ಕೊಲೆ ಆರೋಪಿಗಳ ಬಂಧನಕ್ಕೆ ಒತ್ತಾಯ
Team Udayavani, Feb 24, 2022, 11:01 AM IST
ಆಳಂದ: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಗ್ರಾಮದವರಾದ ಭಾರತೀಯ ಅರೆಸೇನಾ ಪಡೆಯಲ್ಲಿ ಬಿಎಸ್‌ಫ್ ಸೇವಾ ನಿರತರಾಗಿರುವ ಯೋಧ ಅಮರೇಶ ಅವರ ತಾಯಿ ಹತ್ಯೆಯಾಗಿರುವ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೈನಿಕರ ಅಭಿವೃದ್ಧಿ ಸಂಘ ಒತ್ತಾಯಿಸಿದೆ.
ತಹಶೀಲ್ದಾರ್, ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಸಂಘದ ಅಧ್ಯಕ್ಷ ಮಾಣಿಕರಾವ್ ಎಸ್. ಬಿರಾದಾರ ನೇತೃತ್ವದಲ್ಲಿ ಪ್ರಮುಖರು ಈ ಕುರಿತು ಮನವಿ ಸಲ್ಲಿಸಿ, ಒತ್ತಾಯಿಸಿದರು.
ಯೋಧ ಅಮರೇಶ ರಜೆ ಮೇಲೆ ಊರಿಗೆ ಬಂದಾಗ ಅವರ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ಅವರ ತಾಯಿಯನ್ನು ಕೊಲೆ ಮಾಡಲಾಗಿದೆ. ಆದ್ದರಿಂದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಪ್ರಮುಖ ಸಿದ್ಧಲಿಂಗಪ್ಪ ಮಲಶೆಟ್ಟಿ, ಈರಣ್ಣಾ ಹೂಗಾರ, ಹನುಮಂತ ಪಾಟೀಲ, ಶಶಿ ಯಳಮೇಲಿ, ರಾಜು ಕೋರಳ್ಳಿ ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.