ಮಂಡ್ಯ ಅಭಿವೃದ್ಧಿಗೆ 660 ಕೋಟಿ ರೂ. ಪ್ರಸ್ತಾವನೆ


Team Udayavani, Feb 21, 2022, 2:36 PM IST

ಮಂಡ್ಯ ಅಭಿವೃದ್ಧಿಗೆ 660 ಕೋಟಿ ರೂ. ಪ್ರಸ್ತಾವನೆ

ಮಂಡ್ಯ: ಬೆಂಗಳೂರು-ಮೈಸೂರು ದೊಡ್ಡ ಹಳ್ಳಿಯಂತಿರುವ ಮಂಡ್ಯ ನಗರ ಅಭಿವೃದ್ಧಿಗೆಸುಮಾರು 660 ಕೋಟಿ ರೂ.ಗಳ ಅನುದಾನಕ್ಕೆನಗರಸಭೆ ಆಡಳಿತ ಮಂಡಳಿ ಪ್ರಸ್ತಾವನೆ ಸಲ್ಲಿಸಿದ್ದು,ಬಜೆಟ್‌ನಲ್ಲಿ ನಗರ ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ನಿರೀಕ್ಷಿಸಲಾಗಿದೆ.

ನಗರದಲ್ಲಿ ಅನೇಕ ಸಮಸ್ಯೆಗಳಿವೆ. ಪ್ರತಿನಿತ್ಯನಗರ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ನಗರದ ಬಹುತೇಕ ರಸ್ತೆಗಳು ಅದ್ವಾನಗೊಂಡಿವೆ. ಯುಜಿಡಿ ಆಧುನೀಕರಣ,ಸುಸಜ್ಜಿತ ಮಾರುಕಟ್ಟೆ ನಿರ್ಮಾಣ, ಮಹಾವೀರವೃತ್ತದ ರೈಲ್ವೆ ಮೇಲ್ಸುತುವೆ ನಿರ್ಮಾಣ,ಉದ್ಯಾನಗಳ ಅಭಿವೃದ್ಧಿ, ಕುಡಿಯುವ ನೀರುಸರಬರಾಜಿಗೆ ಪೈಪ್‌ಲೈನ್‌ ಅಳವಡಿಕೆ, ಡ್ರೆçನೇಜ್‌, ವಿದ್ಯುತ್‌ ದೀಪಗಳು ಸೇರಿದಂತೆ ವಿವಿಧ ಅಭಿವೃದ್ಧಿಗೆಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಹದಗೆಟ್ಟಿರುವ ರಸ್ತೆಗಳು: ಅಮೃತ್‌ ಯೋಜನೆಯಡಿ ಜಲಮಂಡಳಿಯಿಂದ ಕುಡಿಯುವ ನೀರು ಸರಬರಾಜುಮಾಡುವ ಕಾಮಗಾರಿ ಪ್ರಗತಿಯಲ್ಲಿದ್ದು, ಪೈಪ್‌ಲೈನ್‌ಹಾಗೂ ಮನೆ ಮನೆಗೆ ನಲ್ಲಿ ಅಳವಡಿಸುತ್ತಿ ರುವುದರಿಂದ ನಗರದ ಬಹುತೇಕ ರಸ್ತೆಗಳನ್ನು ಗುಂಡಿ ತೋಡಲಾಗಿದೆ.ಇದರಿಂದ ಎಲ್ಲ ರಸ್ತೆಗಳು ಹಳ್ಳ ದಿಣ್ಣೆಗಳಿಂದ ಕೂಡಿದ್ದು,ಮಳೆ ಬಂದರೆ ಎಲ್ಲ ರಸ್ತೆಗಳಲ್ಲಿ ನೀರು ನಿಂತು ಕೊಚ್ಚೆಗುಂಡಿಗಳಂತಾಗುತ್ತವೆ. ಪ್ರತಿನಿತ್ಯ ವಾಹನ ಸವಾರರು ಪರದಾಡುವಂತಾಗಿದೆ. ನಗರದ ಎಲ್ಲ ರಸ್ತೆಗಳ ಸಂಪೂರ್ಣಅಭಿವೃದ್ಧಿಗೆ 350 ಕೋಟಿ ರೂ. ಅಗತ್ಯವಾಗಿದೆ.

