ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿಯಿಟ್ಟು ವಿಕೃತ ಕೇಕೆ ಹಾಕುತ್ತಿವೆ
ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸರಣಿ ಟ್ವೀಟ್
Team Udayavani, Feb 23, 2022, 11:42 AM IST
ಬೆಂಗಳೂರು: ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿಯಿಟ್ಟು ʼವಿಕೃತ ಕೇಕೆʼ ಹಾಕುತ್ತಿವೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು, ಶಿಕ್ಷಣದ ಕಾಶಿ ಕರ್ನಾಟಕದ ಶಾಲೆ-ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಸಿ ಮಕ್ಕಳಲ್ಲಿ ದ್ವೇಷದ ವಿಷವುಕ್ಕಿಸಲಾಗುತ್ತಿದೆ. ಎರಡು ವರ್ಷದಿಂದ ಕೋವಿಡ್ ಹೊಡೆತದಿಂದ ಮಲಗಿರುವ ವಿದ್ಯಾರಂಗವನ್ನು ಸರ್ವನಾಶ ಮಾಡುವ ಹುನ್ನಾರವಷ್ಟೇ ಇದು. ಬಡವರ ಮಕ್ಕಳು ಓದಿ ವಿದ್ಯಾವಂತರಾಗಬಾರದೇ? ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಾದ್ಯಂತ ʼರಾಜಕೀಯ ಕೊರೊನಾʼವನ್ನು ಹಬ್ಬಿಸುತ್ತಿವೆ. ಆ ಮೂಲಕ ಜನರ ಮನಸ್ಸುಗಳನ್ನು ಹಾಳು ಮಾಡುತ್ತಿವೆ. ಈ ಮಹಾಮಾರಿಗೆ ಲಸಿಕೆ ಇಲ್ಲ. ಜನರು ಈ ಹುನ್ನಾರವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಅಧಿಕೃತ ಪ್ರತಿಪಕ್ಷದ ಸ್ವಪ್ರತಿಷ್ಠೆ, ಆಡಳಿತ ಪಕ್ಷದ ಅಸಮರ್ಥತೆಗೆ ವಿಧಾನ ಕಲಾಪ ಆಪೋಶನವಾಯಿತು. ʼನಾನು ಹೊಡೆದಂಗೆ ಮಾಡುತ್ತೇನೆ, ನೀನು ಅತ್ತಂಗೆ ಮಾಡುʼ ಎನ್ನುವಂತೆ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಕುಮ್ಮಕ್ಕಾಗಿ ʼಕಲಾಪಕ್ಕೆ ಕುಣಿಕೆʼ ಬಿಗಿದು ಜನರ ಆಶೋತ್ತರಗಳನ್ನು ಸದನದಲ್ಲೇ ಸಮಾಧಿ ಮಾಡಿದವು. ನಿಗದಿತ ವೇಳಾಪಟ್ಟಿಗಿಂತ ಮೂರು ದಿನ ಮೊದಲೇ ಮುಗಿದ ಅಧಿವೇಶನದಲ್ಲಿ ಆರೂವರೆ ಕೋಟಿ ಕನ್ನಡಿಗರಿಗೆ ಸೊನ್ನೆ ಸುತ್ತಲಾಗಿದೆ. ಜನಪ್ರತಿನಿಧಿಗಳ ಕೇವಲ ಟಿಎ-ಡಿಎಗಾಗಿ ಮತ್ತು ವೇತನ, ಭತ್ಯೆ ಏರಿಸಿಕೊಳ್ಳಲಷ್ಟೇ ಅಧಿವೇಶನ ನಡೆದಿದೆ. ಜನರು ಏನೆಂದುಕೊಂಡಾರು? ಎಂಬ ಕನಿಷ್ಠ ಭಯವೂ ಇಲ್ಲದ ʼಆತ್ಮವಂಚನೆಯ ಪರಾಕಾಷ್ಠೆʼ ಇದು ಎಂದು ಟೀಕೆ ಮಾಡಿದ್ದಾರೆ.
ಇದನ್ನೂ ಓದಿ:ನಾಗಮಂಗಲ: ಚಲುವರಾಯಸ್ವಾಮಿ ಆಪ್ತ ಉದ್ಯಮಿ ಮನೆ- ಕಚೇರಿ ಮೇಲೆ ಐಟಿ ದಾಳಿ
ಹಿಜಾಬ್, ಕೇಸರಿ ಶಾಲು ಮತ್ತು ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ. ಇವೆಲ್ಲಾ ಯಾರಿಂದ ಯಾರಿಗಾಗಿ ನಡೆಯುತ್ತಿವೆ? ಈ ʼಟೂಲ್ʼಕಿಟ್ʼ ರೂವಾರಿಗಳು ಯಾರು? ಅಧಿವೇಶನವನ್ನು ಹಳ್ಳ ಹಿಡಿಸಿದ್ದಕ್ಕೂ ಈ ಎಲ್ಲಾ ಪ್ರತಿಗಾಮಿ ಘಟನೆಗಳಿಗೆ ಸಂಬಂಧ ಇದೆ ಎನ್ನುವ ಅನುಮಾನ ನನ್ನದು. ಸತ್ಯವೇನೆಂಬುದು ಜನರಿಗೆ ಗೊತ್ತಾಗಬೇಕು. ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ. ಶಾಂತಿಯನ್ನು ಕದಡಿದ ಪಾಪ ಸುಮ್ಮನೆ ಬಿಡುವುದಿಲ್ಲ. ಹಚ್ಚಹಸರಿನ ನಿರ್ಮಲ ಮಲೆನಾಡಿನಲ್ಲಿ ಹೊತ್ತಿ ಉರಿಯುತ್ತಿರುವ ʼದ್ವೇಷದಳ್ಳುರಿʼ ಇಡೀ ರಾಜ್ಯಕ್ಕೇ ಶಾಪವಾಗಿ ಪರಿಣಮಿಸಲಿದೆ ಎಂದು ಎಚ್ ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಅವರು ಯಾರ ಕೈಗೊಂಬೆಯೂ ಆಗಬಾರದು ಎಂದು ನಾನು ಮತ್ತೊಮ್ಮೆ ಆಗ್ರಹಿಸುತ್ತಿದ್ದೇನೆ. ಶಾಂತಿ-ಭದ್ರತೆ ನಿರ್ವಹಣೆಯಲ್ಲಿ ವಿಫಲವಾಗಿರುವ ಸರಕಾರಕ್ಕೆ ರಾಜ್ಯಪಾಲರು ಕಿವಿ ಹಿಂಡಲೇಬೇಕು ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.
ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿ ಇಟ್ಟು ʼವಿಕೃತ ಕೇಕೆʼ ಹಾಕುತ್ತಿವೆ. 1/8
— H D Kumaraswamy (@hd_kumaraswamy) February 23, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.