ಗುರು ನರಸಿಂಹ ದಶಾವತಾರ ಯಕ್ಷಗಾನ ಮಂಡಳಿ ಸಾಲಿಗ್ರಾಮ ಇವರಿಂದ ದಕ್ಷ ಯಜ್ಞ – ರಾಜಾ ರುದ್ರಕೋಪ ಎಂಬ ಕಾಲಮಿತಿ ಯಕ್ಷಗಾನ ಬಯಲಾಟ ನಡೆಯಲಿದೆ.

ಸಾಧಕರಿಗೆ ಸಮ್ಮಾನ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಡಾ. ಜೀವನ್‌ ಕಿಣಿ ಮುಂಬಯಿ, ಸಾಹಿತಿ ಡಾ. ಭರತ್ ಕುಮಾರ್ ಪೊಲಿಪು, ಸೂರಿ ಶೆಟ್ಟಿ ಕಾಪು ಅವರನ್ನು ಸನ್ಮಾನಿಸಲಾಗುವುದು.

ಗಣ್ಯರ ಉಪಸ್ಥಿತಿ : ಸಮಗ್ರ ಕಾರ್ಯಕ್ರಮಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಗೌರಿ ಗದ್ದೆ ಸ್ವರ್ಣ ಪೀಠಿಕಾಪುರದ ಶ್ರೀ ವಿನಯ ಗುರೂಜಿ, ಸಚಿವರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್ ಕುಮಾರ್, ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಎಂ.ಜಿ.ಆರ್ ಗ್ರೂಫ್ಸ್‌ನ ಚಯರ್‌ಮೇನ್ ಕೆ. ಪ್ರಕಾಶ್ ಶೆಟ್ಟಿ ಬಂಜಾರ, ಮೂಡಬಿದ್ರೆ ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಗುರ್ಮೆ ಫೌಂಡೇಷನ್ ಟ್ರಸ್ಟ್ ನ ಟ್ರಸ್ಟಿ ಸತೀಶ್ ಪಿ. ಶೆಟ್ಟಿ ಗುರ್ಮೆ, ಪ್ರಮುಖರಾದ ಶಾಮ್ ಶೆಟ್ಟಿ ಮುಂಬಯಿ, ಶಿವರಾಮ ಶೆಟ್ಟಿ ಪೈಯ್ಯಾರು, ಅರುಣ್ ಶೆಟ್ಟಿ ಪಾದೂರು, ಕೃಷ್ಣಪ್ರಸಾದ್ ಶೆಟ್ಟಿ, ಗಣೇಶ್ ಶೆಟ್ಟಿ ಪೈಯ್ಯಾರು ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.