ಯುಜಿಡಿ ಆಧುನೀಕರಣಕ್ಕೆ 150 ಕೋಟಿ ರೂ.:ನಗರದಲ್ಲಿ ಯುಜಿಡಿ ಸಮಸ್ಯೆ ತಲೆ ನೋವಾಗಿಪರಿಣಮಿಸಿದೆ. ಈಗಾಗಲೇ ಸುಮಾರು ವರ್ಷಗಳಹಿಂದೆ ಮಾಡಿರುವುದರಿಂದ ತುಂಬಾಹಳೆಯದಾಗಿದ್ದು, ಅದನ್ನು ಆಧುನೀಕರಣಗೊಳಿಸಿಸುಸಜ್ಜಿತ ಯುಜಿಡಿ ಅಭಿವೃದ್ಧಿ ಮಾಡಲು 150 ಕೋಟಿರೂ. ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಪಾರ್ಕ್‌ಗಳ ಅಭಿವೃದ್ಧಿ: ನಗರದಲ್ಲಿರುವ ಪಾರ್ಕ್‌ಗಳ ಅಭಿವೃದ್ಧಿ ಮಾಡಲು ಅನುದಾನ ಅಗತ್ಯವಾಗಿದೆ. ಎಲ್ಲಪಾರ್ಕ್‌ಗಳಲ್ಲಿ ಮೂಲ ಸೌಲಭ್ಯಗಳ ಕೊರತೆ ಇದೆ.ವಾಯು ವಿಹಾರಕ್ಕೆ ಬೇಕಾದ ಎಲ್ಲ ಸೌಲಭ್ಯ, ಸ್ವಚ್ಛತೆ,ಕಸ ನಿರ್ವಹಣೆ ಮಾಡುವ ಅಗತ್ಯವಿದೆ.

ಅಮೃತ್‌ ಯೋಜನೆ ಪೂರ್ಣಕ್ಕೆ 85 ಕೋಟಿ ರೂ.: ನಗರದಲ್ಲಿ ಪ್ರಗತಿಯಲ್ಲಿರುವ ಅಮೃತ್‌ ಯೋಜನೆ ಅರ್ಧಕ್ಕೆ ನಿಂತಿದ್ದು, ಪೂರ್ಣಗೊಳಿಸಲು ಇನ್ನೂ 85 ಕೋಟಿ ರೂ. ಅಗತ್ಯವಿದೆ. ಈಗಾಗಲೇ 12 ವಾರ್ಡ್ ಗಳಿಗೆ ಮಾತ್ರ 24 ಗಂಟೆಗಳ ಕುಡಿಯುವ ನೀರುಸರಬರಾಜು ಮಾಡು ವ ಕಾಮಗಾರಿ ಮುಗಿದಿದೆ. ಉಳಿದ 19 ವಾರ್ಡ್‌ಗಳಿಗೆ 24 ಗಂಟೆಗಳ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿ ಪೂರ್ಣಗೊಂಡಿಲ್ಲ. ಶೀಘ್ರ ಕಾಮಗಾರಿ ಮುಗಿಸಲು ಅನುದಾನ ಬಿಡುಗಡೆಗೆ ಕೋರಲಾಗಿದೆ.

