ಫೆ. 27: ಪೋಲಿಯೋ ರವಿವಾರ : 73,995 ಮಕ್ಕಳಿಗೆ ಲಸಿಕೆ ನೀಡುವ ಗುರಿ
Team Udayavani, Feb 23, 2022, 1:27 PM IST
ಉಡುಪಿ : ಜಿಲ್ಲೆಯಲ್ಲಿ ಫೆ. 27ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು 73,995 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅಂದು ಬೆಳಗ್ಗೆ 8ಕ್ಕೆ ಉಡುಪಿಯ ಸರಕಾರಿ ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಜಿಲ್ಲೆಯ ಐದು
ವರ್ಷದೊಳಗಿನ ಗ್ರಾಮೀಣ ಭಾಗದ 61,105 ಹಾಗೂ ನಗರ ಪ್ರದೇಶದ 12,890 ಮಕ್ಕಳು ಲಸಿಕೆ ಪಡೆಯಲು ಅರ್ಹರಿದ್ದಾರೆ. 662 ಲಸಿಕೆ ಕೇಂದ್ರಗಳನ್ನು ತೆರೆಯಲಾಗುವುದು. 6 ಮೊಬೈಲ್ ಟೀಮ್ ಮತ್ತು ಬಸ್, ರೈಲು ನಿಲ್ದಾಣ ಸೇರಿದಂತೆ ಜನ ನಿಬಿಡ ಪ್ರದೇಶದಲ್ಲಿ 36 ಟ್ರಾನ್ಸಿಟ್ ಬೂತ್, ಟೋಲ್‌ಗೇಟ್‌ಗಳಲ್ಲಿಯೂ ಲಸಿಕೆ ಕೇಂದ್ರ ತೆರೆಯಲಿದ್ದೇವೆ. ಫೆ. 28ರಿಂದ ಮಾ. 2ರ ವರೆಗೆ ಸ್ವಯಂ ಸೇವಕರು ವಿವಿಧ ಭಾಗಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಅರ್ಹ ಮಕ್ಕಳಿಗೆ ಲಸಿಕೆ ಹಾಕಿಸಿರುವ ಬಗ್ಗೆ ಖಚಿತಪಡಿಸಲಿದ್ದಾರೆ ಎಂದರು.
ಸದ್ಯ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣ ಪತ್ತೆಯಾಗಿಲ್ಲ. ಆದರೆ ಪಾಕಿಸ್ಥಾನ ಹಾಗೂ ಅಫ್ಘಾನಿಸ್ಥಾನದಲ್ಲಿ ಪ್ರಕರಣ ಕಾಣಿಸಿಕೊಂಡಿರುವುದರಿಂದ ನಮ್ಮಲ್ಲೂ ಲಸಿಕೆ ಅಭಿಯಾನ ನಡೆಸಬೇಕಿದೆ ಎಂದು ತಿಳಿಸಿದರು.
ಜಿ.ಪಂ. ಸಿಇಒ ಡಾ| ವೈ. ನವೀನ್ ಭಟ್ ಪತ್ರಿಕಾಗೋಷ್ಠಿಯಲ್ಲಿದ್ದರು.
ಲಸಿಕೆಅಭಿಯಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆ. 27ರಿಂದ ಮಾ. 2ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯ ಕ್ರಮ ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ 1,54,023 ಮಕ್ಕಳನ್ನು ಗುರುತಿಸಲಾಗಿದ್ದು, ಗುರಿ ಸಾಧನೆಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಇದನ್ನೂ ಓದಿ : ಉಕ್ರೇನ್‌ನಿಂದ ಕೇವಲ 20 ಕಿಮೀ ದೂರದಲ್ಲಿದೆ ರಷ್ಯಾ ಪಡೆಗಳು! ಇಲ್ಲಿದೆ ಉಪಗ್ರಹ ಚಿತ್ರಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.