ಶಾಲೆಗೆ ಗೈರಾದ ವಿದ್ಯಾರ್ಥಿನಿಯರು

ಹಿಜಾಬ್‌ ನಿರ್ಬಂಧದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಇಳಿಮುಖವಾಗಿತ್ತು.

Team Udayavani, Feb 18, 2022, 6:04 PM IST

ಶಾಲೆಗೆ ಗೈರಾದ ವಿದ್ಯಾರ್ಥಿನಿಯರು

ಗದಗ: ನಗರದಲ್ಲಿ ಹಿಜಾಬ್‌ ವಿವಾದ ದಿನದಿಂದ ದಿನಕ್ಕೆ ತಾರಕ್ಕೇರುತ್ತಿದೆ. ನಗರದ ವಿವಿಧ ಶಾಲಾ-ಕಾಲೆಜುಗಳಲ್ಲಿ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು, ಗುರುವಾರ ಶಾಲಾ-ಕಾಲೇಜಿಗೆ ಗೈರು ಹಾಜರಾಗುವ ಮೂಲಕ ತರಗತಿಗಳನ್ನು ಬಹಿಷ್ಕರಿಸಿದ್ದು, ನಗರದ ಉರ್ದು ಪ್ರೌಢಶಾಲೆಗೆ ಕೇವಲ 8 ವಿದ್ಯಾರ್ಥಿನಿಯರು ಹಾಜರಾಗಿದ್ದರು.

ನಗರದ ಪಂ.ಪುಟ್ಟರಾಜು ಕವಿಗವಾಯಿಗಳ ಬಸ್‌ ನಿಲ್ದಾಣ ಸಮೀಪದ ಉರ್ದು ಪ್ರೌಢ ಶಾಲೆಯಲ್ಲಿ ಕಳೆದ ಸೋಮವಾರ ಕೆಲ ವಿದ್ಯಾರ್ಥಿನಿಯರು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ್ದರಿಂದ ವಿವಾದ ತೀವ್ರ ಸ್ವರೂಪ ಪಡೆದಿತ್ತು. ಬುಧವಾರ ಯಾವುದೇ ಗದ್ದಲ ಇಲ್ಲವಾಗಿತ್ತಾದರೂ, ಗುರುವಾರ ಬಹುತೇಕ ವಿದ್ಯಾರ್ಥಿನಿಯರು ಶಾಲೆಗೆ ಗೈರು ಹಾಜರಾಗಿದ್ದಾರೆ.

ಶಾಲೆಯಲ್ಲಿ 8 ರಿಂದ 10ನೇ ತರಗತಿ ವರೆಗೆ ಒಟ್ಟು 221 ವಿದ್ಯಾರ್ಥಿನಿಯರಿದ್ದು, ಈ ಪೈಕಿ ಕೇವಲ 8 ವಿದ್ಯಾರ್ಥಿನಿಯರು ಹಾಜರಾಗಿದ್ದರು. 10ನೇ ತರಗತಿಯಲ್ಲಿ 86 ವಿದ್ಯಾರ್ಥಿಗಳಲ್ಲಿ ಮೂವರು, 8ನೇ ತರಗತಿಯ 68 ವಿದ್ಯಾರ್ಥಿಗಳ ಪೈಕಿ ಐವರು ಮಾತ್ರ ಹಾಜರಾಗಿದ್ದು, 9ನೇ ತರಗತಿಯ 67 ವಿದ್ಯಾರ್ಥಿಗಳ ಪೈಕಿ ಯಾರೊಬ್ಬರೂ ಶಾಲೆಗೆ ಹಾಜರಾಗಿಲ್ಲ. ಹೀಗಾಗಿ, ಶಾಲೆಯಲ್ಲಿ ವಿದ್ಯಾರ್ಥಿಗಳಿಲ್ಲದೇ ತರಗತಿ ಕೊಠಡಿಗಳು ಬಿಕೋ ಎನ್ನುತ್ತಿದ್ದರೆ, ಮಕ್ಕಳಿಗಾಗಿ ಶಿಕ್ಷಕರು ಕಾದು ಕೂರುವಂತಾಯಿತು.

ಇನ್ನು, ಆಂಗ್ಲೋ ಉರ್ದು ಶಾಲೆಯಲ್ಲೂ ಹಿಜಾಬ್‌ ನಿರ್ಬಂಧದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಇಳಿಮುಖವಾಗಿತ್ತು. ಪ್ರೌಢಶಾಲೆ ಹಾಗೂ ಪದವಿ ಪೂರ್ವ ತರಗತಿಗಳಲ್ಲೂ ಬೆರಳೆಣಿಕೆಯಷ್ಟು ಮಾತ್ರ ವಿದ್ಯಾರ್ಥಿನಿಯರು ಗೈರಾಗಿದ್ದರು ಎಂದು ತಿಳಿದು ಬಂದಿದೆ. ಕಾಲೇಜಿನಿಂದ ವಾಪಸ್‌: ಇಲ್ಲಿನ ಹಳೇ ಕೋರ್ಟ್‌ ಕಟ್ಟಡದಲ್ಲಿರುವ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಹಿಜಾಬ್‌ಗ ಅವಕಾಶ ನೀಡದಿರುವುದನ್ನು ಖಂಡಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಮನೆಗೆ ವಾಪಸ್ಸಾದರು.

ಇದಕ್ಕೂ ಮುನ್ನ ಕಾಲೇಜಿಗೆ ಪ್ರವೇಶಿಸಲು ಅನುಮತಿ ಕೋರಿದರು. ಅದಕ್ಕೆ ನಿರಾಕರಿಸಿದ ಪೊಲೀಸ್‌ ಸಿಬ್ಬಂದಿ, ತರಗತಿ ಕೋಣೆ ವರೆಗೂ ಹಿಜಾಬ್‌ ಧರಿಸಲು ಅವಕಾಶವಿದೆ. ಆದರೆ, ತರಗತಿಯಲ್ಲಿ ಹಿಜಾಬ್‌ಗ ಅವಕಾಶ ನೀಡಲಾಗದು. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಮನವರಿಕೆ ಮಾಡಿಕೊಡಲು ಯತ್ನಿಸಿದರಾದರೂ ಫಲಿಸಲಿಲ್ಲ.

ತರಗತಿಯಲ್ಲೂ ಹಿಜಾಬ್‌ ಧರಿಸಲು ಅವಕಾಶ ನೀಡುವುದಾದರೆ ಮಾತ್ರ ನಾವು ಕಾಲೇಜಿಗೆ ಬರುತ್ತೇವೆ ಎಂದು ಪಟ್ಟು ಹಿಡಿದ ವಿದ್ಯಾರ್ಥಿನಿಯರು, ಹಿಜಾಬ್‌ ಬೇಡವೆಂದಾದರೆ, ನಮಗೂ ತರಗತಿ ಬೇಡ. ಮುಂದೆ ಪರೀಕ್ಷೆ ಬರೆಯದಿದ್ದರೂ, ಚಿಂತೆ ಇಲ್ಲ. ನಾವು ನಮ್ಮ ಧರ್ಮವನ್ನು ಬಿಡೆವು ಎಂದು ಕಡ್ಡಿ ಮುರಿದಂತೆ ಹೇಳಿ, ಮನೆಯತ್ತ ಹೆಜ್ಜೆ ಹಾಕಿದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.