ಮಹಾವೀರ ವೃತ್ತದ ಕಾಮಗಾರಿಗೆ ಅನುದಾನ: ಮಳೆಬಂದರೆ ಬೆಂಗಳೂರು-ಮೈಸೂರು ಹೆದ್ದಾರಿ ನಗರಸಭೆಕಚೇರಿ ಪಕ್ಕದಲ್ಲಿಯೇ ಇರುವ ಮಹಾವೀರ ವೃತ್ತದಲ್ಲಿನೀರು ನಿಂತು ಕೆರೆಯಂತಾಗುತ್ತದೆ. ಇದರಿಂದ ಸಾಕಷ್ಟು ತೊಂದರೆಗಳಾಗುತ್ತಿವೆ. ಇದು ಪ್ರತಿ ವರ್ಷವೂಮಳೆಗಾಲ ಸಂದರ್ಭದಲ್ಲಿ ಸಮಸ್ಯೆ ತಲೆದೋರುತ್ತದೆ. ಆದ್ದರಿಂದ ಮಳೆ ಬಂದಾಗ ನೀರು ಸರಾಗವಾಗಿ ಹರಿಯುವಂತೆ ಮಾಡಲು ಕಾಮಗಾರಿ ನಡೆಸಲು ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಮಾರುಕಟ್ಟೆ ನಿರ್ಮಾಣಕ್ಕೆ  48 ಕೋಟಿ ರೂ. ಮಂಡ್ಯದ ಹೃದಯಭಾಗದಲ್ಲಿರುವ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸುವ ಯೋಜನೆ ಬಹಳವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅದಕ್ಕಾಗಿ ಸುಮಾರು 48 ಕೋಟಿ ರೂ. ಅನುದಾನ ಅಗತ್ಯವಾಗಿದೆ. ಈಗಾಗಲೇ ಮಾರುಕಟ್ಟೆ ನಿರ್ಮಾಣಕ್ಕೆ ಬೇಕಾದ ಎಲ್ಲ ಸಿದ್ಧತೆಗಳು ನಡೆದಿದೆ. ಆದರೆ ಅನುದಾನದ ಕೊರತೆಯಿಂದ ವಿಳಂಬವಾಗುತ್ತಲೇ ಬಂದಿದೆ. ವರ್ಷದಿಂದ ವರ್ಷಕ್ಕೆ ಅನುದಾನದ ಅವಶ್ಯಕತೆ ಹೆಚ್ಚುತ್ತಲೇ ಇದೆ. ಆದ್ದರಿಂದ ಬಜೆಟ್‌ನಲ್ಲಿ ಹಣ ನೀಡುವ ಬಗ್ಗೆ ನಿರೀಕ್ಷಿಸಲಾಗಿದೆ.

50 ಕೋಟಿ ರೂ. ಬಿಡುಗಡೆಗೆ ಮನವಿ :

ಹಿಂದೆ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಂಡ್ಯ ನಗರದ ರಸ್ತೆಗಳ ಅಭಿವೃದ್ಧಿಗೆ ಬಿಡುಗಡೆಮಾಡಲಾಗಿದ್ದ 50 ಕೋಟಿ ರೂ. ಅನುದಾನವನ್ನುಬಿಜೆಪಿ ಸರ್ಕಾರ ವಾಪಸ್‌ ಪಡೆದಿತ್ತು. ಅದನ್ನುಮತ್ತೆ ಬಿಡುಗಡೆ ಮಾಡಬೇಕು ಎಂದು ಪ್ರಸ್ತಾವನೆಯಲ್ಲಿ ಕೋರಲಾಗಿದೆ.

ಮಂಡ್ಯ ನಗರದ ಸಮಗ್ರ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಅನುದಾನ ಘೋಷಣೆಗೆ 660 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಚರಂಡಿ,ಯುಜಿಡಿ ಆಧುನೀಕರಣ, ರಸ್ತೆಗಳ ಅಭಿವೃದ್ಧಿ, ಅಮೃತ್‌ ಯೋಜನೆ ಕಾಮಗಾರಿ ಪೂರ್ಣಗೊಳಿಸುವ, ಉದ್ಯಾನಗಳ ಅಭಿವೃದ್ಧಿ ಸೇರಿದಂತೆ ಇಡೀ ನಗರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಚ್‌.ಎಸ್‌.ಮಂಜು, ಅಧ್ಯಕ್ಷರು, ನಗರಸಭೆ, ಮಂಡ್ಯ

 

ಎಚ್‌.ಶಿವರಾಜು

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.