![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 17, 2022, 6:35 AM IST
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳಲ್ಲಿ ಪೆಟ್ರೋಲ್ ಬಂಕ್ ಸ್ಥಾಪನೆ, ವಾಣಿಜ್ಯ ಮಳಿಗೆ ನಿರ್ಮಾಣ ಸೇರಿದಂತೆ ಆದಾಯ ಗಳಿಕೆಯ ಪರ್ಯಾಯ ಮಾರ್ಗಗಳತ್ತ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಗೋವಿಂದ ಕಾರಜೋಳ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಎನ್.ಎ. ಹ್ಯಾರೀಸ್ ಪ್ರಸ್ತಾವಕ್ಕೆ ಸಚಿವ ಶ್ರೀರಾಮುಲು ಪರವಾಗಿ ಉತ್ತರಿಸಿದ ಅವರು, ಕೊರೊನಾ ಹಾವಳಿ, ನಾಲ್ಕು ವರ್ಷಗಳಿಂದ ಬಸ್ ದರ ಏರಿಕೆ ಮಾಡದಿರುವುದು, ಡೀಸೆಲ್ ದರ ಹೆಚ್ಚಳ ಕಾರಣಗಳಿಂದ ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ಇದನ್ನು ಲಾಭದಾಯಕ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಬಸ್ ನಿಲ್ದಾಣಗಳಲ್ಲಿ ಭವನ ನಿರ್ಮಿಸಿ ಆಸ್ಪತ್ರೆ ಸೇರಿದಂತೆ ಸಾರ್ವಜನಿಕ ಸೇವೆಯ ಸಂಸ್ಥೆಗಳಿಗೆ ಬಾಡಿಗೆಗೆ ನೀಡುವುದು ಮತ್ತಿತರ ಹಲವು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ತೆರಿಗೆ ವಂಚನೆ ಆರೋಪ; ಚೀನದ ಹುವಾಯ್ ಕಚೇರಿಗಳ ಮೇಲೆ ಐಟಿ ದಾಳಿ
ನಷ್ಟ: ಅಧ್ಯಯನ ನಡೆಸಿ
ಇದಕ್ಕೂ ಮುನ್ನ ಮಾತನಾಡಿದ ಹ್ಯಾರೀಸ್, ರಾಜ್ಯ ರಸ್ತೆ ಸಾರಿಗೆ ನಿಗಮಗಳ ನಷ್ಟಕ್ಕೆ ಕಾರಣಗಳೇನು ಎನ್ನುವ ಬಗ್ಗೆ ಅಧ್ಯಯನ ನಡೆಸಲು ಜಂಟಿ ಸದನ ಸಮಿತಿ ರಚಿಸಿ. ಮೂರು ವರ್ಷಗಳಲ್ಲಿ ನಾಲ್ಕೂ ನಿಗಮಗಳು 2900 ಕೋಟಿ ರೂ. ನಷ್ಟ ಅನುಭವಿಸಿವೆ. ನಾಲ್ಕೈದು ಬಸ್ ಇಟ್ಟುಕೊಂಡಿರುವವರು ಇಂದು ಲಾಭದಲ್ಲಿದ್ದಾರೆ. ಆದರೆ, ಸಾರಿಗೆ ಸಂಸ್ಥೆ ನಷ್ಟದಲ್ಲಿದೆ ಎಂದರು. ಇದಕ್ಕೆ ಮಧ್ಯಪ್ರವೇಶಿಸಿದ ಸ್ಪೀಕರ್ ಕಾಗೇರಿ, ಸಾರಿಗೆ ಸಂಸ್ಥೆಗಳು ಲಾಭಕ್ಕೆ ಬರುವ ಆಶಾಭಾವನೆ ಇದೆಯಾ ನಿಮಗೆ. ನಮ್ಮಲ್ಲಿ ಬಿಳಿ ಆನೆಗಳು ಸಾಕಷ್ಟಿವೆಯಲ್ಲವೇ, ಅವುಗಳನ್ನೇನು ಮಾಡೋದು ಎಂದು ಚಟಾಕಿ ಹಾರಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.