ಮುಕ್ರಂಖಾನ್ ಗಡಿಪಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
Team Udayavani, Feb 19, 2022, 12:18 PM IST
ಚಿತ್ತಾಪುರ: ಕೋಮು ಸೌಹಾರ್ದತೆಗೆ ಧಕ್ಕೆ ತರುವಂತೆ ಮಾತನಾಡಿದ ಸೇಡಂ ಕಾಂಗ್ರೆಸ್ ಮುಖಂಡ ಮುಕ್ರಂಖಾನ್ ವಿರುದ್ಧ ಕಾನೂನು ಕ್ರಮ ಕೈಗೊಂಡು ಗಡಿಪಾರು ಮಾಡಬೇಕು ಎಂದು ಹಿಂದೂ ಪರ ಸಂಘಟನೆಗಳ ಮುಖಂಡರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಅಶ್ವತ್ಥ ರಾಠೊಡ ಮಾತನಾಡಿ, ಮುಕ್ರಂಖಾನ್ ಅವರು ಜೇವರ್ಗಿ ತಾಲೂಕಿನ ಆಂದೋಲಾ ಶ್ರೀ ಸಿದ್ಧಲಿಂಗ ಸ್ವಾಮೀಜಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಜೀವ ಬೆದರಿಕೆ ಹಾಕಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಪುರಸಭೆ ಸದಸ್ಯ ಶಾಮ ಮೇಧಾ ಮಾತನಾಡಿ, ಮುಕ್ರಂಖಾನ್ ವಿರುದ್ಧ ಕ್ರಮ ಕೈಗೊಂಡು, ಮತ್ತೆ ಇಂತ ಘಟನೆಗಳು ಮರುಕಳಿಸದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದರು.
ಪುರಸಭೆ ಸದಸ್ಯ ರಮೇಶ ಬೊಮ್ಮನಳ್ಳಿ, ಮುಖಂಡರಾದ ಮಣಿಕಂಠ ರಾಠೊಡ, ಸಾಬಣ್ಣ ಪೂಜಾರಿ, ಮೇಘರಾಜ ಗುತ್ತೇದಾರ, ಶ್ರೀನಿವಾಸ ಹಳ್ಳಿ, ಕಾಶಿನಾಥ ಸಂಗಾವಿ, ರಾಹುಲ್ ಭೋವಿ, ಸಂತೋಷ ಹಾವೇರಿ, ಬಸವರಾಜ ತಳವಾರ, ಮಹಾಂತೇಶ ಬೊಮ್ಮನಳ್ಳಿ, ಆಕಾಶ, ನಾಗರಾಜ ಹೂಗಾರ, ಶ್ರೀಕಾಂತ ಸುಲೇಗಾಂವ, ಸಂಗಮೇಶ ರೋಣದ್, ಮನೋಜಕುಮಾರ ರಾಠೊಡ, ಸುನೀಲ ಚವ್ಹಾಣ, ರಾಜು ದೊರೆ, ಮಹೇಶ ಸಾತನೂರ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.