ಶಿವಮೊಗ್ಗದಲ್ಲಿ ಯುವಕನ ಹತ್ಯೆ ಪ್ರಕರಣ : ಆರೋಪಿಗಳನ್ನು ಬಂಧಿಸುವಂತೆ ರಾಜ್ಯಪಾಲರಿಗೆ ಮನವಿ
Team Udayavani, Feb 21, 2022, 8:55 PM IST
ಸೊರಬ: ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಹತ್ಯೆ ಮಾಡಿದ ಜಿಹಾದಿ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳಿಂದ ಪಟ್ಟಣದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ವಿಶ್ವ ಹಿಂದು ಪರಿಷತ್ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್ ಮಾತನಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಎಸ್‍ಡಿಪಿಐ, ಪಿಎಫ್‍ಐ ಮತ್ತು ಸಿಎಫ್‍ಐ ಗೂಂಡಾಗಳು ಹಲ್ಲೆ, ಕೊಲೆ ಮುಂತಾದ ಕಾನೂನು ಬಾಹೀರ ಚಟುವಟಿಕೆಗಳನ್ನು ಮಾಡುತ್ತಾ ಬಂದಿರುತ್ತಾರೆ. ಇದರ ಮುಂದುವರೆದ ಭಾಗವಾಗಿ ಭಾನುವಾರು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನನ್ನು ಅಮಾನುಷವಾಗಿ ಹತ್ಯೆ ಮಾಡಿರುವುದನ್ನು ಸಂಘಟನೆ ಖಂಡಿಸುತ್ತದೆ. ದೇಶದಲ್ಲಿ ಶಾಂತಿ ಕದಡಲು ಜಿಯಾದಿಗಳು ನಾನಾ ರೀತಿಯ ಷಡ್ಯಂತ್ರ ರೂಪಿಸುತ್ತಿದ್ದಾರೆ. ದೇಶ ವಿರೋಧಿ ಕೃತ್ಯದಲ್ಲಿ ತೊಡಗಿರುವ ಎಸ್‍ಡಿಪಿಐ, ಪಿಎಫ್‍ಐ ಮತ್ತು ಸಿಎಫ್‍ಐನಂತ ಮೂಲಭೂತವಾದಿ ಸಂಘಟನೆಗಳನ್ನು ದೇಶದಲ್ಲಿ ನಿಷೇದಿಸಬೇಕು. ಹತ್ಯೆಗೀಡಾದ ಹರ್ಷ ಕುಟುಂಬಸ್ಥರಿಗೆ ಸರ್ಕಾರ 20 ಲಕ್ಷ ರೂ.,ಗೂ ಅಧಿಕ ಮೊತ್ತವನ್ನು ಪರಿಹಾರವಾಗಿ ನೀಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ಮಾತನಾಡಿ, ಸಮಾಜಘಾತುಕ ಶಕ್ತಿಗಳನ್ನು ಮಟ್ಟಹಾಕಬೇಕಾದ ತುರ್ತು ಅಗತ್ಯವಿದೆ. ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ತಕ್ಷಣವೇ ಅವರನ್ನು ಬಂಧಿಸಬೇಕು. ಕೃತ್ಯಕ್ಕೆ ಸಹಕಾರ ನೀಡಿದವರನ್ನು ಜೊತೆಗೆ ಸಮರ್ಥನೆ ಮಾಡಿಕೊಳ್ಳುತ್ತಿರುವವರನ್ನು ಬಂಧಿಸಬೇಕು. ಕೃತ್ಯದಲ್ಲಿ ತೊಡಗಿದವರಿಗೆ ಅತ್ಯುಗ್ರವಾದ ಗಲ್ಲು ಶಿಕ್ಷೆಯನ್ನು ವಿಧಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಇತ್ತೀಚಿನ ದಿನಗಳಲ್ಲಿ ಇದರಿಂದ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಎಲ್ಲಾ ಪ್ರಯತ್ನಗಳನ್ನು ಎಸ್‍ಡಿಪಿಐ, ಪಿಎಫ್‍ಐ ಮತ್ತು ಸಿಎಫ್‍ಐ ಸಂಘಟನೆಗಳು ಮಾಡುತ್ತಿದ್ದು, ಹರ್ಷನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಿಬೇಕು ಹಾಗೂ ಮೂಲಭೂತವಾದಿ ಮುಸ್ಲಿಂ ಸಂಘಟನೆಗಳನ್ನು ನಿಷೇಧಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು. ಒಂದು ವೇಳೆ ಕೊಲೆ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸದಿದ್ದಲ್ಲಿ ವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ಇನ್ನಿತರ ಹಿಂದೂ ಸಂಘಟನೆಗಳು ಉಗ್ರವಾದ ಹೋರಾಟವನ್ನು ಮಾಡುವುದು ಅನಿವಾರ್ಯವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಎಚ್.ಎಲ್. ಚಂದನ್, ತಾಲೂಕು ಉಪಾಧ್ಯಕ್ಷ ಹರೀಶ್ ಭಟ್, ನಗರ ಕಾರ್ಯದರ್ಶಿ ರವಿ ಗುಡಿಗಾರ್, ಬಜರಂಗದಳ ತಾಲೂಕು ಸಂಚಾಲಕ ರಂಗನಾಥ ಮೊಗವೀರ್, ನಗರ ಸಂಚಾಲಕ ಬಿ. ಶಶಿಕುಮಾರ್, ಕಾರ್ಯಕರ್ತರಾದ ಲೋಕೇಶ್, ಅರುಣ್ ಕುಮಾರ್, ಆನಂದ, ರೋಹಿತ್, ಕಾರ್ತಿಕ್, ರಾಘು, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಮುಖಂಡರಾದ ಎಂ.ಕೆ. ಯೋಗೇಶ್, ದೇವೇಂದ್ರಪ್ಪ, ಸಂಜೀವ್ ಆಚಾರ್, ಮೋಹನ್ ಹಿರೇಶಕುನ, ಆಶೀಕ್ ನಾಗಪ್ಪ, ಪ್ರಸನ್ನ ಶೇಟ್, ಸುನೀಲ್ ಬರದವಳ್ಳಿ, ರಾಜು, ರಮೇಶ್, ಮಂಜುನಾಥ್, ಕನಕದಾಸ ಕಲ್ಲಬಿ, ಅಶೋಕ್ ಶೇಠ್, ಶಿವಕುಮಾರ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ
ಸಂಗೀತ ವಿವಿಯಲ್ಲಿ ಕೋರ್ಸ್ ಆರಂಭ: ಕುಲಪತಿ ನಾಗೇಶ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.