24ರಿಂದ ಪಾರ್ಕ್ ಉಳಿವಿಗಾಗಿ ಅನಿರ್ದಿಷ್ಟಾವಧಿ ಧರಣಿ
Team Udayavani, Feb 22, 2022, 2:43 PM IST
ಹಾಸನ: ನಗರದ ಮಹಾರಾಜ ಪಾರ್ಕ್‌ನಲ್ಲಿ ಕಾಂಕ್ರೀಟ್ ಕಾಮಗಾರಿಗಳನ್ನು ನಿಲ್ಲಿಸಲು ಜಿಲ್ಲಾಡಳಿತವು ಕ್ರಮಕೈಗೊಳ್ಳಬೇಕು ಇಲ್ಲದಿದ್ದರೆಗುರುವಾರದಿಂದ ಪಾರ್ಕ್‌ನಲ್ಲಿಯೇ ನಿರಂತರಧರಣಿ ನಡೆಸಲು ಮಹಾರಾಜ ಪಾರ್ಕ್ ಹಿತರಕ್ಷಣಾ ಸಮಿತಿ ನಿರ್ಧರಿಸಿದೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿದ ಹೋರಾಟಗಾರರು,ಮಹಾರಾಜ ಪಾರ್ಕ್‌ನಲ್ಲಿ ಕಾಂಕ್ರಿಟೀಕರಣ ಬೇಡ,ಹಸಿರೀಕರಣ ಇರಲಿ ಎಂದು ಅನೇಕ ಬಾರಿ ಸಭೆ ನಡೆಸಿ ಮನವಿ ಸಲ್ಲಿಸಿದರೂ ಸಂಬಂಧಪಟ್ಟವರು ಸ್ಪಂದಿಸಿಲ್ಲ. ಇನ್ನು 3 ದಿನ ಕಾದು ನೋಡಿ ಗುರುವಾರದಿಂದ ಪಾರ್ಕ್‌ನಲ್ಲಿಯೇ ಅನಿರ್ದಿಷ್ಟಾವಧಿಯ ಧರಣಿ ಹಮ್ಮಿಕೊಳ್ಳಲು ತೀರ್ಮಾನಿಸಿದ್ದಾರೆ.
ಗುರುವಾರದೊಳಗೆ ಜಿಲ್ಲಾಡಳಿತವು ಪಾರ್ಕ್‌ನಲ್ಲಿ ಕಾಂಕ್ರೀಟ್ ಕಾಮಗಾರಿಗಳನ್ನು ನಿಲ್ಲಿಸಿರುವುದಾಗಿ ಖಚಿತಪಡಿಸಿದರೆ ಧರಣಿ ನಡೆಸುವುದಿಲ್ಲ. ಇಲ್ಲದಿದ್ದರೆ ಮಹಾರಾಜ ಪಾರ್ಕ್ ಉಳಿಸಿ ಎಂಬ ಘೋಷಣೆಯೊಂದಿಗೆ ಗುರುವಾರದಿಂದ ಧರಣಿ ನಡೆಸಲಾಗುವುದು. ಈ ಹೋರಾಟದ ಸಮಯದಲ್ಲಿ ಯಾವುದೇ ತೊಂದರೆಯಾದರೂ ಅದರ ಪೂರ್ಣ ಜವಾಬ್ದಾರಿ ಜಿಲ್ಲಾಡಳಿತವೇ ಹೊರಬೇಕಾಗುತ್ತದೆ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಇನ್ನು ಮುಂದೆ ಯಾವ ಸಭೆಯನ್ನು ಮಾಡದೇ ಮಹಾರಾಜ ಪಾರ್ಕ್ ಉಳಿಸಿ ಎಂಬಕರಪತ್ರವನ್ನು ಮುದ್ರಿಸಿ ಅದರಲ್ಲಿ ಸರ್ಕಾರದ ನ್ಯೂನತೆಗಳನ್ನು ವಿವರಿಸಲಾಗುವುದು. ಪಾರ್ಕ್‌ಉಳಿಸುವ ಹೋರಾಟಕ್ಕೆ ಜಿಲ್ಲಾಡಳಿತ ಸ್ಪಂದಿಸದಿರುವುದು, ರಾಜಕಾರಣಿಗಳು ಕೂಡ ಗಮನಕೊಡದ ಕಾರಣ ಮರಗಳನ್ನು ತಬ್ಬಿಕೊಳ್ಳುವಪರಿಸ್ಥಿತಿ ಬಂದಿದೆ ವಿಚಾರಗಳನ್ನು ಕರಪತ್ರದಲ್ಲಿ ಮುದ್ರಿಸಿ ಜನರ ಗಮನ ಸೆಳೆಯಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್, ಸಮಾಜಸೇವಕ ವೈ.ಎಸ್. ವೀರಭದ್ರಪ್ಪ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ, ಜೆಡಿಎಸ್ ಹಾಸನ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ,ಡಾ. ರಾಜಕುಮಾರ್ ಅಭಿಮಾನಿ ಸಂಘದ ಗೌರವಾಧ್ಯಕ್ಷ ಬಾಳ್ಳುಗೋಪಾಲ್, ನಾಗರಾಜ್‌ಹೆತ್ತೂರು, ಸಂಘಟನೆಯ ಮುಖಂಡರಾದಧರ್ಮೇಶ್, ವೆಂಕಟೇಶ್, ಅಂಬುಗ ಮಲ್ಲೇಶ್ ,ಕೆಪಿಆರ್‌ಎಸ್. ಜಿಲ್ಲಾಧ್ಯಕ್ಷ ಎಚ್.ಆರ್. ನವೀನ್‌ಕುಮಾರ್, ಕೆ.ಟಿ. ಜಯಶ್ರೀ, ಸಿ. ಸುವರ್ಣಾ,ನಿರ್ಮಲಾ, ಬಾಳೆಹಣ್ಣು ವರ್ತಕರ ಸಂಘದ ಅಧ್ಯಕ್ಷಸಮೀರ್ ಅಹಮದ್, ಮುಬಾಶೀರ್ ಅಹಮದ್,ಜಾನೆಕೆರೆ ಹೇಮಂತ್, ಕರವೇ ತಾಲೂಕು ಅಧ್ಯಕ್ಷ ರಘುಗೌಡ ಇತರರು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.