ರಾಜ್ಯದಲ್ಲಿ 10 ಕೋಟಿ ಕೋವಿಡ್ ಲಸಿಕೆ ವಿತರಣೆ
Team Udayavani, Feb 24, 2022, 6:25 AM IST
ಬೆಂಗಳೂರು: ರಾಜ್ಯದಲ್ಲಿ ಬುಧವಾರ 10 ಕೋಟಿ ಕೊರೊನಾ ಲಸಿಕೆ ವಿತರಿಸಿದ್ದು, ಮೊದಲ ಡೋಸ್ ವಿತರಣೆಯಲ್ಲಿ ಶೇ.100 ಹಾಗೂ ಎರಡನೇ ಡೋಸ್ ವಿತರಣೆಯಲ್ಲಿ ಶೇ.93ರಷ್ಟು ಗುರಿ ಸಾಧಿಸಲಾಗಿದೆ.
ರಾಜ್ಯದಲ್ಲಿ 7.65 ಲಕ್ಷ ಮಂದಿ ಆರೋಗ್ಯ ಕಾರ್ಯಕರ್ತರು ಪ್ರಥಮ, 7.48 ಲಕ್ಷ ಮಂದಿ ದ್ವಿತೀಯ, 3.30ಲಕ್ಷ ಮಂದಿ ಮುನ್ನೆಚ್ಚರಿಕೆ ಡೋಸ್ ಪಡೆದುಕೊಂಡಿದ್ದಾರೆ. ಮುಂಚೂಣಿ ಕಾರ್ಯಕರ್ತರಲ್ಲಿ 9.44ಲಕ್ಷ ಮಂದಿ ಪ್ರಥಮ ಹಾಗೂ 9.29ಲಕ್ಷ ಮಂದಿ ದ್ವಿತೀಯ ಡೋಸ್, 1.50ಲಕ್ಷ ಮಂದಿ ಮುನ್ನೆಚ್ಚರಿಕೆ ಡೋಸ್ ಹಾಕಿಸಿಕೊಂಡಿದ್ದಾರೆ.
ಇನ್ನೂ 15-17ವರ್ಷದೊಳಗಿನ 24.12 ಲಕ್ಷ ವಿದ್ಯಾರ್ಥಿಗಳು ಪ್ರಥಮ ಹಾಗೂ 14.12ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಡೋಸ್ ಪೂರ್ಣಗೊಳಿಸಿದ್ದಾರೆ.
ಉಳಿದಂತೆ 18-44ವರ್ಷದೊಳಗಿನ 2.91 ಕೋಟಿ ಪ್ರಥಮ ಹಾಗೂ 2.59ಕೋಟಿ ಮಂದಿ ದ್ವಿತೀಯ ಡೋಸ್ ಪಡೆದುಕೊಂಡಿದ್ದಾರೆ.
45ವರ್ಷ ಮೇಲ್ಪವರಲ್ಲಿ 1.88 ಕೋಟಿ ಪ್ರಥಮ, 1.78 ಕೋಟಿ ದ್ವಿತೀಯ ಡೋಸ್, 60ವರ್ಷ ಮೇಲ್ಪಟ್ಟವರಲ್ಲಿ 6.80 ಲಕ್ಷ ಮಂದಿ ಮುನ್ನೆಚ್ಚರಿಕೆ ಡೋಸ್ ಪಡೆದುಕೊಂಡಿದ್ದಾರೆ.
ಆ ಮೂಲಕ 5.20ಕೋಟಿ ಮಂದಿ ಮೊದಲ ಹಾಗೂ 4.68ಕೋಟಿ ಮಂದಿ ದ್ವಿತೀಯ, 11.61ಲಕ್ಷ ಮಂದಿ ಮುನ್ನೆಚ್ಚರಿಕೆ ಡೋಸ್ ಪಡೆಯುವ ಮೂಲಕ ರಾಜ್ಯಾದ್ಯಂತ ಒಟ್ಟು 10.01 ಕೋಟಿ ಡೋಸ್ ಲಸಿಕೆ ವಿತರಣೆಯಾಗಿದೆ.
ಈ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದ ಆರೋಗ್ಯ ಕಾರ್ಯಕರ್ತರನ್ನು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.