ಈಶ್ವರಪ್ಪ ಹೇಳಿಕೆಗೆ ಕೈ ಕಾರ್ಯಕರ್ತರ ಆಕ್ರೋಶ
Team Udayavani, Feb 22, 2022, 3:06 PM IST
ಬಳ್ಳಾರಿ: ಕೆಂಪುಕೋಟೆ ಮೇಲೆ ಕೇಸರಿ ಬಾವುಟಹಾರಿಸುವುದಾಗಿ ಹೇಳಿರುವ ಸಚಿವ ಈಶ್ವರಪ್ಪ ವಿರುದ್ಧದೇಶದ್ರೋಹಿ ಪ್ರಕರಣ ದಾಖಲಿಸಬೇಕು ಎಂದುಆಗ್ರಹಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ನಗರದಲ್ಲಿಸೋಮವಾರ ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಗಡಿಗಿ ಚನ್ನಪ್ಪ ವೃತ್ತದಿಂದ ಪ್ರತಿಭಟನಾಮೆರವಣಿಗೆ ನಡೆಸಿದ ಪ್ರತಿಭಟನಾನಿರತರು, ರಾಜ್ಯಸರ್ಕಾರ, ಸಚಿವ ಈಶ್ವರಪ್ಪ ವಿರುದ್ಧ ವಿವಿಧ ಘೋಷಣೆಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಜಿಲ್ಲಾ ಧಿಕಾರಿಕಚೇರಿಗೆ ತಲುಪಿದ ಪ್ರತಿಭಟನಾಕಾರರು, ಕೆಲಕಾಲಪ್ರತಿಭಟನೆ ನಡೆಸಿದರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರಾಜ್ಯಸಭಾ ಸದಸ್ಯ ಡಾ| ಸೈಯದ್ ನಾಸೀರ್‌ಹುಸೇನ್ ಅವರು, ದೇಶದ್ರೋಹಿ ಹೇಳಿಕೆ ನೀಡಿರುವಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ.
ಇವರ ವಿರುದ್ಧ ಈಗಾಗಲೇ ಬೆಂಗಳೂರಿನಲ್ಲಿ ಮಾಜಿಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿವಿಧಾನಸೌಧದಲ್ಲಿ ಅಹೋರಾತ್ರಿ ಧರಣಿನಡೆಸಲಾಗುತ್ತಿದೆ. ಈಶ್ವರಪ್ಪ ಇಂಥ ಹೇಳಿಕೆ ಈಹಿಂದೆಯೂ ನೀಡಿದ್ದಾರೆ. ಈಶ್ವರಪ್ಪ ಹಿಜಾಬ್‌ವಿವಾದದ ಕುರಿತು ಹೇಳಿಕೆ ನೀಡುವ ಭರದಲ್ಲಿ ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ.
ಶಿವಮೊಗ್ಗದಲ್ಲಿ ರಾಷ್ಟ್ರ ಧ್ವಜಸ್ತಂಭಕ್ಕೆ ಕೇಸರಿ ಬಾವುಟಹಾರಿಸಿದ್ದಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ಇದುದೇಶ ದ್ರೋಹದ ಕೆಲಸ. ಹಾಗಾಗಿ ಇವರ ವಿರುದ್ಧದೇಶದ್ರೋಹದ ಪ್ರಕರಣ ದಾಖಲಿಸಬೇಕು.ಇವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದುಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.