ಕನಸಿನಲ್ಲಿ ಕಂಡ ಶಿವಲಿಂಗ: ಬಂಡೆಗಳ ನಡುವೆ ಪತ್ತೆ.!
Team Udayavani, Feb 16, 2022, 2:07 PM IST
ನಾಗಮಂಗಲ: ತಾಲೂಕಿನ ನೀಲಕಂಠನಹಳ್ಳಿಯ ಜಗದೀಶ್ ಎಂಬುವವರಿಗೆ ಕಳೆದ ಎರಡು ವರ್ಷ ಗಳಿಂದ ಕಾರ್ತಿಕ ಮಾಸ ಮತ್ತು ಶಿವರಾತ್ರಿ ಸಮಯದಲ್ಲಿ ಗ್ರಾಮದಲ್ಲಿ ಸಮೀಪದ ಕರಿಕಲ್ಲು ಗುಡ್ಡದಲ್ಲಿ ಶಿವಲಿಂಗ ಇರುವಂತೆ ಕನಸು ಬೀಳುತ್ತಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರಿಗೆ ತಿಳಿಸಿ ಗುಡ್ಡದಲ್ಲಿದ್ದ ಬೇಲಿಯನ್ನು ತೆಗೆಸುವ ಸಂದರ್ಭದಲ್ಲಿ ಗುಡ್ಡದಲ್ಲಿದ್ದ ಬಂಡೆಗಳ ನಡುವೆ ಶಿವಲಿಂಗ, ಪಕ್ಕದಲ್ಲೇ ನಂದಿ ವಿಗ್ರಹವೂ ಸಹ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ.
ಗ್ರಾಮದ ಹಲವು ಜನರು ಶಿವಲಿಂಗ ಮತ್ತು ನಂದಿ ವಿಗ್ರಹ ಸಿಕ್ಕಿರುವ ಜಾಗದಲ್ಲಿ ಬಂಡೆಗಳು ಸೇರಿದಂತೆ ಗಿಡಗಳನ್ನು ತೆರವುಗೊಳಿಸಿ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ಶಿವಲಿಂಗಕ್ಕೆ ನೆರಳುಲಾಗುವಂತೆ ಚಪ್ಪರವನ್ನು ಹಾಕಿದ್ದಾರೆ. ಗ್ರಾಮದ ಹಲವು ಜನ ಅನುಮಾನಗೊಂಡರೆ, ಸುತ್ತಮುತ್ತಲಿನ ಗ್ರಾಮಗಳ ಜನರು ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ.
ನನಗೆ ಸುಮಾರು ಎರಡು ವರ್ಷದಿಂದ ಗ್ರಾಮದ ಕರಿಕಲ್ಲು ಗುಡ್ಡದಲ್ಲಿ ಲಿಂಗವಿರುವಂತೆ ಕನಸು ಬೀಳುತ್ತಿದ್ದ ಹಿನ್ನೆಲೆಯಲ್ಲಿ ಭೂಗರ್ಭಶಾಸ್ತ್ರಜ್ಞರನ್ನು ಕರೆಸಿ ಪರಿಶೀಲನೆ ನಡೆಸಲಾಗಿತ್ತು. ಅವರು ಗುಡ್ಡದಲ್ಲಿ ಕೆಲ ಜಾಗವನ್ನು ಸೂಚಿಸಿ ಈ ವ್ಯಾಪ್ತಿಯಲ್ಲಿ ಯಾವುದಾದರೂ ವಸ್ತುಗಳಿರಬಹುದು ಎಂದು ತಿಳಿಸಿದ್ದರು.
ಅದನ್ನು ಗ್ರಾಮದ ಜನರಿಗೆ ತಿಳಿಸಿ ಗುಡ್ಡವನ್ನು ನನ್ನ ಸ್ವಂತ ಹಣದಲ್ಲಿ ಸ್ವತ್ಛ ಮಾಡುವ ಸಮಯದಲ್ಲಿ ಬಂಡೆಗಳ ನಡುವೆ ಶಿವಲಿಂಗ ಮತ್ತು ನಂದಿ ವಿಗ್ರಹ ಪತ್ತೆಯಾಗಿದ್ದು, ಪೂಜೆ ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಗ್ರಾಮಸ್ಥರು ಮತ್ತು ಜ್ಯೋತಿಷಿಗಳ ಸಲಹೆ ಪಡೆದು ಒಂದು ಪುಟ್ಟ ದೇವಾಲಯವನ್ನು ನಿರ್ಮಾಣ ಮಾಡಲು ಕ್ರಮ ವಹಿಸುತ್ತೇನೆ ಎಂದು ಜಗದೀಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.