![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
Team Udayavani, Feb 20, 2022, 6:23 AM IST
ಬಳ್ಳಾರಿ: ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಶನಿವಾರ ಬೆಳಕಿಗೆ ಬಂದಿದೆ.
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ತೂಲಹಳ್ಳಿ ಗ್ರಾಮದ ವಿದ್ಯಾರ್ಥಿ ನಾಗರಾಜ್ (17) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ ಯುವಕ.
ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ನಾಗರಾಜ ಮೊಬೈಲ್ ಕೊಡಿಸುವಂತೆ ಪೋಷಕರನ್ನು ಕೇಳಿದ್ದಾನೆ. ಮೊಬೈಲ್ ಕೊಡಿಸದ ಹಿನ್ನೆಲೆಯಲ್ಲಿ ಪೋಷಕರ ಮೇಲೆ ಮುನಿಸಿಕೊಂಡಿರುವ ನಾಗರಾಜ್, ಫೆ.19 ರಂದು ಮನೆಬಿಟ್ಟು ಹೋಗಿ ತಲೆ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಳಿಕ ಸಂಪೂರ್ಣ ಸುಟ್ಟು ಕರಕಲಾಗಿರುವ ನಾಗರಾಜನ ಮೃತದೇಹ ಕೊಟ್ಟೂರು ಕೆರೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.