![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 19, 2022, 2:01 PM IST
ರಾಯಚೂರು: ಪರಿವರ್ತನೆಯಾಗದೆ ಉಳಿದ 1995ರ ನಂತರದ ಕಲ್ಯಾಣ ಕರ್ನಾಟಕ ಭಾಗದ ಕನ್ನಡ ಮಾಧ್ಯಮ ಶಾಲೆಗಳಿಗೆ 371ಜೆ ಸೌಲಭ್ಯ ಕಲ್ಪಿಸಿ ವೇತನಾನುದಾನಕ್ಕೆ ಒಳಪಡಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಕನ್ನಡ ಮಾಧ್ಯಮ ಅನುದಾನಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಈ ಕುರಿತು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡುವ ವಿಶೇಷ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು. ಈ ಭಾಗದ ಕನ್ನಡ ಮಾಧ್ಯಮ ಅನುದಾನಿತ ಶಿಕ್ಷಣ ಸಂಸ್ಥೆಗಳ ಪರಿಸ್ಥಿತಿ ಶೋಚನಿಯವಾಗಿದೆ. ಅನೇಕ ಶಿಕ್ಷಣ ಸಂಸ್ಥೆಗಳು ಆಂಗ್ಲ ಮಾಧ್ಯಮಕ್ಕೆ ಪರಿವರ್ತನೆಗೆ ಅವಕಾಶ ನೀಡಿದರೂ ಕನ್ನಡತನ ಬಿಟ್ಟು ಕೊಟ್ಟಿಲ್ಲ. ಆದರೂ ಸರ್ಕಾರ ಈ ಶಾಲೆಗಳನ್ನು ಗಮನಿಸುತ್ತಿಲ್ಲ. ಶಿಕ್ಷಣ ಸಂಸ್ಥೆಗಳಿಗೆ ಕೆಲಸ ಮಾಡುವ ಶಿಕ್ಷಕರಿಗೆ ಯಾವುದೇ ಆರ್ಥಿಕ ನೆರವು ನೀಡಿಲ್ಲ ಎಂದು ದೂರಿದರು.
ಕಲ್ಯಾಣ ಕರ್ನಾಟಕ ಪ್ರದೇಶದ ಆಂಗ್ಲ ಮಾಧ್ಯಮಕ್ಕೆ ಪರಿವರ್ತನೆಯಾಗದೆ ಉಳಿದಿರುವ 1995ರ ನಂತರದ ಎಲ್ಲ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ವೇತನಾನುದಾನಕ್ಕೆ ಒಳಪಡಿಸಬೇಕು. 371 (ಜೆ) ಅಡಿ ಮೂಲ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಬೇಕು, ಸತತ 15 ವರ್ಷ ಪೂರೈಸಿದ ಶಾಲೆಗಳಿಗೆ ಶಾಶ್ವತ ನವೀಕರಣ ನೀಡಬೇಕು, 2018ಕ್ಕೂ ಮುಂಚೆ ಪ್ರಾರಂಭವಾದ ಶಾಲೆಗಳಿಗೆ ನವೀಕರಣಕ್ಕಾಗಿ ಹೊಸ ಹೊಸ ಹೆಚ್ಚುವರಿ ನಿಯಮಗಳನ್ನು ಅಳವಡಿಸಿ ಅಕ್ರಮಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.