“ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ’ ರಚನೆ; ಆಡಳಿತ ಸುಧಾರಣ ಆಯೋಗ ಶಿಫಾರಸು
Team Udayavani, Feb 19, 2022, 5:40 AM IST
ಬೆಂಗಳೂರು: ಸರಕಾರದ ವಿವಿಧ ಇಲಾಖೆಗಳಲ್ಲಿ, ನಿಗಮ ಮಂಡಳಿಗಳಲ್ಲಿನ ಅನುಪಯುಕ್ತ ವೆಚ್ಚ ತಡೆಯಲು ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ’ ರಚಿಸಬಹುದು ಎಂದು ಕರ್ನಾಟಕ ಆಡಳಿತ ಸುಧಾರಣ ಆಯೋಗ-2 ಸರಕಾರಕ್ಕೆ ಶಿಫಾರಸು ಮಾಡಿದೆ. ಆಯೋಗದ 2ನೆಯ ಹಾಗೂ 3ನೆಯ ವರದಿಯನ್ನು ಅಧ್ಯಕ್ಷ ಟಿ.ಎಂ. ವಿಜಯಭಾಸ್ಕರ್ ಶುಕ್ರವಾರ ಮುಖ್ಯಮಂತ್ರಿಗೆ ಸಲ್ಲಿಸಿದರು.
ಈ ಎರಡೂ ವರದಿಗಳಲ್ಲಿ ಸಮಾಜ ಕಲ್ಯಾಣ, ಅಲ್ಪಸಂಖ್ಯಾಕರ ಕಲ್ಯಾಣ, ಒಳಾಡಳಿತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ನಗರಾ ಭಿವೃದ್ಧಿ, ಇಂಧನ ಸಹಿತ ಎಂಟು ಇಲಾಖೆಗಳಿಗೆ ಸಂಬಂಧಿಸಿ 588 ಸಾಮಾನ್ಯ, 508 ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಒಟ್ಟು 1,165 ಶಿಫಾರಸುಗಳಿವೆೆ.
ಪ್ರಮುಖ ಶಿಫಾರಸುಗಳು
– ಸರಕಾರದ ವಿವಿಧ ಇಲಾಖೆ ಗಳಲ್ಲಿ, ನಿಗಮ ಮಂಡಳಿಗಳಲ್ಲಿನ ಅನುಪಯುಕ್ತ ವೆಚ್ಚ ತಡೆಯಲು ಅನುಪಯುಕ್ತ ವೆಚ್ಚ ತಡೆ ಕಾರ್ಯಪಡೆ’ ರಚಿಸಬಹುದು.
– ಎಲ್ಲ ಇಲಾಖೆಗಳ ಗ್ರೂಪ್ ಸಿ ಮತ್ತು ಡಿ ನೌಕರರ ವರ್ಗಾವಣೆಯನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ಮಾಡಲು ಕಾಯ್ದೆ ಜಾರಿ.
– ಎಲ್ಲ ಅಂಚೆ ಕಚೇರಿಗಳನ್ನು ರಾಜ್ಯ ಸರಕಾರದ ಸೇವೆಗಳನ್ನು ಒದಗಿಸಲು ಬಳಸಿಕೊಳ್ಳಬಹುದು.
– ಸಾರ್ವಜನಿಕ ಉದ್ಯಮ ಗಳ ಇಲಾಖೆಯನ್ನು ಆರ್ಥಿಕ ಇಲಾಖೆಯಲ್ಲಿ ವಿಲೀನ.
– ಹೊರಗುತ್ತಿಗೆ ಸಿಬಂದಿ ನೇಮಕ ಸಂದರ್ಭ ಎಸ್ಸಿ, ಎಸ್ಟಿ ವರ್ಗಗಳಿಗೆ ಅಗತ್ಯ ಪ್ರಾತಿನಿಧ್ಯ ನೀಡಬೇಕು.
– ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ನಾಗರಿಕ ಸೇವೆಗಳ ಸಹಾಯ ಕೇಂದ್ರ ಸ್ಥಾಪಿಸಬೇಕು.
– ಪೊಲೀಸ್ ಇಲಾಖೆಯ ಕಾನ್‌ಸ್ಟೆಬಲ್, ಸಬ್ ಇನ್‌ಸ್ಪೆಕ್ಟರ್‌ವರೆಗಿನ ಗೆಜೆಟೆಡ್ ಅಲ್ಲದ ಹುದ್ದೆಗಳ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ.
– ಗ್ರಾ. ಪಂ. ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಾಮಾಜಿಕ ಭದ್ರತಾ ಪಿಂಚಣಿಗಳ ಅರ್ಜಿ ಪಡೆದು ಶಿಫಾರಸು ಮಾಡುವ ಅಧಿಕಾರ ನೀಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.