ಮಾ.10ರೊಳಗೆ ಸಮೀಕ್ಷಾ ವರದಿ ಸಲ್ಲಿಸಿ
Team Udayavani, Feb 20, 2022, 10:10 AM IST
ಹಾಸನ: ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನಿಯಂತ್ರಣಾ ಕಾಯ್ದೆಯಡಿ ನಡೆಸಲಾಗುತ್ತಿರುವ ಸಮೀಕ್ಷೆಯ ಮಾಹಿತಿಯನ್ನು ಮಾ. 10ರೊಳಗೆ ಅಧಿಕಾರಿಗಳು ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಅವರು ಸೂಚಿಸಿದ್ದಾರೆ.
ವಿಡಿಯೋ ಸಂವಾದದ ಮೂಲಕ ರಾಜ್ಯದ ಎಲ್ಲ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಮ್ಯಾನ್ಯು ಯಲ್ ಸ್ಕ್ಯಾವೆಂಜರ್ ಸಮೀಕ್ಷಾ ವರದಿ ತಯಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿಮಾತನಾಡಿದರು. ಕಳೆದ 3 ವರ್ಷಗಳಿಂದ 18 ಮಂದಿ ಶೌಚಗುಂಡಿ ಸ್ವಚ್ಛತೆ ವೇಳೆ ಸಾವನ್ನಪ್ಪಿದ್ದು, ಇಂತಹ ಅವಘಡ ತಡೆಗಾಗಿ ಶೀಘ್ರವಾಗಿ ಸಮೀಕ್ಷೆಯ ಮಾಹಿತಿಯನ್ನು ನೀಡಬೇಕು ಎಂದು ನಿರ್ದೇಶನ ನೀಡಿದರು.
ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಹಾಸನದ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಅವರು ಜಿಲ್ಲೆಯಲ್ಲಿ ಸಮೀಕ್ಷೆ ಮುಗಿದಿದ್ದು, ನಿಗದಿತ ಸಮಯದ ಒಳಗೆ ಮಾಹಿತಿಯನ್ನು ನೀಡಲಾಗುವುದು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ. ರವಿಕುಮಾರ್ ಸುರಪುರ, ಸಫಾಯಿ ಕರ್ಮಚಾರಿ ಆರೋಗ್ಯದ ಅಧ್ಯಕ್ಷ ಶಿವಣ್ಣ, ಸಮಾಜ ಕಲ್ಯಾಣ ಅಧಿಕಾರಿ ಮಂಜುನಾಥ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ್, ಹಾಸನ ನಗರಸಭಾ ಆಯುಕ್ತ ಪರಮೇಶ್ವರಪ್ಪ, ವಿವಿಧನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿ ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.