ಜೈವಿಕ ಕೃಷಿಯಿಂದ ಮಣ್ಣಿನ ಆರೋಗ್ಯ ರಕ್ಷಣೆ


Team Udayavani, Feb 24, 2022, 1:14 PM IST

15soild

ರಾಯಚೂರು: ಮನುಷ್ಯನ ಮತ್ತು ಮಣ್ಣಿನ ಆರೋಗ್ಯ ದೃಷ್ಟಿಯಿಂದ ಭವಿಷ್ಯದಲ್ಲಿ ಸಾವಯವ ಕೃಷಿ ಅನಿವಾರ್ಯವಾಗಲಿದ್ದು, ಈ ನಿಟ್ಟಿನಲ್ಲಿ ಜೈವಿಕ ನಿಯಂತ್ರಣ ವಿಭಾಗವು ಸಂಶೋಧನೆ ನಡೆಸಲಿದೆ ಎಂದು ಜೈವಿಕ ನಿಯಂತ್ರಣ ವಿಭಾಗದ ಮುಖ್ಯಸ್ಥ ಡಾ| ಅರುಣಕುಮಾರ ಹೊಸಮನಿ ಹೇಳಿದರು.

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಜೈವಿಕ ನಿಯಂತ್ರಣ ವಿಭಾಗ ಮುಖ್ಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಬುಧವಾರ ಏರ್ಪಡಿಸಿದ್ದ ರೈತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೃಷಿಯಲ್ಲಿನ ಕೀಟಗಳ ಪರಿಣಾಮಕಾರಿಯಾದ ನಿಯಂತ್ರಣ ಸಾಧ್ಯವಿದೆ. ಹಲವಾರು ಸಂಶೋಧನೆಗಳ ಫಲವಾಗಿ ವಿಶ್ವವಿದ್ಯಾಲಯದ ಜೈವಿಕ ನಿಯಂತ್ರಣ ಕೇಂದ್ರದಲ್ಲಿ ಕೆಲ ಉತ್ಪನ್ನಗಳನ್ನು ರೈತರಿಗೆ ವಿತರಿಸಲಾಗಿದೆ. ಬೆವೆರಿಯಾ, ಮೆಟರಿಸಂ, ಲೆಕ್ಯಾನಿ ವರ್ಟಿಸಿಲಿಯಂ, ಎರೆ ಜಲ ಮುಂತಾದ ಜೈವಿಕ ನಿಯಂತ್ರಣ ಉತ್ಪನ್ನಗಳು ರೈತರ ವಿಶ್ವಾಸವನ್ನು ಗೆದ್ದಿವೆ. ಉತ್ಪಾದನಾ ಪ್ರಮಾಣ ದ್ವಿಗುಣಗೊಂಡಿದ್ದು, ಬೇಡಿಕೆಗೆ ತಕ್ಕಂತೆ ಪೂರೈಸಲಾಗುತ್ತಿಲ್ಲ ಎಂದರು. ದಿನಗಳೆದಂತೆ ಹೊಸ ಕೀಟಗಳು ಹುಟ್ಟುತ್ತಲೇ ಇದ್ದು, ಅದಕ್ಕೆ ತಕ್ಕ ಸಂಶೋಧನೆಗಳನ್ನು ನಿರಂತರವಾಗಿ ಕೈಗೊಳ್ಳಲಾಗಿದೆ. ರೈತರ ಪ್ರತಿಕ್ರಿಯೆ ಆಧರಿಸಿ ಉತ್ಪನ್ನ ತಯಾರಿಸಲಾಗುತ್ತಿದೆ. ರಸಾಯನಿಕ ಯುಕ್ತ ಬೇಸಾಯ ವಿಧಾನವನ್ನು ರೈತರು ನಿಧಾನವಾಗಿ ಕೈಬಿಡುತ್ತಿದ್ದಾರೆ ಎಂದರು.

ಸ್ನಾತಕೋತ್ತರ ವಿಭಾಗದ ಡೀನ್‌ ಡಾ| ಭೀಮಣ್ಣ ಮಾತನಾಡಿ, ಜೈವಿಕ ಪರಿಕರಗಳು ರೈತರಿಗೆ ಹೆಚ್ಚಿನ ಲಾಭ ತಂದುಕೊಡಲಿವೆ. ಮುಖ್ಯವಾಗಿ ಮಣ್ಣನ್ನು ಶ್ರೀಮಂತಗೊಳಿ ಸುವುದು ಅಗತ್ಯ. ಇಲ್ಲದಿದ್ದರೆ, ಜೈವಿಕ ಪರಿಕರಗಳಾಗಲಿ ರಸಾಯನಿಕಗಳಾಗಲಿ ನಿರೀಕ್ಷಿತ ಪ್ರಮಾಣದಲ್ಲಿ ಕೆಲಸ ಮಾಡುವುದಿಲ್ಲ. ಹೊಲದಲ್ಲಿನ ಬೆಳೆಗಳ ಉಳಿಕೆಗಳನ್ನು ಮಣ್ಣಿಗೆ ಮಿಶ್ರಗೊಳಿಸಬೇಕು ಎಂದರು.

ಸಾವಯವ ಉತ್ಪಾದಕ ರೈತ ಶರಣಬಸವ ಪಾಟೀಲ್‌ ಮಾತನಾಡಿ, ರಸಾಯನಿಕ ಮುಕ್ತ ಕೃಷಿಯಲ್ಲಿ ತಾಳ್ಮೆ ಇದ್ದವರು ಗೆಲ್ಲುತ್ತಾರೆ. ಕ್ಯಾನ್ಸರ್‌ ರೋಗಿಗಳ ಪ್ರಮಾಣ ಹೆಚ್ಚಬಹುದು. ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಪರಿಸ್ಥಿತಿ ಕೈ ಮೀರಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಕೃಷಿ ವಿಜ್ಞಾನಿ ಡಾ| ಶಿವಕುಮಾರ ಜಿ., ಕೀಟ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಪ್ರಭುರಾಜ, ಡಾ| ಎ.ಜಿ. ಶ್ರೀನಿವಾಸ, ಡಾ|ಪ್ರಮೋದ ಕಟ್ಟಿ, ವಿಸ್ತರಣಾ ಸಲಹಾ ಸಮಿತಿ ಸದಸ್ಯ ಡಾ| ಎನ್‌.ಡಿ. ಚಾರಿ ಮಾತನಾಡಿದರು. ಪ್ರಗತಿಪರ ರೈತರಾದ ಅಮರೇಗೌಡ, ರಮೇಶ ಬೋಸ್‌, ಬೆಟ್ಟದೂರು ಶರಣಬಸವ, ವೆಂಕಟೇಶ ರೆಡ್ಡಿ ಇತರರು ಜೈವಿಕ ಪರಿಕರಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.