ಶಾಂತಿ, ಭದ್ರತೆಗೆ ದೊಡ್ಡ ಅಪಾಯ: ಎಚ್.ಡಿ. ಕುಮಾರಸ್ವಾಮಿ
Team Udayavani, Feb 23, 2022, 6:40 AM IST
ಬೆಂಗಳೂರು: ರಾಜ್ಯದಲ್ಲಿ ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ಶಾಂತಿಯುತವಾಗಿದ್ದ ರಾಜ್ಯವು ಹಿಜಾಬ್, ಕೇಸರಿ ಶಾಲು ಹಾಗೂ ಈಗ ಶಿವಮೊಗ್ಗದಲ್ಲಿ ಯುವಕನೊಬ್ಬನ ಕೊಲೆ ಕಾರಣದಿಂದ ಇಡೀ ರಾಜ್ಯವೇ ಕುದಿಯುವ ಕುಲುಮೆಯಾಗಿದೆ. ಇಂಥ ಸೂಕ್ಷ್ಮ ಸಮಯದಲ್ಲಿ ರಾಜ್ಯಪಾಲರು ಮೌನವಾಗಿರುವುದು ಸರಿಯಲ್ಲ. ಅವರು ಯಾರ ಕೈಗೊಂಬೆಯೂ ಅಲ್ಲ, ಕೈಗೊಂಬೆ ಆಗಲೂ ಬಾರದು. ಹೀಗಾಗಿ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಿ ರಾಜ್ಯ ಸರಕಾರದಿಂದ ಮಾಹಿತಿ ಪಡೆದು ಕೇಂದ್ರ ಸಕರಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:ಪೋಲೋ, ವೆಂಟೋ ಕಾರುಗಳ ತಯಾರಿಕೆ ಸ್ಥಗಿತ?
ಸರಕಾರ ವಜಾ ಆಗುವ ಸ್ಥಿತಿ
ಕೇಂದ್ರ ಸರಕಾರವೇ ರಾಜ್ಯ ಸರಕಾರವನ್ನು ವಜಾ ಮಾಡುವಂಥ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಠಿ ಆಗಿದೆ. ಬಿಜೆಪಿ ಪಕ್ಷದ ಲೋಕಸಭಾ ಸದಸ್ಯರೊಬ್ಬರೇ ಸರಕಾರದ ಅಸಮರ್ಥತೆ ನಮಗೆ ನಾಚಿಕೆ ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ. ಜನರು ಕೂಡ ರೋಸಿ ಹೋಗಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿ ಆಗಿದೆ. .
ಹಿಜಾಬ್, ಕೇಸರಿ ಶಾಲು ಹಾಗೂ ಶಿವಮೊಗ್ಗದಲ್ಲಿ ನಡೆದ ಕೊಲೆಗೆ ಸರಕಾರದ ತಪ್ಪು ಹೆಜ್ಜೆಗಳೇ ಕಾರಣ. ಬಡವರ ಮನೆ ಮಕ್ಕಳನ್ನು ಇಂಥ ಘಟನೆಗಳು ಬಳಿ ತೆಗೆದುಕೊಳ್ಳುತ್ತವೆ. ಶ್ರೀಮಂತರ ಅಥವಾ ಮೇಲ್ಜಾತಿಯವರ ಮಕ್ಕಳು ಇಂಥ ಘಟನೆಗಳಲ್ಲಿ ಭಾಗಿಯಾಗುವುದಿಲ್ಲ. ಎರಡೂ ಹೊತ್ತು ಊಟಕ್ಕೂ ಕಷ್ಟ ಇರುವ ಬಡವರ ಮಕ್ಕಳು ಇಂಥ ಷಡ್ಯಂತ್ರಕ್ಕೆ ಬಲಿ ಆಗುತ್ತಿದ್ದಾರೆ.
– ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Road Mishaps: ಬೆಂಗಳೂರಿನಲ್ಲಿ ಬೈಕ್ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು
Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.