ಬದುಕಿಗೆ ವೈಜ್ಞಾನಿಕ ಮನೋಭಾವ ಅಗತ್ಯ; ಬಸವಲಿಂಗಪ್ಪ

ವಿಜ್ಞಾನದ ಚಟುವಟಿಕೆ ಅತ್ಯಂತ ಕ್ರಿಯಾಶೀಲವಾಗಿ ನಡೆಯುತ್ತಿರುವುದು ಶ್ಲಾಘನೀಯ

Team Udayavani, Feb 19, 2022, 5:54 PM IST

ಬದುಕಿಗೆ ವೈಜ್ಞಾನಿಕ ಮನೋಭಾವ ಅಗತ್ಯ; ಬಸವಲಿಂಗಪ್ಪ

ಗದಗ: “ಮಕ್ಕಳಿಗೆ ಮನೆಯೇ ಮೊದಲ ಪಾಠಶಾಲೆ’ ಎಂಬಂತೆ ನಮ್ಮ ಅಡುಗೆ ಮನೆಯಿಂದಲೇ ವೈಜ್ಞಾನಿಕ ಚಿಂತನೆ ಆರಂಭವಾಗುತ್ತದೆ. ದಿನಸಿ ಬಳಸಿಕೊಂಡು ವ್ಯವಸ್ಥಿತವಾಗಿ ಅಡುಗೆ ಮಾಡುವುದು ಸಹ ವಿಜ್ಞಾನ. ಅನುಕ್ಷಣ ವೈಜ್ಞಾನಿಕ ಮನೋಭಾವದ ಬೆಳವಣಿಗೆಗೆ ಪ್ರಯತ್ನಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಎಂ. ಬಸವಲಿಂಗಪ್ಪ ಹೇಳಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಗರದ ತೋಂಟದಾರ್ಯ ಪ್ರೌಢಶಾಲೆಯಲ್ಲಿ ಪ್ರೌಢಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಯುವ ವಿಜ್ಞಾನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ, ಕಾಲೇಜು, ಪ್ರಯೋಗಾಲಯ, ಸಂಶೋಧನಾ ಸಂಸ್ಥೆಗಳಿಗೆ ವಿಜ್ಞಾನ ಸೀಮಿತವಾಗಿಲ್ಲ. ಅದು ನಮ್ಮ ನಿತ್ಯ ಜೀವನದ ಪ್ರತಿಯೊಂದು ಕ್ರಿಯೆಯ ಭಾಗವಾಗಿದೆ ಎಂಬುದನ್ನು ಅರಿತುಕೊಳ್ಳಬೇಕು. ವಿಜ್ಞಾನದ ಮೂಲ ತತ್ವವನ್ನು ಅರಿತುಕೊಂಡು ಮುಂದಿನ ಪ್ರಗತಿ ಬಗ್ಗೆ ಚಿಂತಿಸಬೇಕೆಂದು ಸಲಹೆ ನೀಡಿದರು.

ಡಯಟ್‌ ಪ್ರಾಚಾರ್ಯ ಎಸ್‌.ಡಿ.ಗಾಂಜಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಇಂದು ಶುದ್ಧ ವಿಜ್ಞಾನ ಮಾತ್ರವಲ್ಲದೇ ಎಲ್ಲ ಅಧ್ಯಯನ ಶಿಸ್ತುಗಳನ್ನು ವೈಜ್ಞಾನಿಕ ಚೌಕಟ್ಟಿನಲ್ಲಿ ಗುರುತಿಸಲಾಗುತ್ತಿದೆ. ಹೀಗಾಗಿ, ಪ್ರತಿಯೊಬ್ಬರೂ ವೈಜ್ಞಾನಿಕವಾಗಿ ಯೋಚಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಸಿ.ಕಡಿವಾಳ ಅವರು ಜಿಲ್ಲೆಯಲ್ಲಿ ವಿಜ್ಞಾನದ ಚಟುವಟಿಕೆ ಅತ್ಯಂತ ಕ್ರಿಯಾಶೀಲವಾಗಿ ನಡೆಯುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಕಳೆದ ಸಾಲಿನಲ್ಲಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಕಾರ್ತಿಕ್‌ ದಾನಿ ಹಾಗೂ ಮಾರ್ಗದರ್ಶಕ ಜೆ.ಎಂ.ಮಠಪತಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ತೋಂಟದಾರ್ಯ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೊಟ್ರೇಶ ಮಣಸಿನಕಾಯಿ ಅಧ್ಯಕ್ಷತೆ ವಹಿಸಿದ್ದರು. ಯುವ ವಿಜ್ಞಾನಿ ಜಿಲ್ಲಾ ಸಂಯೋಜಕ ಎಂ.ಎಚ್‌.ಸವದತ್ತಿ ಪ್ರಸ್ತಾವಿಕವಾಗಿ ಮಾತನಾಡಿ, ಕರಾವಿಪ ಧ್ಯೇಯೋದ್ದೇಶಗಳನ್ನು ವಿವರಿಸಿದರು.

ವೇದಿಕೆ ಮೇಲೆ ಪ್ರೊ|ಈಶ್ವರ್‌ ಕೆ. ಪಟ್ಟಣಶೆಟ್ಟಿ, ಎಸ್‌. ಎಂ.ಕಲ್ಲೂರ್‌, ಎ.ವಿ.ಶಿವನಗೌಡರ, ಎಂ.ಎಂ.ಲೋಹಾನಿ, ವಿಜಯ ಕುಮಾರ್‌ ಕಪ್ಪಲಿ, ಶಿಲ್ಪ ಉಪಸ್ಥಿತರಿದ್ದರು. ವಿಷಯ ಪರಿವೀಕ್ಷಕ ಎಚ್‌.ಎ.ಫಾರೂಕಿ ಸ್ವಾಗತಿಸಿ, ಕೃಷ್ಣ ಗೌಡರ ನಿರೂಪಿಸಿ, ಗೀತಾ ಹಿರೇಮನಿ ವಂದಿಸಿದರು.

ಪ್ರಸಕ್ತ ಸಾಲಿನ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ಲೊಯೊಲಾ ಪ್ರೌಢಶಾಲೆಯ ಶೋಯಬ್‌ ಕೊಪ್ಪಳ(ಪ್ರಥಮ), ಮುಂಡರಗಿ ಆದರ್ಶ ವಿದ್ಯಾಲಯದ ಅಮನ ಐ. ಮುಲ್ಲಾ(ದ್ವಿತೀಯ) ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.