704 ದಿನಗಳ ಬಳಿಕ ಆಸ್ಟ್ರೇಲಿಯಾ “ಓಪನ್’
ಅಂತಾರಾಷ್ಟ್ರೀಯ ಪ್ರಯಾಣ ನಿರ್ಬಂಧ ತೆರವು ಸಿಡ್ನಿ ಏರ್‌ಪೋರ್ಟ್‌ನಲ್ಲಿ ಸಂಭ್ರಮ
Team Udayavani, Feb 22, 2022, 7:50 AM IST
ಸಿಡ್ನಿ: ಕೊರೊನಾ ಲಾಕ್‌ಡೌನ್‌ನಿಂದಾಗಿ ಬಂದ್ ಆಗಿದ್ದ ಆಸ್ಟ್ರೇಲಿಯಾದ ಗಡಿ ಈಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮುಕ್ತವಾಗಿದೆ.
ಸೋಮವಾರ ಎಲ್ಲ ಅಂತಾರಾಷ್ಟ್ರೀಯ ಪ್ರಯಾಣ ನಿರ್ಬಂಧವು ತೆರವಾಗಿದ್ದು, ಈವರೆಗೆ ತಮ್ಮ ಪ್ರೀತಿಪಾತ್ರರಿಂದ ದೂರವುಳಿದಿದ್ದ ಕುಟುಂಬಗಳು, ಸ್ನೇಹಿತರು ಸಿಡ್ನಿ ಏರ್‌ಪೋರ್ಟ್‌ನಲ್ಲಿ ಒಂದಾಗಿದ್ದಾರೆ.
ಸೋಮವಾರ ಮುಂಜಾನೆ 6.20ರ ವೇಳೆಗೆ ಲಾಸ್‌ಏಂಜಲೀಸ್‌ನಿಂದ ಮೊದಲ ವಿಮಾನ ಸಿಡ್ನಿ ನೆಲವನ್ನು ಸ್ಪರ್ಶಿಸಿದೆ. ಈ ಮೂಲಕ ಅಂತಾರಾಷ್ಟ್ರೀಯ ಪ್ರಯಾಣಕ್ಕೆ ಹೇರಲಾಗಿದ್ದ 704 ದಿನಗಳ ನಿರ್ಬಂಧವು ಸಂಪೂರ್ಣ ತೆರವಾದಂತಾಗಿದೆ.
ವಿಮಾನನಿಲ್ದಾಣದಲ್ಲಿ ಎಲ್ಲೆಲ್ಲೂ “ವೆಲ್‌ಕಂ ಬ್ಯಾಕ್’ ಎಂಬ ಫಲಕಗಳು ಕಾಣಿಸುತ್ತಿದ್ದು, ಕೆಲವರ ಕಣ್ಣಲ್ಲಿ ಆನಂದಭಾಷ್ಪ ಜಿನುಗಿದರೆ, ಮತ್ತೆ ಕೆಲವರು ಪರಸ್ಪರ ಆಲಿಂಗಿಸಿಕೊಂಡು, ಕುಣಿದಾಡಿದ್ದಾರೆ.
ಇದನ್ನೂ ಓದಿ:ನಾಳೆ ಸಂಜೆ ಕಾಂಗ್ರೆಸ್ ನಾಯಕರಿಂದ ವಿಧಾನಸೌಧದಿಂದ ರಾಜಭವನದ ವರೆಗೆ ಪಾದಯಾತ್ರೆ
ಗಡಿಗಳನ್ನು ತೆರೆದಿರುವುದರಿಂದ ಇಂದು ಆಸ್ಟ್ರೇಲಿಯಾದ ಪ್ರವಾಸೋದ್ಯಮ ವಲಯಕ್ಕೆ “ಸಂಭ್ರಮದ ದಿನ’ ಎಂದು ವ್ಯಾಪಾರ ಮತ್ತು ಪ್ರವಾಸೋದ್ಯಮ ಸಚಿವ ಡ್ಯಾನ್ ಟೆಹಾನ್ ಹೇಳಿದ್ದಾರೆ. ಸೋಮವಾರ ಒಂದೇ ದಿನ ಆಸ್ಟ್ರೇಲಿಯಾಗೆ 56 ವಿಮಾನಗಳು ಬಂದಿಳಿಯಲಿವೆ.
2020ರ ಮಾರ್ಚ್ ತಿಂಗಳಲ್ಲಿ ಕೊರೊನಾ ಹಿನ್ನೆಲೆಯಲ್ಲಿ ದೇಶವ್ಯಾಪಿ ಲಾಕ್‌ಡೌನ್ ಹೇರಲಾಗಿತ್ತು. ಬಳಿಕ ಜಗತ್ತಿನಲ್ಲೇ ಅತ್ಯಂತ ಕಠಿಣ ನಿರ್ಬಂಧಗಳನ್ನು ಆಸ್ಟ್ರೇಲಿಯಾದಲ್ಲಿ ಹೇರಲಾಯಿತು. ಬೇರೆ ದೇಶಗಳಿಂದ ಬರುವ ಎಲ್ಲ ಪ್ರಯಾಣಿಕರಿಗೂ ಪ್ರವೇಶ ನಿರಾಕರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
Viral: ಜನಪ್ರಿಯ ಟಿಕ್ ಟಾಕ್ ತಾರೆಯ ಖಾಸಗಿ ವಿಡಿಯೋ ಲೀಕ್.. ಭಾರೀ ವೈರಲ್
ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್ ನಿಧನ
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.