ಮಂಗಳೂರು : ಕಸ್ಟಡಿಯಲ್ಲಿದ್ದ ಕಳವು ಪ್ರಕರಣದ ಆರೋಪಿ ಹಠಾತ್ ಸಾವು
ಕಬ್ಬಿಣ ಸರಳುಗಳನ್ನು ಇಬ್ಬರು ಕದ್ದುಕೊಂಡು ಹೋಗುತ್ತಿರುವುದು ಗಮನಕ್ಕೆ ಬಂದಿದೆ.
Team Udayavani, Feb 19, 2022, 10:20 AM IST
ಮಂಗಳೂರು, ಫೆ. 18: ನಗರದಲ್ಲಿ ನಡೆದ ಕಳ್ಳತನ ಪ್ರಕರಣ ವೊಂದಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಲ್ಲಿ ಓರ್ವ ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ಹಠಾತ್ ಅನಾರೋಗ್ಯಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶಿಸಿದ್ದಾರೆ. ನಗರದ ಉರ್ವ ಮಾರ್ಕೆಟ್ ಸಮೀಪದ ನಿವಾಸಿ ರಾಜೇಶ್ (30) ಸಾವನ್ನಪ್ಪಿದ ಯುವಕ. ಇನ್ನೋರ್ವ ಆರೋಪಿಯನ್ನು ಸುರತ್ಕಲ್‌ನ ಸತೀಶ (35) ಎಂದು ಗುರುತಿಸಲಾಗಿದೆ ನಗರದ ಬಂದರು ಠಾಣೆ ಪೊಲೀಸರು ಶುಕ್ರವಾರ ಬೆಳಗ್ಗಿನ ಜಾವ 3.30ರ ವೇಳೆಗೆ ನಗರದಲ್ಲಿ ಗಸ್ತು ತಿರುಗುತ್ತಿದ್ದಾಗ, ಕೆಎಂಸಿ ಜ್ಯೋತಿ ಜಂಕ್ಷನ್ ಬಳಿ ಸ್ಮಾರ್ಟ್ ಸಿಟಿಗೆ ಸೇರಿದ ಕಬ್ಬಿಣ ಸರಳುಗಳನ್ನು ಇಬ್ಬರು ಕದ್ದುಕೊಂಡು ಹೋಗುತ್ತಿರುವುದು ಗಮನಕ್ಕೆ ಬಂದಿದೆ.
ಕೂಡಲೇ ಗಸ್ತು ನಿರತ ಪೊಲೀಸರು ಅವರನ್ನು ಹಿಡಿದು, ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆರೋಪಿಗಳಿಬ್ಬರನ್ನು ಬಂದರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ. ಆದರೆ ಅಪರಾಹ್ನ 3.20ರ ವೇಳೆಗೆ ರಾಜೇಶ್‌ನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ತತ್‌ಕ್ಷಣ ಆತನನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಅಷ್ಟರಲ್ಲಾಗಲೇ ರಾಜೇಶ್ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸಂಬಂಧಿಕರ ಅಳಲು ಪೊಲೀಸ್ ಕಸ್ಟಡಿಯಲ್ಲಿರುವಾಗಲೇ ರಾಜೇಶ್ ಮೃತಪಟ್ಟಿದ್ದು, ಸ್ನೇಹಿತರು, ಸಂಬಂಧಿಕರ ಅಸಮಾಧಾನಕ್ಕೆ ಕಾರಣ ವಾಗಿದೆ. ರಾಜೇಶ್ ಹಠಾತ್ ಸಾವಿನ ಬಗ್ಗೆ ಅವರು ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ಎಸಿಪಿ ನೇತೃತ್ವದಲ್ಲಿ ತನಿಖೆ ಈ ಬಗ್ಗೆ ಸಮಗ್ರ ತನಿಖೆಗೆ ಉತ್ತರ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅವರಿಗೆ ವಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.