ಹೆಚ್ಚುವರಿ ವಿದ್ಯುತ್ ಕಂಬ ಅಳವಡಿಸಿ
Team Udayavani, Feb 18, 2022, 6:00 PM IST
ಸಿರವಾರ: ಪಟ್ಟಣದ 6ನೇ ವಾರ್ಡ್ ವಿಜಯನಗರ ಕಾಲೋನಿಯಲ್ಲಿ ಹೆಚ್ಚುವರಿ ವಿದ್ಯುತ್ ಕಂಬ ಹಾಕಿ ವಿದ್ಯುತ್ ಬಲ್ಪ್ ಬದಲಾಯಿಸುವಂತೆ ವಾರ್ಡಿನ ಸದಸ್ಯ ಹಾಜಿಚೌದ್ರಿ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಸಲ್ಲಿಸಿದರು.
ವಿಜಯನಗರ ಕಾಲೋನಿಯಲ್ಲಿ ಈ ಹಿಂದೆ ಹಾಕಿದ ವಿದ್ಯುತ್ ಕಂಬಗಳು ಒಂದು ಕಂಬದಿಂದ ಇನ್ನೊಂದು ಕಂಬಕ್ಕೆ ಬಹಳ ಅಂತರವಿದ್ದು, ಗಾಳಿ-ಮಳೆಗೆ ವೈರ್‌ಗಳು ಕೆಳಗಡೆ ತೂಗಾಡಿ ಕಂಬಗಳು ಭೂಮಿಗೆ ಬೀಳುವಂತಾಗಿವೆ. ಈ ಹಿಂದೆ ನಾಲ್ಕೈದು ಬಾರಿ ಸಾರ್ವಜನಿಕರು ಓಡಾಡುವ ಸ್ಥಳದಲ್ಲಿ ವಿದ್ಯುತ್ ವೈರ್ ಹರಿದು ಬಿದ್ದಿದ್ದು, ಅದೃಷ್ಟವಶಾತ್ ಯಾರಿಗೂ ಏನು ಆಗಿರುವುದಿಲ್ಲ. ಇದರಿಂದ ಕಾಲೋನಿಯ ನಿವಾಸಿಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಇದರಿಂದ ಏನಾದರೂ ಅನಾಹುತ ಸಂಭವಿಸಬಹುದು. ಜೆಸ್ಕಾಂ ಅಧಿಕಾರಿಗಳು ತ್ವರಿತವಾಗಿ ಹೊಸ ವಿದ್ಯುತ್ ವೈರ್ ಅಳವಡಿಸಿ ಹೆಚ್ಚುವರಿ ಕಂಬಗಳನ್ನು ಅಳವಡಿಸಿಕೊಡಬೇಕು ಎಂದು ಮನವಿ ಸಲ್ಲಿಸಿದರು.
ಮಹ್ಮದ್ ಹುಸೇನ್, ಮಲ್ಲಯ್ಯ ಲಾರಿ, ಮಹಿಬೂಬ ಮಾಸ್ಟರ್, ಚಂದ್ರು ಹಡಪದ, ರಫಿ, ದಸ್ತಗಿರಿ, ಮಲ್ಲಯ್ಯ, ಬಂದೇನವಾಜ್, ಅಜೀಜ್, ರಂಗನಾಥ, ಮಹಿಬೂಬ ಕಂಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.