ನಾಯಕ ಸಮಾಜದ ಸಮಾನ ಮನಸ್ಕರಿಂದ ವಿಧಾನ ಸೌಧ ಚಲೋ ಚಳವಳಿ

Team Udayavani, Feb 17, 2022, 5:49 PM IST

21chalo

ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲಾತಿ ಜಾರಿಗೊಳಿಸುವುದು ಹಾಗೂ ನಕಲಿ ಜಾತಿ ಪ್ರಮಾಣ ಪತ್ರಗಳಿಗೆ ಕಡಿವಾಣ ಹಾಕಿವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ರೈಲ್ವೇ ನಿಲ್ದಾಣದಿಂದ ನಾಯಕ ಸಮಾಜದ ಸಮಾನ ಮನಸ್ಕರು ವಿಧಾನ ಸೌಧ ಚಲೋ ನಡೆಸಿದರು.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ಹೊರಟ ಪ್ರತಿಭಟನಾಕಾರರು, ಫ್ರೀಡಂ ಪಾರ್ಕ್ ಬಳಿ ಇರುವ ಮಹಾರಾಣಿ ಕಾಲೇಜು ಸರ್ಕಲ್ ವರೆಗೆ ಬೃಹತ್ ಮೆರವಣಿಗೆ ನಡೆಸಿದರು.

ಈ ವೇಳೆ ನ್ಯಾ. ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಆಗ್ರಹಿಸಿರುವ ಸಮಾನ ಮನಸ್ಕರು, ಶೇ.7.5 ಮೀಸಲಾತಿ ಜಾರಿಗೆ ಈಗಾಗಲೇ ನ್ಯಾ.ನಾಗಮೋಹನ್ ದಾಸ್ ವರದಿ ನೀಡಿದ್ದಾರೆ. ಆದರೆ ವರದಿ ಜಾರಿಗೊಳಿಸುತ್ತೇವೆ ಎಂದು ಸುಳ್ಳು ಹೇಳಿರುವ ರಾಜ್ಯ ಸರ್ಕಾರ, ಕೊಟ್ಟ ಮಾತು ತಪ್ಪಿ ವಚನಭ್ರಷ್ಟವಾಗಿದೆ ಎಂದು ಆಕ್ರೋಶ  ವ್ಯಕ್ತಪಡಿಸಿದರು.

ಇದನ್ನೂ ಓದಿ:ತೇರದಾಳ ಪುರಸಭೆ: 1.63 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆ

ಉತ್ತರ ಕರ್ನಾಟಕ ಭಾಗ ಸೇರಿದಂತೆ ಇಡೀ ರಾಜ್ಯದಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರಗಳ ಹಾವಳಿ ಹೆಚ್ಚಾಗಿದೆ. ಇದಕ್ಕೆ ಸರ್ಕಾರ ತಕ್ಷಣ ಸೂಕ್ತ ಕ್ರಮ ಕೈಗೊಂಡು ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ ತಡೆಯಬೇಕು. ಆದರೆ ಅದು ಬಿಟ್ಟು ಸರ್ಕಾರ ಈಗ ತಳವಾರ, ಪರಿವಾರವನ್ನು ಪರಿಶಿಷ್ಟ ಸಂಗಡಕ್ಕೆ ಸೇರಿಸಿ ಆದೇಶ ಹೊರಡಿಸಲಾಗಿದೆ. ಇದರಿಂದ ಮತ್ತಷ್ಟುಗಳು ಸಮಸ್ಯೆಗಳು ಉದ್ಭವವಾಗಿವೆ. ಈ ಸಮಸ್ಯೆಗೂ ತಕ್ಷಣ ಸ್ಪಷ್ಟ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಹಿಂದೆ ವಾಲ್ಮೀಕಿ ಸಮುದಾಯಕ್ಕಾಗಿ ಮೀಸಲಿಟ್ಟಿದ್ದ ಹಣದಲ್ಲಿ ಶೇ.70ರಷ್ಟು ಅನುದಾನವನ್ನು ಪುನಃ ಸೇರಿಸಿ ಈ ಬಾರಿಯ ಬಜೆಟ್‌ನಲ್ಲಿ ಸೇರಿಸಿ ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಬೇಕು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ತಕ್ಷಣ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ನಾಯಕ ಸಮಾಜದ ಸಮಾನ ಮನಸ್ಕರು ಹಾಗೂ ಕರ್ನಾಟಕ ನಾಯಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ರಮೇಶ್ ಹಿರೇಜಂಬೂರು ಆಗ್ರಹಿಸಿದರು.

ಪರಿಶಿಷ್ಟ ಪಂಗಡ ಸಮುದಾಯದ ಆದಿ ಕವಿ, ವಾಲ್ಮೀಕಿ ಸೃಷ್ಟಿಸಿದ ರಾಮನನ್ನು ಇಡೀ ಜಗತ್ತೇ ಈಗ ಪೂಜಿಸುತ್ತಿದೆ. ಆದರೆ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮಹರ್ಷಿ ವಾಲ್ಮೀಕಿಯನ್ನು ಕಡೆಗಣಿಸಲಾಗುತ್ತಿದೆ. ಅಯೋಧ್ಯೆಯ ರಾಮಮಂದಿರದ ಎದುರು ವಾಲ್ಮೀಕಿ ಬೃಹತ್ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ನಾಯಕ ಸಮಾಜದ ಸಮಾನ ಮನಸ್ಕರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ನಾಯಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ರಮೇಶ್ ಹಿರೇಜಂಬೂರು, ತುಮಕೂರಿನ ಭರತ್, ಜಯಸಿಂಹ, ಮಾರಣ್ಣ ಪಾಳೇಗಾರ, ಕುಪ್ಪೂರು ಶ್ರೀಧರ್, ಸಿಂಹ ಘರ್ಜನೆ ವೇದಿಕೆಯ ಮಾಲೂರು ವೆಂಕಟೇಶ್, ಪರಶುರಾಮ್, ಭಾರತಿ, ರಾಯಚೂರಿನ ಶರಣಬಸಪ್ಪ, ರಜನಿ ಎಂ.ಆರ್., ನೆಲಮಂಗಲದ ಅಶೋಕ್, ರವಿ ವಾಲ್ಮೀಕಿ ಸೇರಿದಂತೆ ರಾಜ್ಯ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಮುಖಂಡರು ಭಾಗವಹಿಸಿದ್ದರು

ಟಾಪ್ ನ್ಯೂಸ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಸಮುದ್ರದ ಮಧ್ಯೆ ಮೀನುಗಾರ ನಾಪತ್ತೆ

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಸಮುದ್ರದ ಮಧ್ಯೆ ಮೀನುಗಾರ ನಾಪತ್ತೆ

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.