5ಎ ಕಾಲುವೆ ಜಾರಿಗೆ ಆಗ್ರಹಿಸಿ ರೈತರ ಪ್ರತಿಭಟನೆ
Team Udayavani, Feb 24, 2022, 1:04 PM IST
ಮಸ್ಕಿ: ಎನ್‌ಆರ್‌ಬಿಸಿ 5ಎ ಶಾಖಾ ಕಾಲುವೆ ಜಾರಿಗೆ ಆಗ್ರಹಿಸಿ ರೈತರು ಬುಧವಾರ ಪ್ರತಿಭಟನೆ ನಡೆಸಿದರು. ಕಳೆದ 13 ವರ್ಷಗಳಿಂದ ಎನ್ ಆರ್‌ಬಿಸಿ 5ಎ ಕಾಲುವೆ ಯೋಜನೆ ಜಾರಿ ಮಾಡುವಂತೆ ರೈತರು ಹೋರಾಟ ಆರಂಭಿಸಿದ್ದಾರೆ. ರೈತರು ನಡೆಸುತ್ತಿರುವ ಅನಿರ್ಧಿಷ್ಠ ಧರಣಿಯೂ 461 ದಿನ ಪೂರೈಸಿದ್ದು, ಇದರ ಅಂಗವಾಗಿ ಮಸ್ಕಿಯಲ್ಲಿ ಬೃಹತ್ ರ್ಯಾಲಿ ನಡೆಸಿ ಬಸವೇಶ್ವರ ವೃತ್ತದ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.
ಹೋರಾಟ ಸಮಿತಿ ಅಧ್ಯಕ್ಷ ಬಸನಗೌಡ ಹರ್ವಾಪೂರ ಮಾತನಾಡಿ, ನಾರಾಯಣಪುರ ಬಲದಂಡೆಯೊಂದರ 5ಎ ಪಾಮನಕಲ್ಲೂರು ಶಾಖಾ ಕಾಲುವೆ ಅನುಷ್ಠಾನ ಮಾಡುವಂತೆ ಸತತವಾಗಿ ಹೋರಾಟ ಮಾಡಲಾಗುತ್ತಿದೆ. ಆದರೆ, ಸರಕಾರಗಳು ರೈತರ ಹೋರಾಟದ ಬಗ್ಗೆ ಗಮನ ಹರಿಸುತ್ತಿಲ್ಲ. ಇದರ ಬದಲಾಗಿ ರೈತರಿಗೆ ನೀರು ಸಿಗದೇ ಇರುವ ಅವೈಜ್ಞಾನಿಕ ಯೋಜನೆಯಾದ ವಟಗಲ್ ಬಸವೇಶ್ವರ ಏತ ನೀರಾವರಿ ಯೋಜನೆ ಜಾರಿ ಮಾಡಲು ಮುಂದಾಗಿದ್ದಾರೆ. ಇದಕ್ಕೆ ರೈತರ ವಿರೋಧವಿದ್ದು, 5ಎ ಶಾಖಾ ಕಾಲುವೆಯನ್ನೇ ಜಾರಿ ಮಾಡಬೇಕು ಎನ್ನುವ ಬೇಡಿಕೆ ಇದೆ. ಈ ಯೋಜನೆ ಜಾರಿಯಾದರೆ ಮಸ್ಕಿ ತಾಲೂಕು ಸಂಪೂರ್ಣ ನೀರಾವರಿಯಾಗಲಿದೆ. ವಟಗಲ್, ಅಮಿನಗಡ, ಪಾಮನಕಲ್ಲೂರು, ಅಂಕುಶದೊಡ್ಡಿ ಪಂಚಾಯಿತಿ ವ್ಯಾಪ್ತಿಯ ಸುಮಾರು 30 ಹಳ್ಳಿಗಳಿಗೆ ನೀರು ದೊರೆಯಲಿದೆ. ಹೀಗಾಗಿ ಸರಕಾರ ಪ್ರಸಕ್ತ ಬಜೆಟ್‌ನಲ್ಲಿ ಈ ಯೋಜನೆಗೆ 500 ಕೋಟಿ ರೂ. ಮೀಸಲಿಟ್ಟು ಕಾಲುವೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹೋರಾಟ ಸಮಿತಿ ಗೌರವ ಅಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ, ಮುಖಂಡರಾದ ಶಿವಕುಮಾರ ವಟಗಲ್, ನಾಗರೆಡ್ಡಿ ಬುದ್ದಿನ್ನಿ, ಮಲ್ಲರೆಡ್ಡಿ, ಮಲ್ಲೇಶಗೌಡ, ಶಿವರುದ್ರಪ್ಪ, ರಾಘವೇಂದ್ರ ನಾಯಕ, ಸುಖಮುನಿಯಪ್ಪ ಸೇರಿ ನೂರಾರು ರೈತರು ಹೋರಾಟದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.