ಹುಣಸೂರು: ಅಪಘಾತ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದು ಬೈಕ್ ಸವಾರ ಸಾವು
Team Udayavani, Feb 21, 2022, 11:37 AM IST
ಹುಣಸೂರು: ಮಹಿಳೆಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಬೈಕ್ ಸವಾರ ಆಯತಪ್ಪಿ ಬಿದ್ದು,ತೀವ್ರಗಾಯಗೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹುಣಸೂರು ತಾಲೂಕಿನ ಕೆ.ಬಿ.ಕಾಲೋನಿ ನಿವಾಸಿ.ಕೆಎಸ್ ಆರ್ ಟಿ ಸಿ ನಿವೃತ್ತ ಟಿ.ಸಿ.ಯಾಗಿದ್ದ ಮಹದೇವ್(65) ಮೃತ ದುರ್ಧೈವಿ.
ಭಾನುವಾರ ರಾತ್ರಿ ನಗರಕ್ಕೆ ಸಮೀಪದ ಸಿದ್ದನಕೊಪ್ಪಲಿಗೆ ತೆರಳುತ್ತಿದ್ದ ವೇಳೆ ಬಾಹುಸಾರ್ ನರ್ಸಿಂಗ್ ಹೊಂ ಕಡೆಯಿಂದ ರಸ್ತೆ ಡಿವೈಡರ್ ದಾಟಿ ಬರುತ್ತಿದ್ದ ಮಹಿಳೆಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಡನ್ ಬ್ರೇಕ್ ಹಾಕಿದ್ದಾರೆ. ಈ ವೇಳೆ ಮಹಿಳೆಗೆ ಢಿಕ್ಕಿ ಹೊಡೆದು ಕೆಳಕ್ಕೆ ಬಿದ್ದಿದ್ದಾರೆ. ತಲೆಗೆ ಪೆಟ್ಟು ಬಿದ್ದು ತೀವ್ರಗಾಯಗೊಂಡಿದ್ದ ಮಹದೇವುರನ್ನು ಸಾರ್ವಜನಿಕರ ನೆರವಿನೊಂದಿಗೆ ಪೋಲೀಸರು ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೂ ಪೆಟ್ಟಾಗಿದ್ದು. ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.