ಸ್ಪರ್ಧಾತ್ಮಕ ಪರೀಕ್ಷೆ ಅಧ್ಯಯನ ಕೇಂದ್ರವಿರುವ ಲೈಬ್ರರಿ ಸಿದ್ಧಪಡಿಸಿ


Team Udayavani, Feb 19, 2022, 1:26 PM IST

ಸ್ಪರ್ಧಾತ್ಮಕ ಪರೀಕ್ಷೆ ಅಧ್ಯಯನ ಕೇಂದ್ರವಿರುವ ಲೈಬ್ರರಿ ಸಿದ್ಧಪಡಿಸಿ

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಓದುಗರಿಗೆ ಹಾಗೂ ಐಎಎಸ್‌, ಕೆಎಎಸ್‌ ಸೇರಿದಂತೆ ಎಲ್ಲಾಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಅಭ್ಯರ್ಥಿಗಳಿಗೆನೆರವಾಗುವಂತಹ ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ಕೇಂದ್ರವನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯವನ್ನುಇನ್ನು 5 ರಿಂದ 6 ತಿಂಗಳೊಳಗೆ ಕಲ್ಪಿಸಲು ಜಿಲ್ಲಾಉಸ್ತುವಾರಿ ಸಚಿವ ವಿ. ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿರುವ ತಮ್ಮಕಚೇರಿಯಲ್ಲಿ ಶುಕ್ರವಾರ ಗ್ರಂಥಾಲಯ, ಇನ್ನಿತರ ಮೂಲಸೌಕರ್ಯ ಸಂಬಂಧ ಅಧಿಕಾರಿಗಳ ಸಭೆನಡೆಸಿದ ಸಚಿವರು, 10 ಕೋಟಿ ರೂ.ವೆಚ್ಚದಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಪ್ರಕ್ರಿಯೆಯನ್ನು ತುರ್ತಾಗಿ ಕೈಗೊಳ್ಳುವಂತೆನಿರ್ದೇಶನ ನೀಡಿದರು. ನಗರದಲ್ಲಿ ಐಎಎಸ್‌, ಕೆಎಎಸ್‌ ಪರೀಕ್ಷೆಗೆ ಅಣಿಗೊಳ್ಳುವ ಅಭ್ಯರ್ಥಿಗಳುಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಲು ಅಗತ್ಯವಿರುವ ಸ್ಪರ್ಧಾತ್ಮಕ ಪರೀಕ್ಷಾ ಅಧ್ಯಯನ ಕೇಂದ್ರ ಒದಗಿಸಬೇಕಿದೆ. ಡಿಜಿಟಲ್‌ ಗ್ರಂಥಾಲಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಅಧ್ಯಯನ ಕೇಂದ್ರಕ್ಕೆ ಪೂರಕವಾಗಿರುವ ವ್ಯವಸ್ಥೆಗಳು ಗ್ರಂಥಾಲಯ ಕಟ್ಟಡದಲ್ಲಿ ಇರಬೇಕು ಎಂದರು.

ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದಲ್ಲಿಪರೀಕ್ಷೆಗೆ ಸಿದ್ಧರಾಗುವ ಅಭ್ಯರ್ಥಿಗಳಿಗೆ ವಿಷಯತಜ್ಞರು, ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸಬೋಧನೆ ತರಬೇತಿಗೆ ಅನುಕೂಲವಾಗುವಸಭಾಂಗಣವನ್ನೂ ನಿರ್ಮಿಸಬೇಕು ಎಂದು ಸಚಿವರು ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ನಗರೋತ್ಥಾನ 4ನೇ ಹಂತದ ಯೋಜನೆಯನ್ನು ಸಮರ್ಪಕ ಅನುಷ್ಠಾನಗೊಳಿಸಬೇಕು. ಕಾಮಗಾರಿಯು ಗುಣಮಟ್ಟದ್ದಾಗಿರಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದರು.

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸರ್ಕಾರದ ಆದೇಶದಂತೆ ಅರ್ಹ ಫ‌ಲಾನುಭವಿಗಳಿಗೆ ಹಕ್ಕುಪತ್ರವಿತರಿಸಲು ಕ್ರಮ ಕೈಗೊಳ್ಳಬೇಕು. ಚಾಮರಾಜನಗರ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವೇಳೆ ಮನೆ ಕಳೆದುಕೊಂಡಿರುವವರಿಗೆ ನಿವೇಶನನೀಡಲಾಗಿದ್ದು, ಅವರಿಗೆ ಮನೆ ನಿರ್ಮಿಸಲುಮೂಲ ಸೌಕರ್ಯ ಕಲ್ಪಿಸಲು ಮುಂದಾಗುವಂತೆವಿ. ಸೋಮಣ್ಣ ನಿರ್ದೇಶನ ನೀಡಿದರು.

ಸಭೆಯಲ್ಲಿ ಶಾಸಕ ಸಿ.ಎಸ್‌. ನಿರಂಜನ್‌ಕುಮಾರ್‌, ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶ್‌ಕುಮಾರ್‌ ಎಸ್‌. ಹೊಸಮನಿ, ಜಿಲ್ಲಾನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೆ. ಸುರೇಶ್‌, ವರದರಾಜು, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಸುರೇಂದ್ರ, ಜಿಲ್ಲಾ ಮುಖ್ಯಗ್ರಂಥಾಲ ಯ ಅಧಿಕಾರಿ ಆರ್‌. ಶಿವಸ್ವಾಮಿ,ಗುಂಡ್ಲುಪೇಟೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್‌ ಇತರರಿದ್ದರು.

28ರೊಳಗೆ ವಸತಿ ಪಟ್ಟಿ ಸಲ್ಲಿಸಿ: ಸಚಿವ : ವಸತಿ ಯೋಜನೆಯಡಿ ನೀಡಲಾದ ಗುರಿಗೆ ಅನುಗುಣವಾಗಿ ತುರ್ತಾಗಿ ಫ‌ಲಾನುಭವಿಗಳನ್ನುಆಯ್ಕೆ ಮಾಡಿ ಆಧಾರ್‌ ಪ್ರತಿಯೊಂದಿಗೆ ಫ‌ಲಾನುಭವಿಗಳ ಪಟ್ಟಿಯನ್ನು ಫೆ.28ರೊಳಗೆಇಲಾಖೆಗೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಸಚಿವ ಸೋಮಣ್ಣ ಸಚಿವರು ಸೂಚಿಸಿದರು.

 

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.