ಕಾಯ್ದೆ ರದ್ದತಿಗೆ ಆಗ್ರಹಿಸಿ ಚಳವಳಿ: ನಾಗೇಂದ್ರ
Team Udayavani, Feb 15, 2022, 2:32 PM IST
ಸಿಂಧನೂರು: ಜನ ವಿರೋಧಿ ತಿದ್ದುಪಡಿ ಕಾಯಿದೆಗಳನ್ನು ವಾಪಸ್ ಪಡೆಯಲು ಒತ್ತಾಯಿಸಿ ಮುಂದಿನ ಬಜೆಟ್ ಅಧಿವೇಶನ ಸಂದರ್ಭ ಬೆಂಗಳೂರಿನಲ್ಲಿ ಪರ್ಯಾಯ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಾಪುರ ನಾಗೇಂದ್ರ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಎಂಎಸ್‌ಪಿ ಖಾತ್ರಿ ಯೋಜನೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿದರೂ ಕೇಂದ್ರ ಸರಕಾರ ಸ್ಪಂದಿಸಿಲ್ಲ. ಆದರೆ. ಪರೋಕ್ಷವಾಗಿ ಹಿಂಬಾಗಿಲಿನ ಮೂಲಕ ಕೃಷಿಯನ್ನು ಕಾರ್ಪೂರೇಟ್ ಶಕ್ತಿಗಳ ಕೈಗೆ ಒಪ್ಪಿಸುವ ತಿದ್ದುಪಡಿ ಕಾಯಿದೆಗಳನ್ನು ಜಾರಿಗೆ ತರುತ್ತಿದೆ. ಕೃಷಿ ಸಂಬಂಧಿತ ಯೋಜನೆಯಲ್ಲಿ ಬೃಹತ್ ಕಂಪನಿಗಳನ್ನು ಲಿಂಕ್ ಮಾಡಲಾಗುತ್ತಿದೆ. ಈ ಹಿಂದೆ ತುರ್ತು ಪರಿಸ್ಥಿತಿ ಹೇರಿದ ಇಂದಿರಾ ಗಾಂಧಿ ಅವರಿಗೆ ಜನ ಬುದ್ಧಿ ಕಲಿಸಿದ್ದರು. ಎರಡು ಕ್ಷೇತ್ರದಲ್ಲಿ ಅವರನ್ನು ಸೋಲಿಸಿದ್ದರು. ನರೇಂದ್ರ ಮೋದಿ ಅವರಿಗೂ ಜನ ಬುದ್ಧಿ ಕಲಿಸುವ ದಿನ ದೂರವಿಲ್ಲ ಎಂದರು.
ಕಾರ್ಯಾಧ್ಯಕ್ಷ ಜಿ.ಎಂ. ವೀರಸಂಗಯ್ಯ, ಪ್ರಧಾನ ಕಾರ್ಯದರ್ಶಿ ಶಂಕಪ್ಪ ಮಾತನಾಡಿದರು. ಸಂಘದ ಮುಖಂಡರಾದ ನಾಗಪ್ಪ ಹುಂಡಿ, ಗೋಣಿ ಬಸಪ್ಪ, ರವಿಕುಮಾರ್, ಸುರೇಶ್ ಬಾಬು, ಶರಣಪ್ಪ.ಎ. ರೆಡಿ, ಮಲ್ಕನಗೌಡ, ಬಸನಗೌಡ ಪಾಟೀಲ್, ಜೆ.ಸಿದ್ದರಾಮನಗೌಡ, ರವಿಕುಮಾರ್ ಪೂಣಚ್ಚ ಸೇರಿದಂತೆ ಅನಕೇರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.