ಕೆರೆ ನಿರ್ಮಾಣಕ್ಕೆ ಸಿಎಂಗೆ 80ಕೋಟಿ ರೂ. ಪ್ರಸ್ತಾವನೆ
Team Udayavani, Feb 19, 2022, 11:25 AM IST
ಆಳಂದ: ತಾಲೂಕಿನ ಜಿಡಗಾ ನವಕಲ್ಯಾಣ ಮಠದ 40 ಎಕರೆ ಪ್ರದೇಶದಲ್ಲಿ ಉದ್ದೇಶಿತ ಕೆರೆ ನಿರ್ಮಾಣಕ್ಕೆ ಸರ್ಕಾರದಿಂದ 80 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಶ್ರೀ ಮಠದ ಪೀಠಾಧಿಪತಿ ಷಡಕ್ಷರಿ ಶಿವಯೋಗಿ ಡಾ| ಮುರುಘರಾಜೇಂದ್ರ ಮಹಾ ಸ್ವಾಮೀಜಿ ಮುಖ್ಯಮಂತ್ರಿಗಳಿಗೆ ಶುಕ್ರವಾರ ಪ್ರಸ್ತಾವನೆ ಸಲ್ಲಿಸಿದರು.
ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಶಾಸಕರನ್ನು ಒಳಗೊಂಡ ನಿಯೋಗದೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶ್ರೀಗಳು, ಆಳಂದ ತಾಲೂಕಿನ ಶ್ರೀಕ್ಷೇತ್ರ ಜಿಡಗಾ ನವಕಲ್ಯಾಣ ಮಠದ ನಿವೇಶನದಲ್ಲಿ ಕೆರೆ ನಿರ್ಮಾಣಕ್ಕೆ ಈಗಾಗಲೇ 30 ಎಕರೆ ಪ್ರದೇಶವನ್ನು ಘೋಷಿಸಲಾಗಿದೆ. ಆದರೆ ಬೃಹತ್ ಪ್ರಮಾಣದಲ್ಲಿ ಕೆರೆ ನಿರ್ಮಾಣವಾದರೆ ಹೆಚ್ಚಿನ ರೈತರಿಗೆ ಅನುಕೂಲವಾಗುತ್ತದೆ ಎಂದು ಮನಗಂಡು 10 ಎಕರೆ ಸೇರಿಸಿ ಒಟ್ಟು 40 ಎಕರೆ ಒಂದೇ ಪ್ರದೇಶದಲ್ಲಿ ಕೆರೆ ನಿರ್ಮಾಣಕ್ಕೆ ಕ್ರಿಯಾ ಯೋಜನೆ ರೂಪಿಸಲಾಗಿದೆ.
ಇದಕ್ಕೆ ಆರಂಭಿಕವಾಗಿ ಸುಮಾರು 80 ಕೋಟಿ ರೂ. ತಗಲುವ ವೆಚ್ಚದ ಕುರಿತು ಅಂದಾಜಿಸಲಾಗಿದೆ. ಆರಂಭಿಕವಾಗಿ 80 ಕೋಟಿ ರೂ. ಬಿಡುಗಡೆ ಮಾಡಿದರೆ, ಸುತ್ತಮುತ್ತಲಿನ ಜಮೀನುಗಳು ನೀರಾವರಿಯಾಗಿ, ಕೃಷಿ ಸೇರಿದಂತೆ ಜನಜಾನುವಾರುಗಳಿಗೆ ನೀರು ಕುಡಿಯಲು ಅನುಕೂಲವಾಗುತ್ತದೆ ಎಂದು ಮನವರಿಕೆ ಮಾಡಿದರು.
ಶ್ರೀಗಳು ನೀಡಿದ ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕೆರೆ ನಿರ್ಮಿಸಿ ರೈತರಿಗೆ ಅನುಕೂಲ ಕಲ್ಪಿಸಲು ಮುಂದಾಗಿರುವ ಶ್ರೀಗಳ ಕಾರ್ಯಕ್ಕೆ ಸಂತಸಗೊಂಡ ಅವರು, 80 ಕೋಟಿ ರೂ.ಗಳ ಪ್ರಸ್ತಾವನೆಗೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಭರವಸೆ ನೀಡಿದರು.
ನಿಯೋಗದಲ್ಲಿ ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ಮುಖ್ಯ ಸಚೇತಕ ಡಾ| ಅಜಯಸಿಂಗ್, ಹುನಗುಂದ ಶಾಸಕ ದೊಡ್ಡಣ್ಣಗೌಡ ಜಿ. ಪಾಟೀಲ, ಆಳಂದ ಶಾಸಕ ಸುಭಾಷ ಗುತ್ತೇದಾರ, ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ, ಅವಿನಾಶ ಜಾಧವ, ಶರಣು ಸಲಗರ, ಮಾಜಿ ಎಂಎಲ್‌ಸಿ ಅಲ್ಲಂ ಪ್ರಭು ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.