19ಕ್ಕೆ ಹೊಸಹುಡ್ಯ ಗ್ರಾಮದಲ್ಲಿ ಡೀಸಿ ಗ್ರಾಮ ವಾಸ್ತವ್ಯ
Team Udayavani, Feb 16, 2022, 2:32 PM IST
ಚಿಕ್ಕಬಳ್ಳಾಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನದ ಪ್ರಯುಕ್ತ ಫೆ.19ರಂದು ತಾಲೂಕಿನ ನಂದಿ ಹೋಬಳಿಯ ಹೊಸಹುಡ್ಯ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಎಲ್ಲಾ ಅಧಿಕಾರಿಗಳು ಗ್ರಾಮ ವಾಸ್ತವ್ಯ ಹೂಡಿ ಗ್ರಾಮಸ್ಥರ ಸಮಸ್ಯೆ ಆಲಿಸಿ ಪರಿಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಗ್ರಾಮ ವಾಸ್ತವ್ಯ ದಿನದಂದು ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಅಧಿಕಾರಿಗಳು ಹೊಸಹುಡ್ಯ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ,ಸ್ಥಳೀಯರ ಅಹವಾಲು ಹಾಗೂ ಅರ್ಜಿಗಳನ್ನುಸ್ವೀಕರಿಸಿ, ಸ್ಥಳದಲ್ಲೇ ವಿಲೇವಾರಿ ಮಾಡಲು ಅಗತ್ಯ ಕ್ರಮ ವಹಿಸುವರು ಎಂದು ಹೇಳಿದರು.
ಮಂಜೂರಾತಿ ಪತ್ರ: ಸರ್ಕಾರದ ವಿವಿಧ ಯೋಜನೆಗಳಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಲು ಇದೇವೇಳೆಕ್ರಮ ವಹಿಸಲಾಗುವುದು ಎಂದು ಹೇಳಿದರು.
ವಿವಿಧ ಶಿಬಿರ ಆಯೋಜನೆ: ಗ್ರಾಮ ವಾಸ್ತವ್ಯದಿನದಂದು ಹೊಸಹುಡ್ಯ ಗ್ರಾಮದಲ್ಲಿ ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಶಿಬಿರ, ಕೃಷಿ ವಸ್ತು ಪ್ರದರ್ಶನ ಆಯೋಜಿಸಲಾಗುವುದು. ಸರ್ಕಾರಿ ಯೋಜನೆಗಳ ಜಾಗೃತಿ ಮತ್ತು ಅನುಷ್ಠಾನಕ್ಕಾಗಿಮಾಹಿತಿ ಕೇಂದ್ರ, ಅರ್ಜಿ ಸ್ವೀಕಾರ ಕೇಂದ್ರ ಮತ್ತುಮಳಿಗೆಗಳನ್ನು ತೆರೆಯಲು ಅಧಿ ಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ವಿವಿಧ ಯೋಜನೆಗಳ ಮಂಜೂರಾತಿ ಪತ್ರ ವಿತರಣೆ: ಜೊತೆಗೆ, ಸಾಮಾಜಿಕ ಭದ್ರತಾ ಯೋಜನೆಗಳು, ಆಯುಷ್ಮಾನ್ ಭಾರತ್ ಆರೋಗ್ಯಕರ್ನಾಟಕ ಯೋಜನೆ, ಇ-ಶ್ರಮ್, ಪಡಿತರಯೋಜನೆ, ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ ಯೋಜನೆ, ಪೋಡಿ, ಹದ್ದುಬಸ್ತು, ಆಧಾರ್,ಪೌತಿಖಾತೆ, ಪಹಣಿ ದೋಷ ತಿದ್ದುಪಡಿ, ವಸತಿ ಯೋಜನೆಗಳು ಸೇರಿ ಸರ್ಕಾರದ ವಿವಿಧಯೋಜನೆಯಡಿ ಹೊಸಹುಡ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆಮಂಜೂರಾತಿ ಪತ್ರ ವಿತರಣೆ ಮಾಡಲು ಅಗತ್ಯಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್,ಉಪ ವಿಭಾಗಾಧಿಕಾರಿ ಸಂತೋಷ್ ಕುಮಾರ್,ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.