ರಷ್ಯಾ- ಉಕ್ರೇನ್ ಸಂಘರ್ಷ: ಗೋವಾದಲ್ಲಿ ಪ್ರತಿಕೂಲ ಪರಿಣಾಮ
Team Udayavani, Feb 23, 2022, 8:02 PM IST
ಪಣಜಿ: ಯುದ್ಧ ಅಥವಾ ಯುದ್ಧದಂತಹ ಪರಿಸ್ಥಿತಿಯು ಮೊದಲು ಪ್ರವಾಸೋದ್ಯಮ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ. ಕೋವಿಡ್ ನಿಂದಾಗಿ ಎರಡು ವರ್ಷಗಳಿಂದ ಪ್ರವಾಸೋದ್ಯಮ ವ್ಯವಹಾರವು ಮಂದಗತಿಯಲ್ಲಿ ಸಾಗಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಪರಿಸ್ಥಿತಿ ಅಥವಾ ಯುದ್ಧವು ಗೋವಾದ ಪ್ರವಾಸೋದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆತಂಕ ಹೆಚ್ಚಾಗಿದೆ.
ಗೋವಾ ರಾಜ್ಯಕ್ಕೆ ಉಕ್ರೇನ್ಗಿಂತ ರಷ್ಯಾದಿಂದ ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಕಳೆದ ನವೆಂಬರ್ ಮತ್ತು ಡಿಸೆಂಬರ್, ಎರಡೇ ತಿಂಗಳಲ್ಲಿ ರಷ್ಯಾದಿಂದ ಸುಮಾರು 2000 ಕ್ಕೂ ಹೆಚ್ಚು ಪ್ರವಾಸಿಗರು ಗೋವಾಕ್ಕೆ ಆಗಮಿಸಿದ್ದಾರೆ. ಇತರ ದೇಶಗಳಿಂದಲೂ ಗೋವಾಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಈ ಯುದ್ಧ ಪರಿಸ್ಥಿತಿಯಿಂದಾಗಿ ಗೋವಾಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾಗುವ ಭೀತಿ ಎದುರಾಗಿದೆ.
ರಷ್ಯಾ ದೇಶವು ಉಕ್ರೇನ್ನೊಳಗೆ ಸೇನೆಯನ್ನು ನಿಯೋಜಿಸಿದ್ದು, ಇದರಿಂದಾಗಿ ಎರಡೂ ದೇಶಗಳ ನಡುವಿನ ಯುದ್ಧದ ಸಾಧ್ಯತೆ ಹೆಚ್ಚಾಗಿದೆ. ಟೂರಿಸಂ ಬ್ಯುಸಿನೆಸ್ ಎಂಡ್ ಟೂರಿಸಂ ಅಸೋಸಿಯೇಶನ್ ಪ್ರಕಾರ ಅಂತರಾಷ್ಟ್ರೀಯ ಪ್ರವಾಸಿ ತಾಣವಾಗಿರುವ ಗೋವಾ ಇಂತಹ ಯುದ್ಧ ಪರಿಸ್ಥಿತಿಗೆ ತುತ್ತಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.