ರಾಷ್ಟ್ರಧ್ವಜಕ್ಕೆ ಅವಮಾನ-ಕ್ರಮಕ್ಕೆ ಕಾಂಗ್ರೆಸ್ ಆಗ್ರಹ
Team Udayavani, Feb 15, 2022, 2:24 PM IST
ಕಲಬುರಗಿ: ರಾಷ್ಟ್ರಧ್ವಜ ಕುರಿತಾಗಿ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ 1971ರ ಕಾಯ್ದೆಯ ಸೆಕ್ಸನ್ 2ರ ಸ್ಪಷ್ಟ ಉಲ್ಲಂಘನೆಯಾಗಿರುವುದರಿಂದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ.
ದೇಶದ ಕೆಂಪುಕೋಟೆ ಸೇರಿದಂತೆ ಎಲ್ಲೆಡೆಯೂ ರಾಷ್ಟ್ರಧ್ವಜದ ಬದಲು ಕೇಸರಿ ಧ್ವಜವನ್ನು ಹಾರಿಸುವ ಕುರಿತಾಗಿ ಹೇಳಿರುವುದು ಪ್ರಚೋದನಕಾರಿ ಆಗಿದೆ. ಭಾರತದ ರಾಷ್ಟ್ರಧ್ವಜವನ್ನು 135 ಕೋ.ರೂ. ಜನರು ಗೌರವಿಸುವುದಾಗಿದೆ. ಆದರೆ ಸಚಿವರ ಹೇಳಿಕೆ ಭಾರತದ ಪ್ರಜೆಗಳ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ. ಸಚಿವರ ಸಮಾಜದಲ್ಲಿ ಹೇಳಿಕೆಯು ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿರುತ್ತದೆ. ಈಗಾಗಲೇ ರಾಜ್ಯದಲ್ಲಿ ವಿವಿಧ ಸಮುದಾಯಗಳ ನಡುವಿನ ಸಂಬಂಧ ಅತ್ಯಂತ ಸೂಕ್ಷ್ಮವಾಗಿದ್ದು, ಇಂತಹ ಸಂದರ್ಭದಲ್ಲಿ ಸಚಿವರ ಹೇಳಿಕೆ ಅಶಾಂತಿ ಹಾಗೂ ಗಲಭೆ ಸೃಷ್ಟಿಸಲು ಪ್ರಚೋದನೆ ನೀಡಲಿದೆ. ಇದನ್ನೆಲ್ಲ ಗಮನಿಸಿ ರಾಜ್ಯದ ಶಾಂತಿ, ಸುವ್ಯವಸ್ಥೆ ಗಮನದಲ್ಲಿ ಇಟ್ಟುಕೊಂಡು ಸಂಬಂಧಪಟ್ಟ ಕಾನೂನಿನಡಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಾನೂನಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ, ಮಾಜಿ ಶಾಸಕ ಬಿ.ಆರ್. ಪಾಟೀಲ್, ಮುಖಂಡರಾದ ಡಾ| ಕಿರಣ ದೇಶಮುಖ, ಈರಣ್ಣ ಝಳಕಿ, ರಾಜೀವ್ ಜಾನೆ, ಮಜರ್ ಅಲ್ಲಂಖಾನ್ ಸೇರಿದಂತೆ ಮುಂತಾದವರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.