ಕೆಪಿಎಸ್ಸಿ ಸಂದರ್ಶನ ನಿಯಮ ಬದಲಾವಣೆ
ಅಂಕ 50ರಿಂದ 25ಕ್ಕೆ ಇಳಿಕೆ: ಸಂಪುಟ ಸಭೆಯಲ್ಲಿ ನಿರ್ಧಾರ
Team Udayavani, Feb 19, 2022, 7:00 AM IST
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಸಂದರ್ಶನ(ವ್ಯಕ್ತಿತ್ವ ಪರೀಕ್ಷೆ)ಕ್ಕೆ ಇನ್ನು ಮುಂದೆ 25 ಅಂಕ ಮಾತ್ರ ಇರಲಿದೆ. ಇಂಥದ್ದೊಂದು ಮಹತ್ವದ ನಿರ್ಣಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಜರಗಿದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಮೊದಲು ಸಂದರ್ಶನಕ್ಕೆ 200 ಅಂಕಗಳಿದ್ದವು. ವ್ಯಕ್ತಿತ್ವ ಪರೀಕ್ಷೆಯ ಅಂಕದಲ್ಲಿ ಅಕ್ರಮ ಆಗುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ 50 ಅಂಕಕ್ಕೆ ಇಳಿಸಲಾಗಿತ್ತು. ಈಗ 25 ಅಂಕಕ್ಕೆ ನಿಗದಿ ಮಾಡಲು ತೀರ್ಮಾನಿಸಲಾಗಿದೆ.
ಜತೆಗೆ ಕರ್ನಾಟಕ ಗೆಜೆಟೆಡ್ ಪ್ರೊಬೆಷನರ್ (ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ತಿದ್ದುಪಡಿ ನಿಯಮ-2022ಕ್ಕೆ ಅನುಮೋದನೆ ಸಂಪುಟ ನೀಡಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಸದಸ್ಯರ ಸ್ಥಾನ ಭರ್ತಿ ಮಾಡಲು ಮುಖ್ಯಮಂತ್ರಿಯವರಿಗೆ ಅಧಿಕಾರ ನೀಡಲು ತೀರ್ಮಾನಿಸಲಾಯಿತು.
ಕರ್ನಾಟಕ ಸಿವಿಲ್ ಸೇವೆ (ನೇರ ನೇಮಕಾತಿ) 1ನೇ ಹಾಗೂ 2ನೇ ತಿದ್ದುಪಡಿ ನಿಯಮ, ಕರ್ನಾಟಕ ಸಾಮಾನ್ಯ ಸೇವೆ ವೃಂದ ಮತ್ತು ನೇಮಕಾತಿ ತಿದ್ದುಪಡಿ ನಿಯಮ, ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸೇವೆಗಳು ವೃಂದ ಮತ್ತು ನೇಮಕಾತಿ ನಿಯಮಗಳಿಗೂ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ, ತಾಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮೆಡಿಕಲ್ ಗ್ಯಾಸ್ ಪೈಪ್‌ಲೈನ್ ಅಳವಡಿಸುವ 22.41 ಕೋ. ರೂ. ಮೊತ್ತದ ಯೋಜನೆಗೂ ಸಂಪುಟ ಒಪ್ಪಿಗೆ ನೀಡಿದೆ.
ನಂದಿ ಬೆಟ್ಟದಲ್ಲಿ ರೋಪ್‌ವೇಗೆ ಅನುಮೋದನೆ
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ಸಾರ್ವ ಜನಿಕ ಖಾಸಗಿ ಸಹಭಾಗಿತ್ವದಲ್ಲಿ 93.40 ಕೋ. ರೂ. ವೆಚ್ಚದಲ್ಲಿ ಪ್ರಯಾಣಿಕರ ರೋಪ್ ವೇ ಅಭಿವೃದ್ಧಿ ಮತ್ತು ಕಾರ್ಯಾಚರಣೆಗೆ ಟೆಂಡರ್ ಆಹ್ವಾನಿಸಲೂ ಅನುಮೋದನೆ ನೀಡಲಾಗಿದೆ. ಬೆಟ್ಟದ ತಪ್ಪಲಿನಿಂದ ಸುಮಾರು 2.93 ಕಿ.ಮೀ. ಎತ್ತರದ ರೋಪ್ ವೇ ನಿರ್ಮಿಸಿ ಪ್ರವಾಸಿ ಗರನ್ನು ಕರೆದೊಯ್ಯುವುದು ಯೋಜನೆ ಉದ್ದೇಶ.
ಲ್ಯಾಂಡಿಂಗ್
ಸ್ಟೇಷನ್ (ಇಳಿಯುವ ಸ್ಥಳ) ಬೆಟ್ಟದ ತಳಭಾಗ ಹಾಗೂ ಮೇಲ್ಭಾಗದ ಎರಡೂ ಕಡೆ ಇರುವಂತೆ ಯೋಜನೆ ರೂಪಿಸಲಾಗಿದೆ. ಇದರಲ್ಲಿ ಒಟ್ಟು 18 ಟವರ್‌ಗಳನ್ನು ನಿರ್ಮಿಸಲಾಗುತ್ತದೆ. ರೋಪ್ ವೇಯಲ್ಲಿ 50 ಕ್ಯಾಬಿನ್‌ಗಳು ಇರಲಿದ್ದು, ಪ್ರತಿಯೊಂದರಲ್ಲೂ 10 ಮಂದಿ ಪ್ರಯಾಣಿಸಬಹುದು. ಒಟ್ಟು 28 ನಿಮಿಷಗಳಲ್ಲಿ ಕ್ರಮಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.