ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಕೇಳಿದವರಿಗೆ ಖಡಕ್ ಉತ್ತರ ನೀಡಿದ ನಾಯಕ ರೋಹಿತ್ ಶರ್ಮಾ
Team Udayavani, Feb 15, 2022, 4:30 PM IST
ಕೋಲ್ಕತ್ತಾ: ಮಾಜಿ ನಾಯಕ ವಿರಾಟ್ ಕೊಹ್ಲಿಯ ಫಾರ್ಮ್ ಬಗ್ಗೆ ಮಾತನಾಡುವವರಿಗೆ ನಾಯಕ ರೋಹಿತ್ ಶರ್ಮಾ ಖಡಕ್ ಉತ್ತರ ನೀಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೂ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ರೋಹಿತ್ ಶರ್ಮಾ ಅವರು ವಿರಾಟ್ ಫಾರ್ಮ್ ಬಗೆಗಿನ ಪ್ರಶ್ನೆಗಳಿಗೆ ಚಾಟಿ ಬೀಸಿದರು.
“ಇದು ನಿಮ್ಮಿಂದ (ಮಾಧ್ಯಮ) ಪ್ರಾರಂಭವಾಗುತ್ತದೆ ಎಂದು ನಾನು ಭಾವಿಸುತ್ತೇನೆ, ನಿಮ್ಮ ಕಡೆಯಿಂದ ಮಾತನಾಡುವುದನ್ನು ನಿಲ್ಲಿಸಿದರೆ, ಎಲ್ಲವನ್ನೂ ನೋಡಿಕೊಳ್ಳಲಾಗುವುದು” ಎಂದು ರೋಹಿತ್ ಹೇಳಿದರು.
‘’ನನ್ನ ದೃಷ್ಠಿಯಲ್ಲಿ ವಿರಾಟ್ ಉತ್ತಮ ಲಯದಲ್ಲಿದ್ದಾನೆ. ಈಗಾಗಲೇ ದಶಕಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ ಆಟಗಾರನಾತ. ಒತ್ತಡದ ಪರಿಸ್ಥಿತಿಗಳನ್ನು ಹೇಗೆ ನಿಭಾಯಿಸಬೇಕು ಎಂದು ಚೆನ್ನಾಗಿ ಬಲ್ಲ. ಎಲ್ಲವೂ ನಿಮ್ಮಿಂದ ಆರಂಭವಾಗಿರುವುದು. ನೀವು ಸುಮ್ಮನಿದ್ದರೆ ಎಲ್ಲವೂ ಸರಿಯಾಗುತ್ತದೆ” ವಿರಾಟ್ ಎಂದು ರೋಹಿತ್ ಶರ್ಮಾ ಬ್ಯಾಟ್ ಬೀಸಿದರು.
ಇದನ್ನೂ ಓದಿ:ಐಪಿಎಲ್ ಹರಾಜಿನ ಕೋಟಿವೀರರಿಗೆ ಸಿಗುವ ಅಸಲಿ ಮೊತ್ತವೆಷ್ಟು?
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಬಳಿಕದ ಪತ್ರಿಕಾಗೋಷ್ಠಿಯಲ್ಲೂ ರೋಹಿತ್ ಮಾಜಿ ನಾಯಕನ ಸಮರ್ಥನೆ ಮಾಡಿದ್ದರು. ನಮಗೆ ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಯಾವುದೇ ಚಿಂತೆಯಿಲ್ಲ ಎಂದು ಹೇಳಿದ್ದರು.
ತಂಡದಲ್ಲಿ ಬದಲಾವಣೆ: ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರು ಮಂಡಿರಜ್ಜು ನೋವಿಗೆ ಒಳಗಾಗಿದ್ದಾರೆ. ಹೀಗಾಗಿ ಅವರು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು ತಪ್ಪಿಸಿಕೊಳ್ಳಲಿದ್ದಾರೆ. ಸುಂದರ್ ಬದಲಿಗೆ ಚೈನಮನ್ ಸ್ಪಿನ್ನರ್ ಕುಲದೀಪ್ ಯಾದವ್ ಆಯ್ಕೆಯಾಗಿದ್ದಾರೆ.
ಕೆಲ ದಿನಗಳ ಹಿಂದೆ ಉಪನಾಯಕ ಕೆ ಎಲ್ ರಾಹುಲ್ ಅವರು ಗಾಯದ ಕಾರಣದಿಂದ ಮತ್ತು ಆಲ್ ರೌಂಡರ್ ಅಕ್ಷರ್ ಪಟೇಲ್ ಅವರು ಕೋವಿಡ್ ನಿಂದ ಸಂಪೂರ್ಣ ಚೇತರಿಸದ ಕಾರಣದಿಂದ ಟಿ20 ಸರಣಿಯಿಂದ ಹೊರಬಿದ್ದಿದ್ದರು.
ಫೆ.16ರಂದು ಮೊದಲ ಪಂದ್ಯ ನಡೆಯಲಿದೆ. ಎಲ್ಲಾ ಪಂದ್ಯಗಳು ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ನಡೆಯಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ಉಪನಾಯಕ) (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಋತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ಕುಲದೀಪ್ ಯಾದವ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
MUST WATCH
ಹೊಸ ಸೇರ್ಪಡೆ
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.